ಪ್ರತಿಪಕ್ಷಗಳಿಗೆ ಸ್ವಂತ ಬಲವಿಲ್ಲ, ಹೀಗಾಗಿ ಮೋದಿ ಸೋಲಿಸಲು ಒಂದಾಗುತ್ತಿವೆ: ಬೊಮ್ಮಾಯಿ ಟೀಕೆ

Date:

  • ಜು. 18ರಂದು ಬೆಂಗಳೂರಿನಲ್ಲಿ ವಿರೋಧ ಪಕ್ಷಗಳ ಸಭೆ
    • ಸಭೆಯಿಂದ ರಾಜಕೀಯ ಅರ್ಥ, ಲಾಭವಿಲ್ಲ: ಬೊಮ್ಮಾಯಿ

ಪ್ರಧಾನಿ ನರೇಂದ್ರ ಮೋದಿ ಅವರನ್ನು ಮತ್ತು ಬಿಜೆಪಿಯನ್ನು ಸೋಲಿಸಿಬೇಕು ಎನ್ನುವ ಒಂದೇ ಕಾರಣಕ್ಕೆ ಪ್ರತಿಪಕ್ಷಗಳು ಒಂದಾಗುತ್ತಿವೆ. ಇದರ ಅರ್ಥ ಅವರಿಗೆ ಸ್ವಂತ ಬಲವಿಲ್ಲ ಎಂಬುದು ಬಹಳ ಸ್ಪಷ್ಟ ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಟೀಕಿಸಿದರು.

ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ವಿರೋಧ ಪಕ್ಷಗಳು ಒಂದಾಗಲು ಸಿದ್ಧತೆ ನಡೆಸಿದ್ದು, ಜುಲೈ 18 ರಂದು ಬೆಂಗಳೂರಿನಲ್ಲಿ ವಿರೋಧ ಪಕ್ಷಗಳ ಸಭೆ ನಡೆಯಲಿದೆ. ಸಭೆಯ ಜವಾಬ್ದಾರಿಯನ್ನು ಕಾಂಗ್ರೆಸ್‌ಗೆ ವಹಿಸಲಾಗಿದೆ. ಈ ವಿಚಾರವಾಗಿ ಬೊಮ್ಮಾಯಿ ಹುಬ್ಬಳ್ಳಿಯಲ್ಲಿ ಸುದ್ದಿಗಾರರಿಗೆ ಪ್ರತಿಕ್ರಿಯಿಸಿದರು.

“ಇಡೀ ಭಾರತದಲ್ಲಿ ಪ್ರತಿಪಕ್ಷಗಳು ಶಕ್ತಿಯುತವಾಗಿಲ್ಲ. ಪ್ರಾದೇಶಿಕ ಪಕ್ಷಗಳೇ ದೇಶದಲ್ಲಿ ಜಾಸ್ತಿ ಇದ್ದು, ಆಯಾ ರಾಜ್ಯದಲ್ಲಿ ಅವು ಪ್ರತಿಪಕ್ಷಗಳಾಗಿವೆ. ಹೀಗಾಗಿ ಪ್ರತಿಪಕ್ಷಗಳ ಒಕ್ಕೂಟ ರಚನೆ ಅಥವಾ ಸಭೆಯಿಂದ ಯಾವುದೇ ರೀತಿಯ ರಾಜಕೀಯ ಅರ್ಥ ಹಾಗೂ ಲಾಭವಿಲ್ಲ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಪ್ರತಿಪಕ್ಷಗಳಿಗೆ ನಿರ್ದಿಷ್ಟವಾದ ಕಾರ್ಯಕ್ರಮವಿಲ್ಲ. ಕೇವಲ ಮೋದಿ ಅವರನ್ನು ಸೋಲಿಸುವುದೇ ಅವರ ಮುಂದಿರುವ ಕಾರ್ಯತಂತ್ರ. ಮೋದಿ ಕಾಲದಲ್ಲಿ ನಮ್ಮ ದೇಶ ಆರ್ಥಿಕವಾಗಿ, ಸಾಮಾಜಿಕವಾಗಿ ಬಹಳ ದೊಡ್ಡ ಪ್ರಗತಿ ಸಾಧಿಸಿದೆ. ಕೋವಿಡ್‌ ನಂತರ ವೇಗದಲ್ಲಿ ಆರ್ಥಿಕ ವೃದ್ಧಿಯಾಗುತ್ತಿದೆ. ಅಂತಾರಾಷ್ಟ್ರೀಯ ಮಟ್ಟದಲ್ಲಿ ಮೋದಿಯವರಿಗೆ ಮನ್ನಣೆ ಸಿಗುತ್ತಿದೆ” ಎಂದರು.

ಜೆಡಿಎಸ್‌ ವಿಲೀನ?

“ಬಿಜೆಪಿಯಲ್ಲಿ ಜೆಡಿಎಸ್‌ ವಿಲೀನವಾಗುತ್ತಾ ಅಥವಾ ಬೆಂಬಲ ಕೊಡುತ್ತಾ ಎಂಬ ವಿಚಾರ ವರಿಷ್ಠರು ನಿರ್ಧರಿಸುತ್ತಾರೆ. ಎಚ್‌ ಡಿ ಕುಮಾರಸ್ವಾಮಿ ಮತ್ತು ಎಚ್‌ ಡಿ ದೇವೇಗೌಡರೊಂದಿಗೆ ನಮ್ಮ ನಾಯಕರು ಚರ್ಚೆ ನಡೆಸಿದ್ದಾರೆ. ಜು.18ರ ನಂತರ ಪ್ರತಿಪಕ್ಷದ ನಾಯಕನ ಆಯ್ಕೆಯಾಗುವ ಸಾಧ್ಯತೆ ಇದೆ” ಎಂದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...