ಬೀದರ್ | ಆನ್‌ಲೈನ್ ಗೇಮಿಂಗ್ : ₹15 ಲಕ್ಷಕ್ಕೂ ಅಧಿಕ ಹಣ ಕಳೆದುಕೊಂಡ ಯುವಕ ಪೆಟ್ರೊಲ್ ಸುರಿದುಕೊಂಡು ಆತ್ಮಹತ್ಯೆ

Date:

ಆನ್‌ಲೈನ್ ಗೇಮಿಂಗ್‌ನಲ್ಲಿ‌ ₹15 ಲಕ್ಷಕ್ಕೂ ಅಧಿಕ ಹಣ ಕಳೆದುಕೊಂಡು ಮನನೊಂದ ಯುವಕ ಮೈಮೇಲೆ ಪೆಟ್ರೊಲ್ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿ ಆಸ್ಪತ್ರೆಗೆ ದಾಖಲಾಗಿದ್ದ, ಚಿಕಿತ್ಸೆಗೆ ಸ್ಪಂದಿಸದೆ ಶನಿವಾರ ಬೆಳಗ್ಗೆ ಸಾವನ್ನಪ್ಪಿದ್ದಾನೆ.

ಬೀದರ್ ಜಿಲ್ಲೆಯ ಹುಲಸೂರ ತಾಲ್ಲೂಕಿನ ಬೇಲೂರ ಗ್ರಾಮದ ವಿಜಯಕುಮಾರ್ ಹೊಳ್ಳೆ (24) ಮೃತ ಯುವಕ.

ಡಿ.ಫಾರ್ಮ್‌ ಪದವೀಧರನಾದ ಯುವಕ ಖಾಸಗಿ ಆಸ್ಪತ್ರೆಯಲ್ಲಿ ಕೆಲಸ ಮಾಡುತ್ತಿದ್ದ. ಕೆಲ ತಿಂಗಳಿಂದ ಆನ್‌ಲೈನ್ ಗೇಮಿಂಗ್‌ ವ್ಯಾಮೋಹಕ್ಕೆ ಸಿಲುಕಿ ₹10 ಲಕ್ಷಕ್ಕೂ ಅಧಿಕ ಹಣ ಕಳೆದುಕೊಂಡಿದ್ದ. ಮತ್ತೆ ಒಂದೂವರೆ ಲಕ್ಷ ಸಾಲ ಮಾಡಿಕೊಂಡಿದ್ದನು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಎರಡ್ಮೂರು ದಿನಗಳಲ್ಲಿ ಹಣ ಕೊಡುತ್ತೇವೆ ಎಂದು ಕುಟುಂಬಸ್ಥರು ಹೇಳಿದ್ದರು. ಆದರೆ ಸಾಲಕ್ಕೆ ಹೆದರಿದ ಯುವಕ ಬುಧವಾರ (ಡಿ.25) ರಂದು ಭಾಲ್ಕಿ ತಾಲ್ಲೂಕಿನ ಸಾಯಗಾಂವ ಗ್ರಾಮ ಸಮೀಪದ ಜ್ಯೋತಿ ತಾಂಡಾ ಬಳಿ ಹೋಗಿ ಮೈಮೇಲೆ ಪೆಟ್ರೊಲ್ ಸುರಿದುಕೊಂಡು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದನು.

ಶೇ.80% ಸುಟ್ಟ ಗಾಯಗಳಿಂದ ನರಳುತ್ತಿದ್ದ ಯುವಕನನ್ನು ಸ್ಥಳೀಯರು ಭಾಲ್ಕಿ ಸರ್ಕಾರಿ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ಕೊಡಿಸಿ ಹೆಚ್ಚಿನ ಚಿಕಿತ್ಸೆಗೆ ಬೀದರ್ ಬ್ರಿಮ್ಸ್‌ಗೆ ದಾಖಲಿಸಿ ಚಿಕಿತ್ಸೆ ನೀಡಿದ್ದರು. ಹೆಚ್ಚಿನ ಚಿಕಿತ್ಸೆಗೆ ಮಹಾರಾಷ್ಟ್ರದ ಉಮ್ಮರ್ಗಾ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆಗೆ ಸ್ಪಂದಿಸದೆ ಶನಿವಾರ ನಸುಕಿನ ಜಾವ ಸಾವನ್ನಪ್ಪಿದ್ದಾನೆ ಎಂದು ಮೃತರ ಸಹೋದರ ಸಚಿನ್ ಹೊಳ್ಳೆ ಈದಿನ.ಕಾಮ್ ಜೊತೆ ಮಾತನಾಡಿ ತಿಳಿಸಿದ್ದಾರೆ.

ಕಳೆದ ಹಲವು ವರ್ಷಗಳಿಂದ ಆನ್‌ಲೈನ್ ಗೇಮ್ ಚಟಕ್ಕೆ ಬಿದ್ದು ₹15 ಲಕ್ಷಕ್ಕೂ ಅಧಿಕ ಹಣ ಸಾಲ ಮಾಡಿದ, ಅನೇಕ ಸಲ ಬುದ್ಧಿವಾದ ಹೇಳಿ ಸಾಲ ತೀರಿಸಿದ್ದೇವೆ. ಆದರೂ ಕೇಳಲಿಲ್ಲ. ಕೊನೆಗೆ ಅದರಿಂದ ಹೊರಬರಲು ಸಾಧ್ಯವಾಗದೆ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಹೇಳಿದರು.

