ಕಳಪೆ ಬೀಜ, ಬೆಳೆ ನಾಶದ ದೂರು ಬಂದರೆ ಅಧಿಕಾರಿಗಳೇ ಹೊಣೆ: ಸಿಎಂ ಸಿದ್ದರಾಮಯ್ಯ

Date:

  • ‘ರೈತರಿಗೆ ಗುಣಮಟ್ಟದ ಬೀಜ, ಅಗತ್ಯ ರಸಗೊಬ್ಬರ ಕೊರತೆ ಆಗದಂತೆ ನೋಡಿಕೊಳ್ಳಿ’
  • ‘ಫೀಲ್ಡ್ ವರ್ಕ್ ಮಾಡುವುದು ಕಡ್ಡಾಯ; ಜನಸಾಮಾನ್ಯರ ಜತೆ ಸೌಜನ್ಯದಿಂದ ವರ್ತಿಸಿ’

ಮುಂಗಾರು ಆರಂಭವಾಗುತ್ತಿದ್ದಂತೆ ಕೃಷಿ ಚಟುವಟಿಕೆ ಚುರುಕಾಗುತ್ತದೆ. ಇದಕ್ಕೆ ತಕ್ಕಂತೆ ಅಗತ್ಯ ಸಿದ್ದತೆ ಮಾಡಿಕೊಳ್ಳಿ. ಲೋಪಗಳಾದರೆ ನೀವೇ ಹೊಣೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅಧಿಕಾರಿಗಳಿಗೆ ಎಚ್ವರಿಕೆ ನೀಡಿದರು.

ಶನಿವಾರ ಮೈಸೂರು ಜಿಲ್ಲಾ ಪಂಚಾಯಿತಿ ಆವರಣದಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳ ಸಭೆ ನಡೆಸಿದ ಅವರು, “ನಾಡಿನ ಜನ ಬದಲಾವಣೆ ಬಯಸಿ ಸರ್ಕಾರವನ್ನು ಬದಲಾಯಿಸಿದ್ದಾರೆ. ಜನರ ನಿರೀಕ್ಷೆಗೆ ತಕ್ಕಂತೆ ದಕ್ಷವಾಗಿ, ಚುರುಕಾಗಿ ಕೆಲಸ ಮಾಡಿ. ಹೆಚ್ಚೂ ಕಡಿಮೆ ಆದರೆ ನಿಮ್ಮಗಳ ಮೇಲೆ ಕ್ರಮ ಜರುಗಿಸುವುದು ಅನಿವಾರ್ಯವಾಗುತ್ತದೆ” ಎಂದರು.

“ಕೆಡಿಪಿ ಸಭೆಗಳಿಗೆ ಸಂಪೂರ್ಣ ಫೀಲ್ಡ್ ವರ್ಕ್ ಮಾಡಿದ ವರದಿ ಸಮೇತ ಸಮಗ್ರ ಮಾಹಿತಿಯೊಂದಿಗೆ ಬರಬೇಕು. ಕೈ ಬೀಸಿಕೊಂಡು ಬರಬಾರದು. ಕೃಷಿ ಕೆಲಸ ಇದ್ದಾಗ ರೈತರನ್ನು ಕಚೇರಿಗಳಿಗೆ ಅಲೆಯುವಂತೆ ಮಾಡಬೇಡಿ. ಬೀಜ, ಗೊಬ್ಬರ, ಕೀಟನಾಶಕ ಅಗತ್ಯ ಪ್ರಮಾಣದಲ್ಲಿ ಶೇಖರಿಸಿಟ್ಟುಕೊಂಡು ರೈತರಿಗೆ ನೆರವಾಗಿ. ಯಾವುದಕ್ಕೂ ಹಣದ ಕೊರತೆ ಇಲ್ಲ. ನಿಮ್ಮಲ್ಲಿ ಕೊರತೆ ಇದ್ದರೆ ನಮಗೆ ಕೇಳಿ. ನಿಮ್ಮಿಂದ ಏನೇ ಲೋಪ ಆಗಿ ಬೆಳಗಳಿಗೆ ಮತ್ತು ರೈತರಿಗೆ ತೊಂದರೆ ಆದರೆ ನಿಮ್ಮನ್ನೇ ಹೊಣೆ ಮಾಡಲಾಗುವುದು” ಎಂದು ಕೃಷಿ ಮತ್ತು ನೀರಾವರಿ ಇಲಾಖೆ ಅಧಿಕಾರಿಗಳಿಗೆ ತಾಕೀತು ಮಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸಭೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಹೆಚ್‌ ಸಿ ಮಹದೇವಪ್ಪ ಮತ್ತು ಜಿಲ್ಲೆಯ ಎಲ್ಲ ಶಾಸಕರು ಉಪಸ್ಥಿತರಿದ್ದರು.

