ಮೈಸೂರು | ನ.20 ರಂದು ಏಕವ್ಯಕ್ತಿ ಅಭಿನಯದ ‘ಕೌದಿ’ ನಾಟಕ ಪ್ರದರ್ಶನ

Date:

ಮೈಸೂರಿನ ಪತ್ರಕರ್ತರ ಭವನದಲ್ಲಿ ಕದಂಬ ರಂಗ ವೇದಿಕೆ ಅಧ್ಯಕ್ಷರಾದ ರಾಜಶೇಖರ ಕದಂಬ ಮಾತನಾಡಿ, ಪತ್ರಕರ್ತ, ಲೇಖಕ ಗಣೇಶ ಅಮೀನಗಡ ಅವರ ‘ಬಂಗಾರದ ಮನುಷ್ಯ’ ನಾಟಕದ ಕೃತಿ ಬಿಡುಗಡೆ ಹಾಗೂ ಸ್ವರಚನೆಯ ‘ಕೌದಿ’ ಏಕವ್ಯಕ್ತಿ ನಾಟಕದ 50ನೇ ಪ್ರದರ್ಶನವನ್ನು ನವೆಂಬರ್ 20ರಂದು ಸಂಜೆ 6-30 ಗಂಟೆಗೆ ನಗರದ ಕಲಾಮಂದಿರ ಪಕ್ಕದ ಕಿರು ರಂಗಮಂದಿರದಲ್ಲಿ ಆಯೋಜಿಸಲಾಗಿದೆ ಎಂದು ಹೇಳಿದರು.

ಕದಂಬ ರಂಗ ವೇದಿಕೆ ಆಯೋಜಿಸಿರುವ ಈ ಕಾರ್ಯಕ್ರಮದಲ್ಲಿ ಟಿ.ಕೆ. ರಾಮರಾವ್ ಅವರ ಕಾದಂಬರಿ ಆಧರಿಸಿ ‘ಬಂಗಾರದ ಮನುಷ್ಯ’ ನಾಟಕವಾಗಿ ಗಣೇಶ ಅಮೀನಗಡ ರಚಿಸಿದ್ದಾರೆ. ಇದನ್ನು ಹೆಚ್ಚುವರಿ ಜಿಲ್ಲಾಧಿಕಾರಿ ಡಾ.ಪಿ. ಶಿವರಾಜು ಬಿಡುಗಡೆಗೊಳಿಸುವರು. ಕೃತಿಯನ್ನು ಲೇಖಕ ಡಾ. ಎನ್.ಎಂ. ಗಿರಿಜಾಪತಿ ಪರಿಚಯಿಸುವರು. ಮುಖ್ಯ ಅತಿಥಿಗಳಾಗಿ ಕನ್ನಡಪ್ರಭ ಪತ್ರಿಕೆಯ ಕಾರ್ಯನಿರ್ವಾಹಕ ಸಂಪಾದಕ ಅಂಶಿ ಪ್ರಸನ್ನಕುಮಾರ್ ಭಾಗವಹಿಸುವರು ಎಂದರು.

ಪುಸ್ತಕ ಬಿಡುಗಡೆ ನಂತರ ಕೌದಿ ನಾಟಕ ಪ್ರದರ್ಶನಗೊಳ್ಳಲಿದೆ. ಇದು ಈಗಾಗಲೇ ಉತ್ತರ ಕರ್ನಾಟಕ ಹಾಗೂ ಕಲ್ಯಾಣ ಕರ್ನಾಟಕದಲ್ಲಿ ಯಶಸ್ವಿಯಾಗಿ ಪ್ರದರ್ಶನಗೊಂಡಿದೆ. ಮೈಸೂರಿನಲ್ಲಿ ಮೊದಲ ಬಾರಿ ಪ್ರದರ್ಶನಗೊಳ್ಳುತ್ತಿದೆ. ಒಂದು ಗಂಟೆ ಅವಧಿಯ ಈ ನಾಟಕವನ್ನು ಕಲಬುರಗಿಯ ಭಾಗ್ಯಶ್ರೀ ಪಾಳಾ ಪ್ರಸ್ತುತಪಡಿಸುವರು. ಇದರ ವಿನ್ಯಾಸ, ಸಂಗೀತ ಹಾಗೂ ನಿರ್ದೇಶನ ಜಗದೀಶ್ ಆರ್. ಜಾಣಿ ಅವರದು ಎಂದು ಮಾಹಿತಿ ನೀಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಲೇಖಕ ಗಣೇಶ ಅಮೀನಗಡ ಮಾತನಾಡಿ, ಚಳಿಗಾಲದಲ್ಲಿ ಬೆಚ್ಚಗಿಡುವ ಹಾಗೂ ಬೇಸಿಗೆಯಲ್ಲಿ ತಂಪಾಗಿಡುವ ಕೌದಿಯ ಮಹತ್ವದ ಜೊತೆಗೆ ಕೌದಿ ಹೊಲಿಯುವವರ ಸಂಕಟ, ಸಮಸ್ಯೆ ಹಾಗೂ ಸವಾಲುಗಳ ಅನಾವರಣದ ನಾಟಕವಿದು ಎಂದರು.

ಈ ವಿಶೇಷ ಸುದ್ದಿ ಓದಿದ್ದೀರಾ? ಶ್ರೀರಂಗಪಟ್ಟಣ | ಪುರಾತತ್ವ ಇಲಾಖೆಯ ನಿರ್ಲಕ್ಷ್ಯ; ಕೋಟೆ ಪ್ರದೇಶದಲ್ಲಿ ನಿಯಮ ಉಲ್ಲಂಘನೆಯ ಆರೋಪ

ಪತ್ರಿಕಾಗೋಷ್ಠಿಯಲ್ಲಿ ರಂಗಕರ್ಮಿಗಳಾದ ಡಿ. ತಿಪ್ಪಣ್ಣ, ಅಶ್ವಥ್ ಕದಂಬ ಹಾಗೂ ಹಿರಿಯ ಲೇಖಕ ರಘುಪತಿ ತಾಮ್ಹನ್ ಕರ್ ಇದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...