ನವೆಂಬರ್ 12ರಂದು ಇತಿಹಾಸ ತಜ್ಞ ಡಾ. ರಾಮ್ ಪುನಿಯಾನಿ ಮಂಗಳೂರಿಗೆ

Date:

ಪುಸ್ತಕ ಪ್ರಕಾಶನ ಸಂಸ್ಥೆ ಶಾಂತಿ ಪ್ರಕಾಶನ ಸಂಸ್ಥೆಯ ವತಿಯಿಂದ ನವೆಂಬರ್ 12ರಂದು ಮಂಗಳೂರಿನ ಪುರಭವನದಲ್ಲಿ ಸಂಜೆ 5 ಗಂಟೆಗೆ ‘ಭಾರತದ ಇತಿಹಾಸ ಮತ್ತು ಮುಸ್ಲಿಮರು’ ವಿಚಾರಗೋಷ್ಠಿ ಮತ್ತು ಪುಸ್ತಕ ಬಿಡುಗಡೆ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದು, ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ದೇಶದ ಖ್ಯಾತ ಇತಿಹಾಸ ತಜ್ಞ ಡಾ. ರಾಮ್ ಪುನಿಯಾನಿಯವರು ಭಾಗವಹಿಸಲಿದ್ದಾರೆ.

ಕಾರ್ಯಕ್ರಮದಲ್ಲಿ ಕರ್ನಾಟಕ ರಾಜ್ಯ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಪುರುಷೋತ್ತಮ ಬಿಳಿಮಲೆ, ಯೆನೆಪೊಯ ವಿಶ್ವವಿದ್ಯಾಲಯದ ಸ್ಥಾಪಕ ಉಪಕುಲಪತಿ ಪ್ರೊ. ಸೈಯದ್ ಅಕೀಲ್ ಅಹಮದ್ ಹಾಗೂ ವಾರ್ತಾಭಾರತಿ ದೈನಿಕದ ಪ್ರಧಾನ ಸಂಪಾದಕ ಅಬ್ದುಸ್ಸಲಾಮ್ ಪುತ್ತಿಗೆಯವರು ಭಾಗವಹಿಸಲಿದ್ದಾರೆ. ಜಿಲ್ಲೆಯ ಪ್ರಜ್ಞಾವಂತ ನಾಗರಿಕರು ಅತಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು ಎಂದು ಶಾಂತಿ ಪ್ರಕಾಶನದ ವ್ಯವಸ್ಥಾಪಕರಾದ ಮುಹಮ್ಮದ್ ಕುಂಞಿಯವರು ಮಾಧ್ಯಮಗಳ ಮೂಲಕ ವಿನಂತಿಸಿಕೊಂಡಿದ್ದಾರೆ.

guest

ಡಾ. ರಾಮ್ ಪುನಿಯಾನಿಯವರ ಬಗ್ಗೆ
ಡಾ. ರಾಮ್ ಪುನಿಯಾನಿ ಅವರು ಖ್ಯಾತ ಇತಿಹಾಸ ತಜ್ಞ, ಲೇಖಕ, ಅಕಾಡೆಮಿಕ್, ಸಾಮಾಜಿಕ ಚಿಂತಕ ಹಾಗೂ ಮಾನವ ಹಕ್ಕುಗಳ ಹೋರಾಟಗಾರರು. ಮುಂಬೈನ ಭಾರತೀಯ ತಂತ್ರಜ್ಞಾನ ಸಂಸ್ಥೆ (ಐಐಟಿ) ಯಲ್ಲಿ ಸುಮಾರು ಮೂರು ದಶಕಗಳ ಕಾಲ ಜೈವ ವೈದ್ಯಕೀಯ ಇಂಜಿನಿಯರಿಂಗ್ ವಿಭಾಗದ ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸಿದ ನಂತರ, ಅವರು ಸಾಮಾಜಿಕ ಚಟುವಟಿಕೆಗಳಲ್ಲಿ ತಮ್ಮನ್ನು ಸಂಪೂರ್ಣವಾಗಿ ತೊಡಗಿಕೊಂಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಧರ್ಮದ ಹೆಸರಿನಲ್ಲಿ ನಡೆಯುವ ವಿಭಜನೆ ಮತ್ತು ಅಸಹಿಷ್ಣುತೆ ವಿರುದ್ಧ ಧ್ವನಿಯಾಗಿರುವ ಡಾ. ಪುನಿಯಾನಿ ಅವರು ಧರ್ಮನಿರಪೇಕ್ಷತೆ, ಸಾಮುದಾಯಿಕ ಸಾಮರಸ್ಯ ಮತ್ತು ಮಾನವೀಯ ಮೌಲ್ಯಗಳ ಪರ ಬಲವಾಗಿ ನಿಂತಿದ್ದಾರೆ. ಅವರು ಸೆಂಟರ್ ಫಾರ್ ಸ್ಟಡಿ ಆಫ್ ಸೊಸೈಟಿ ಅಂಡ್ ಸೆಕ್ಯುಲರಿಸಮ್ (CSSS), ಮುಂಬೈ ಸಂಸ್ಥೆಯೊಂದಿಗೆ ಸಕ್ರಿಯವಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.

ಇದನ್ನು ಓದಿದ್ದೀರಾ? ಮಂಗಳೂರು ಹಜ್ ಭವನಕ್ಕೆ 20 ಕೋಟಿ: ವರ್ಷದೊಳಗೆ ತಲೆ ಎತ್ತಲಿದೆ ಕರಾವಳಿಗರ 16 ವರ್ಷದ ‘ಕನಸಿನ ಕಟ್ಟಡ’

ಅವರು ಇಂಗ್ಲಿಷ್ ಹಾಗೂ ಹಿಂದಿ ಭಾಷೆಗಳಲ್ಲಿ ಅನೇಕ ಪ್ರಭಾವಶೀಲ ಕೃತಿಗಳನ್ನು ರಚಿಸಿದ್ದಾರೆ. ಅವರ ಪ್ರಮುಖ ಪುಸ್ತಕಗಳಲ್ಲಿ Communal Politics: Facts Versus Myths, Indian Nationalism versus Hindu Nationalism, ಮತ್ತು Religion, Power and Violence ಪ್ರಮುಖವಾದವು.

ಸಾರ್ವಜನಿಕ ವೇದಿಕೆಗಳು, ಮಾಧ್ಯಮಗಳು ಮತ್ತು ವಿಶ್ವವಿದ್ಯಾಲಯಗಳಲ್ಲಿ ಅವರು ನಿರಂತರವಾಗಿ ಭಾಷಣ ಮಾಡುತ್ತಾ ಸಂವಿಧಾನಿಕ ಮೌಲ್ಯಗಳು, ತಾರ್ಕಿಕ ಚಿಂತನೆ ಮತ್ತು ವೈವಿಧ್ಯತೆಯ ಏಕತೆಗಳ ಸಂದೇಶವನ್ನು ಹಂಚಿಕೊಳ್ಳುತ್ತಿದ್ದಾರೆ.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...