ಉಡುಪಿ | ಆಪರೇಷನ್ ಸಿಂಧೂರ್, ಭಯೋತ್ಪಾದಕರ ವಿರುದ್ಧದ ಕ್ರಮಗಳಿಗೆ ಬೆಂಬಲ : ಸಿಪಿಐ(ಎಂ)

Date:

ಪಿಒಕೆ(ಪಾಕಿಸ್ತಾನ-ಆಕ್ರಮಿತ ಕಾಶ್ಮೀರ) ಮತ್ತು ಪಾಕಿಸ್ತಾನದಲ್ಲಿನ ಭಯೋತ್ಪಾದಕ ಶಿಬಿರಗಳು ಮತ್ತು ಮೂಲಸೌಕರ್ಯಗಳನ್ನು ನಾಶಮಾಡುವ ಉದ್ದೇಶದಿಂದ ಭಾರತೀಯ ಸಶಸ್ತ್ರ ಪಡೆಗಳು ಆಪರೇಷನ್ ಸಿಂಧೂರ್ ಅನ್ನು ನಡೆಸಿವೆ. ಈ ಪ್ರಹಾರಗಳನ್ನು ನಿದಿಷ್ಟ ಗುರಿಗಳ ಮೇಲೆ, ಅಳೆದು-ಸುರಿದು ಮತ್ತು ಮುಂದೆಳೆದುಕೊಂಡು ಹೋಗದ ರೀತಿಯಲ್ಲಿ ಮಾಡಲಾಗಿದೆ ಹಾಗೂ ಒಂಬತ್ತು ಸ್ಥಳಗಳಲ್ಲಿ ಯಶಸ್ವಿಯಾಗಿ ಇದನ್ನು ನಡೆಸಲಾಯಿತು ಎಂದು ಸಶಸ್ತ್ರ ಪಡೆಗಳು ಹೇಳಿವೆ.

ಒಕ್ಕೂಟ ಸರ್ಕಾರ ಕರೆದ ಸರ್ವಪಕ್ಷ ಸಭೆಯಲ್ಲಿ, ಭಯೋತ್ಪಾದಕರು ಮತ್ತು ಅವರ ನಿರ್ವಾಹಕರ ವಿರುದ್ಧ ಗುರಿಯಿಟ್ಟು ಒಕ್ಕೂಟ ಸರ್ಕಾರ ತೆಗೆದುಕೊಳ್ಳುವ ಕ್ರಮಗಳಿಗೆ ಎಲ್ಲಾ ರಾಜಕೀಯ ಪಕ್ಷಗಳು ಬೆಂಬಲ ನೀಡಿದ್ದವು ಎಂಬುದನ್ನು ಈ ಸಂದರ್ಭದಲ್ಲಿ ಸಿಪಿಐ(ಎಂ) ಪೊಲಿಟ್‍ಬ್ಯುರೊ ಹೇಳಿದೆ ಎಂದು ಸಿಪಿಎಂ ಜಿಲ್ಲಾ ಕಾರ್ಯದರ್ಶಿ ಸುರೇಶ್ ಕಲ್ಲಾಗರ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಈ ಕ್ರಮಗಳ ಜೊತೆಗೆ, ಪಹಲ್ಗಾಮ್‌ನಲ್ಲಿ ಮುಗ್ಧ ಜನರ ಹತ್ಯಾಕಾಂಡಕ್ಕೆ ಕಾರಣರಾದವರನ್ನು ಹಸ್ತಾಂತರಿಸಲು ಮತ್ತು ತನ್ನ ಪ್ರದೇಶದಿಂದ ಯಾವುದೇ ಭಯೋತ್ಪಾದಕ ಶಿಬಿರಗಳು ಕಾರ್ಯನಿರ್ವಹಿಸದಂತೆ ನೋಡಿಕೊಳ್ಳಲು ಪಾಕಿಸ್ತಾನದ ಮೇಲೆ ಒತ್ತಡ ಹೇರುವುದನ್ನು ಮುಂದುವರಿಸಬೇಕು. ಜನರ ಐಕ್ಯತೆ ಮತ್ತು ದೇಶದ ಸಮಗ್ರತೆಯನ್ನು ರಕ್ಷಿಸಲಾಗುತ್ತಿದೆ ಎಂಬುದನ್ನು ಭಾರತ ಸರ್ಕಾರ ಖಚಿತಗೊಳಿಸಿಕೊಳ್ಳಬೇಕು ಎಂದು
ಸಿಪಿಐ(ಎಂ) ಹೇಳಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...