ಆನ್‌ಲೈನ್ ಗೇಮಿಂಗ್ ನಿಷೇಧಕ್ಕೆ ಆಗ್ರಹ :

‘ಕಳೆದ ಏಳೆಂಟು ವರ್ಷಗಳಿಂದ ಆನ್‌ಲೈನ್ ಗೇಮ್ಸ್ ಆಡುತ್ತಿದ್ದೇನೆ. ಇದರಿಂದ ಹಣ ಬರುತ್ತೆ ಎಂಬ ಆಸೆಯಿಂದ ಚಟಕ್ಕೆ ಬಿದ್ದು ಲಕ್ಷಾಂತರ ಹಣ ಕಳೆದುಕೊಂಡಿದ್ದೇನೆ.ಆದರೆ ಗೇಮ್ಸ್‌ನಿಂದ ಯಾವುದೇ ಲಾಭವಿಲ್ಲ. ಇಂತಹ ಮೋಸದಾಟ ಯಾರೂ ಆಡಬೇಡಿ ಎಂದು ಮೃತ ಯುವಕ ವಿಜಯಕುಮಾರ್ ನಿನ್ನೆ ಮನವಿ ಮಾಡಿದ್ದನು.

ಆನ್‌ಲೈನ್ ಗೇಮ್ಸ್ ಸಾಲಕ್ಕೆ ಹೆದರಿ ಲಕ್ಷಾಂತರ ಹಣ ಕಳೆದುಕೊಂಡು ಆತ್ಮಹತ್ಯೆಗೆ ಯತ್ನಿಸಿ ಆಸ್ಪತ್ರೆಗೆ ದಾಖಲಾಗಿದ್ದ ವಿಷಯ ತಿಳಿದು ಬಸವಕಲ್ಯಾಣ ಶಾಸಕ ಶರಣು ಸಲಗರ ಶುಕ್ರವಾರ ಭೇಟಿ ನೀಡಿದ ವೇಳೆ ಫೇಸ್‌ಬುಕ್ ಲೈವ್‌ನಲ್ಲಿ ಈ ಮೇಲಿನಂತೆ ಹೇಳಿದ್ದ ಯುವಕ ಆನ್‌ಲೈನ್ ಗೇಮ್ಸ್ ನಿಷೇಧಿಸಬೇಕೆಂದು ರಾಜ್ಯ ಸರ್ಕಾರಕ್ಕೆ ಒತ್ತಾಯಿಸಿದ್ದನು.

ಈ ಸುದ್ದಿ ಓದಿದ್ದೀರಾ? ಯುವಜನರ ಜೀವಕ್ಕೆ ಕುತ್ತು ತರುತ್ತಿರುವ ಮೋಸದಾಟ: ಆನ್‌ಲೈನ್ ಗೇಮಿಂಗ್‌ ಬಗ್ಗೆ ಇರಲಿ ಎಚ್ಚರ

ಮೆಹಕರ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ಜರುಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮೈಸೂರು | ನಂಜನಗೂಡಿನಲ್ಲಿ ಮರಗಳ ಹನನ; ಸಂಘಟನೆಗಳಿಂದ ಪ್ರತಿಭಟನೆ

ದಿನಾಂಕ-07-03-2026ರಂದು ಮೈಸೂರು ಜಿಲ್ಲೆ, ನಂಜನಗೂಡಿನ ಹೆಜ್ಜಿಗೆ ಗ್ರಾಮದ ಬಳಿ ಕಪಿಲಾ ನದಿ...

ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಬ್ಯಾಲೆಟ್ ಪೇಪರ್ ಬಳಕೆ; ವಿಧಾನಸಭೆಯಲ್ಲಿ ಮಸೂದೆ ಅಂಗೀಕಾರ

ರಾಜ್ಯದ ಸ್ಥಳೀಯ ಸಂಸ್ಥೆಗಳ ಚುನಾವಣಾ ಪ್ರಕ್ರಿಯೆಯಲ್ಲಿ ಬದಲಾವಣೆ ತರಲು ರಾಜ್ಯ ಸರ್ಕಾರ...

ಗುಂಡ್ಲುಪೇಟೆ | ಸಿಡಿಪಿಒ ವಿರುದ್ಧ ಜಾರಕಿಹೊಳಿ ಬ್ರಿಗೇಡ್ ಭ್ರಷ್ಟಾಚಾರ ಆರೋಪ; ದೂರು

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ಸಿಡಿಪಿಓ ಹೇಮಾವತಿ ವಿರುದ್ದ ಜಾರಕಿಹೊಳಿ ಬ್ರಿಗೇಡ್ ಜಿಲ್ಲಾಧಿಕಾರಿಯವರಿಗೆ...

ಗದಗ | SC ST ಜನರ ನಡುವೆ ಗಲಾಟೆ; ಗಾಯಾಳುಗಳು ಆಸ್ಪತ್ರೆಗೆ ದಾಖಲು

ನೀರು ಕುಡಿದ ವಿಚಾರಕ್ಕೆ ಪರಿಶಿಷ್ಟ ಜಾತಿ(SC) ಪರಿಶಿಷ್ಟ(ST) ಜನಾಂಗದವರ ನಡುವೆ ಗಲಾಟೆ...