ಸಿಎಂ ಸಿದ್ದರಾಮಯ್ಯ

ಮುಖ್ಯಮಂತ್ರಿಗಳು ಅಧಿಕಾರಿಗಳಿಗೆ ಕೊಟ್ಟ ಸೂಚನೆಗಳು

  • ಕೆಡಿಪಿ ಸಭೆಗಳಿಗೆ ಒಂದು ದಿನ ಮುಂಚಿತವಾದರೂ ವರದಿಗಳನ್ನು ನೀಡಬೇಕು.
  • ಅಧಿಕಾರಿಗಳು ಕಡ್ಡಾಯವಾಗಿ ಫೀಲ್ಡ್ ವರ್ಕ್ ಮಾಡಬೇಕು.
  • ಬರೀ ಕಚೇರಿಯಲ್ಲಿ ಕುಳಿತು ವರದಿ ಸಿದ್ದಪಡಿಸಬಾರದು.
  • ಎಸ್ ಪಿ ಗಳು ಪೊಲೀಸ್ ಠಾಣೆಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಬೇಕು.
  • ಜಿಲ್ಲಾ ಮತ್ತು ವಿಭಾಗೀಯ ಮಟ್ಟದ ಅಧಿಕಾರಿಗಳು ಬಿಗಿಯಾಗಿದ್ದರೆ ನಿಮ್ಮ ಕೆಳಗಿನ ಅಧಿಕಾರಿಗಳು ಜವಾಬ್ದಾರಿಯಿಂದ ಇರುತ್ತಾರೆ. ನೀವೇ ಮೈಗಳ್ಳರಾದರೆ ಕೆಳಗಿನವರು ಸೋಮಾರಿಗಳಾಗುತ್ತಾರೆ.
  • ಠಾಣಾಧಿಕಾರಿ ಗಮನಕ್ಕೆ ಬಾರದಂತೆ ಠಾಣೆ ವ್ಯಾಪ್ತಿಯಲ್ಲಿ ರೌಡಿ ಚಟುವಟಿಕೆ, ಅಕ್ರಮ ಚಟುವಟಿಕೆಗಳು ನಡೆಯಲು ಸಾಧ್ಯವಿಲ್ಲ.
  • ಪೊಲೀಸರ ಬಗ್ಗೆ ರೌಡಿಗಳಿಗೆ ಭಯ ಇಲ್ಲದಿದ್ದರೆ ಪೊಲೀಸರು ಇದ್ದರೇನು, ಬಿಟ್ಟರೇನು?
  • ತಹಶೀಲ್ದಾರ್ ಕಚೇರಿಗಳಲ್ಲಿ ಎಷ್ಟು ಲಂಚ ನಡೆಯುತ್ತಿದೆ, ರೈತರಿಗೆ ಎಷ್ಟು ಗೋಳಾಡಿಸುತ್ತಿದ್ದಾರೆ ಎನ್ನುವುದು ಗೊತ್ತಾ ಜಿಲ್ಲಾಧಿಕಾರಿಗಳೇ?
  • ಕಳೆದ ವರ್ಷ ಬೆಳೆ ಹಾನಿ ಆದ ಎಲ್ಲರಿಗೂ ಸಮರ್ಪಕವಾಗಿ ಪರಿಹಾರ ವಿತರಿಸಬೇಕು.
  • ತಾಂತ್ರಿಕ ಸಮಸ್ಯೆ ಕಾರಣದಿಂದ ಯಾರಿಗಾದರೂ ಪರಿಹಾರ ದೊರಕದಿದ್ದರೆ, ಆದಷ್ಟು ಬೇಗ ಸಮಸ್ಯೆ ಬಗೆಹರಿಸಿ ಪರಿಹಾರ ವಿತರಿಸಿ.
  • ಗುಣಮಟ್ಟದ ಬೀಜ ಮತ್ತು ಅಗತ್ಯ ರಸಗೊಬ್ಬರ ಸಂಗ್ರಹ ಇರಬೇಕು.
  • ಜೂನ್ ಆರಂಭದಲ್ಲಿ ಬರಬೇಕಾದ ಮಳೆ ಬಂದಿಲ್ಲ. ಇದರಿಂದ ಕುಡಿಯುವ ನೀರು ಮತ್ತು ಬೆಳೆಗೆ ನೀರು ಕೊರತೆ ಆಗದಂತೆ ಮುಂಜಾಗ್ರತಾ ಕ್ರಮ ವಹಿಸಿ.
  • ಮಳೆ ಬರುವವರೆಗೆ ಬೆಳೆಗಳಿಗೆ ಅಗತ್ಯ ನೀರು ಒದಗಿಸಿ, ಬೆಳೆ ನಷ್ಟ ಆಗದಂತೆ ಕ್ರಮ ವಹಿಸಿ. ಪ್ರಥಮ ಆಧ್ಯತೆ ಕುಡಿಯುವ ನೀರಿಗೆ ಕೊಡಿ.
  • ಪ್ರತಿ ದಿನ ನೀರಿನ ಪ್ರಮಾಣದ ಮೇಲೆ ನಿಗಾ ವಹಿಸಿ. ಕುಡಿಯುವ ನೀರಿಗೆ ಕೊರತೆ ಆಗದಂತೆ ಸಿದ್ಧತೆ ಮಾಡಿಕೊಳ್ಳಿ.

ಗ್ಯಾರಂಟಿಗಳನ್ನು ಬಡವರಿಗೆ-ಮಧ್ಯಮ ವರ್ಗದವರಿಗೆ ತಲುಪಿಸಿ

“ನಮ್ಮ ಬಡವರು ಮತ್ತು ಮಧ್ಯಮ ವರ್ಗದವರು ಬಹಳ ಸಂಕಷ್ಟದಲ್ಲಿದ್ದಾರೆ. ಅವರ ಸಂಕಷ್ಟ ಕಡಿಮೆ ಆಗಲಿ ಎಂದು 5 ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದಿದ್ದೇವೆ. ಆದ್ದರಿಂದ ಅತ್ಯಂತ ಕಾಳಜಿ ವಹಿಸಿ ಹೆಚ್ಚಿನ ಕಾರ್ಯಕ್ಷಮತೆಯಿಂದ ಗ್ಯಾರಂಟಿ ಯೋಜನೆಗಳನ್ನು ಜನರಿಗೆ ತಲುಪಿಸಿ” ಎಂದು ಸಿದ್ದರಾಮಯ್ಯ ಅಧಿಕಾರಿಗಳಿಗೆ ಸೂಚನೆ ನೀಡಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...