ಬೆಳಗಾವಿ | ಮಗನ ಸುಟ್ಟ ದೇಹವನ್ನು ಕೈಚೀಲದಲ್ಲಿ ಹಾಕಿ ತಂದೆಯ ಕೈಗೆ ಕೊಟ್ಟ ಅಧಿಕಾರಿಗಳು: ವ್ಯಾಪಕ ಟೀಕೆ

Date:

ಬೆಳಗಾವಿ ತಾಲೂಕಿನ ನಾವಗೆ ಗ್ರಾಮದಲ್ಲಿರುವ ಸ್ನೇಹಂ ಕಾರ್ಖಾನೆಯಲ್ಲಿ ಮಂಗಳವಾರ ಸಂಭವಿಸಿದಂತಹ ಅಗ್ನಿ ಅವಘಡದಿಂದ ಬುಧವಾರದ ಮಧ್ಯಾಹ್ನದವರೆಗೂ ನಿಯಂತ್ರಣಕ್ಕೆ ಬಂದಿರಲಿಲ್ಲ.‌ ಸುಮಾರು 6 ಅಗ್ನಿಶಾಮಕ ವಾಹನಗಳು ಹಾಗೂ 250ಕ್ಕೂ ಹೆಚ್ಚು ಅಗ್ನಿಶಾಮಕ ಸಿಬ್ಬಂದಿಗಳ ನಿರಂತರ ಪ್ರಯತ್ನದಿಂದ ಇದೀಗ ಒಬ್ಬ ಕಾರ್ಮಿಕನ ಶವ ಸಂಪೂರ್ಣ ಸುಟ್ಟು ಕರಕಲಾದ ಪರಿಸ್ಥಿತಿಯಲ್ಲಿ ಪತ್ತೆಯಾಗಿದೆ.

ಮೂರು ಜನರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಸುಮಾರು 400 ಜನ ಕಾರ್ಮಿಕರು ಇಲ್ಲಿ ಕೆಲಸ ಮಾಡುತ್ತಿದ್ದ, ಕಾರ್ಖಾನೆ ಸಂಪೂರ್ಣ ಸುಟ್ಟು ಭಸ್ಮವಾಗಿರುವದರಿಂದ 400 ಕುಟುಂಬಗಳು ಬೀದಿ ಪಾಲಾಗುವ ‌ಪರಿಸ್ಥಿತಿ ಬಂದಿದೆ.

1001231924

ಈ ಅಗ್ನಿ ಅವಘಡದಲ್ಲಿ ಮೃತಪಟ್ಟ ಕಾರ್ಮಿಕ ಯಲ್ಲಪ್ಪ ಸಣ್ಣಗೌಡ ಗುಂಡ್ಯಾಗೋಳ( 20) ಅವರ ದೇಹದ ಅಂಗಾಂಗಗಳು ಸಂಪೂರ್ಣ ಸುಟ್ಟು ಕರಕಲಾಗಿದ್ದವು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮಾನವೀಯತೆ ಮರೆತ ಬೆಳಗಾವಿಯ ಅಧಿಕಾರಿಗಳು ಪ್ಲಾಸ್ಟಿಕ್ ಚೇಲದಲ್ಲಿ ಮೃತದೇಹದ ಭಾಗಗಳನ್ನು ಹಾಕಿ ತಂದೆಯ ಕೈಗೆ ಕೊಟ್ಟು ಕಳುಹಿಸಿದ್ದಾರೆ. ಈ ದೃಶ್ಯವನ್ನು ನೋಡಿದವರ ಕರುಳು ಕಿತ್ತು ಬರುವಂತಾಗಿದೆ.

1001231918

ದಾರಿಯುದ್ದಕ್ಕೂ ತಂದೆ ತನ್ನ ಕೈಯಲ್ಲಿ ಮಗನ ಸುಟ್ಟ ದೇಹದ ಅಂಗಾಂಗಗಳನ್ನು ಕೈಯಲ್ಲಿ ಹಿಡಿದುಕೊಂಡು ಹೋಗುವ ಪರಿಸ್ಥಿತಿಗೆ ಮರಗುವಂತಾಗಿದೆ. ಜಿಲ್ಲಾಡಳಿತದ ಈ ಅಮಾನವೀಯ ಕಾರ್ಯಕ್ಕೆ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ.

4 ತಿಂಗಳ ಹಿಂದೆಯಷ್ಟೇ ಯುವಕ ಫ್ಯಾಕ್ಟರಿಯಲ್ಲಿ ಹೆಲ್ಪರ್ ಕೆಲಸಕ್ಕೆ ಸೇರಿಕೊಂಡಿದ್ದ. ಆದರೆ, ನಿನ್ನೆ ರಾತ್ರಿ 10 ಗಂಟೆ ಸುಮಾರಿಗೆ ಶಾರ್ಟ್ ಸರ್ಕ್ಯೂಟ್ ಸಂಭವಿಸಿ ಈ ಭೀಕರ ಬೆಂಕಿ ಅವಘಡ ಸಂಭವಿಸಿದೆ.

ಫ್ಯಾಕ್ಟರಿಗೆ ಬೆಂಕಿ ಬಿದ್ದಿದೆ ಎಂದು ಗೊತ್ತಾಗುತ್ತಿದ್ದಂತೆಯೇ ಸ್ಥಳಕ್ಕೆ ಓಡೋಡಿ ಬಂದ ಯಲ್ಲಪ್ಪನ ಮನೆಯವರಿಗೆ ಇಂದು ಬೆಳಿಗ್ಗೆ ಫ್ಯಾಕ್ಟರಿಯ ಲಿಫ್ಟಿನಲ್ಲಿ ಯಲ್ಲಪ್ಪ ಸಂಪೂರ್ಣ ಸುಟ್ಟು ಕರಕಲಾದ ಸ್ಥಿತಿಯಲ್ಲಿ ಪತ್ತೆಯಾಗಿದ್ದ. ಬೆಂಕಿಯ ಕೆನ್ನಾಲಿಗೆಯಲ್ಲಿ ಬೆಂದು ಹೋಗಿದ್ದ ಯಲ್ಲಪ್ಪನ ಅಸ್ತಿಪಂಜರ ಮಾತ್ರ ಸಿಕ್ಕಿತು. ಮಗನ ಸ್ಥಿತಿ ಕಂಡು ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿತ್ತು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...