ಮೈಸೂರು | ಗುಡುಮಾದನಹಳ್ಳಿಯಲ್ಲಿ ಭೂ ಸ್ವಾಧೀನಕ್ಕೆ ವಿರೋಧ; ರೈತ ಸಂಘದಿಂದ ಪ್ರತಿಭಟನೆ

Date:

ಮೈಸೂರು ತಾಲ್ಲೂಕಿನ ವರುಣಾ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಗುಡುಮಾದನಹಳ್ಳಿ ಸರ್ವೆ ನಂಬರ್ 60, 68, 8, ಸರ್ಕಾರಿ ಜಮೀನಾಗಿದ್ದು, ಈ ಜಮೀನನ್ನು ರೈತರು 1960 ರಿಂದ ಉಳುಮೆ ಮಾಡುತ್ತಿದ್ದಾರೆ. ಆದರೇ, ಈಗ ನಿಮ್ಹಾನ್ಸ್ ಹಾಗು ಆಶ್ರಯ ಯೋಜನೆಗೆ ಭೂ ಸ್ವಾಧೀನ ಪಡಿಸಿಕೊಳ್ಳುವುದಕ್ಕೆ ಮುಂದಾಗಿರುವುದನ್ನು ಕರ್ನಾಟಕ ರಾಜ್ಯ ರೈತ ಸಂಘ ಬಲವಾಗಿ ಖಂಡಿಸಿ ಪ್ರತಿಭಟನೆಗಿಳಿದಿದೆ.

ರೈತರಿಗೆ ಸಾಗುವಳಿ ನೀಡಿ, ಕಂದಾಯವನ್ನು ಕಟ್ಟಿಸಿಕೊಂಡು 1985ರಲ್ಲಿ ಪುನಃ ವಾಪಸ್ ಪಡೆದು ಗೋಮಾಳ ಎಂದು ಆರ್ಟಿಸಿಯಲ್ಲಿ ನಮೂದಿಸಿ ಕೊಂಡಿರುವುದಷ್ಟೇ. ಅಂದಿನಿಂದ ಇಂದಿನವರೆಗೂ ರೈತರು ಆ ಜಮೀನುಗಳಲ್ಲಿ ವ್ಯವಸಾಯ ಮಾಡುತಿದ್ದು, ತಂಗಿನ ಮರಗಳನ್ನು ಬೆಳೆಸಿರುತ್ತಾರೆ ಮತ್ತು ಭತ್ತ, ಹೈನುಗಾರಿಕೆಗೆ ಮಾಡುತ್ತಿದ್ದಾರೆ.

ಯಾವುದೇ ಮಾಹಿತಿ ನೀಡದೆ ಏಕಾಏಕಿ ಕಳೆದ ತಿಂಗಳುಗಳಿಂದ 20 ಎಕರೆ ಜಮೀನನ್ನು ನಿಮಾನ್ಸ್ ಗೆ ಮತ್ತು ಆಶ್ರಯಕ್ಕೆ ಮಂಜೂರು ಮಾಡಿ ಭೂ ಸ್ವಾಧೀನ ಪಡಿಸಿಕೊಳ್ಳಲು ಸಂಬಂಧಪಟ್ಟ ಅಧಿಕಾರಿಗಳು ಮುಂದಾದಾಗ ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಗುಡುಮಾದನಹಳ್ಳಿ ರೈತ ಹೋರಾಟಗಾರರು ಈ ಪ್ರಕ್ರಿಯೆ ವಿರುದ್ಧ ಪ್ರತಿಭಟನೆ ನಡೆಸಿ, ಸ್ಥಳಕ್ಕೆ ಆಗಮಿಸಿದ ಮೈಸೂರು ತಾಲ್ಲೂಕು ತಹಶೀಲ್ದಾರ್ ರವರು ಇದು ಸರ್ಕಾರಿ ಗೋಮಾಳವಾಗಿದ್ದು ಇದನ್ನು ನಿಮಾನ್ಸ್ ಗೆ ಕೊಟ್ಟಿದ್ದೇವೆ, ಜಾಗ ಬಿಟ್ಟು ಕೊಡಿ ಎಂದು ಪ್ರತಿಭಟನಾಕಾರರನ್ನು ಒತ್ತಾಯಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಪ್ರತಿಭಟನಾಕಾರರು ಈ ಜಾಗವನ್ನು ಯಾರು ಉಳುಮೆ ಮಾಡುತ್ತಿದ್ದಾರೆ ಎಂದು ಸರ್ವೆ ಆಗಲಿ. ಅದನ್ನ ಬಿಟ್ಟು ಸರ್ಕಾರ ರೈತರಿಗೆ ಅನ್ಯಾಯ ಮಾಡುವುದನ್ನು ಖಂಡಿಸುತ್ತೇವೆ. ಇದಕ್ಕೆಲ್ಲ ಅವಕಾಶ ಕೊಡುವುದಿಲ್ಲ ಎಂದು ಪಟ್ಟು ಹಿಡಿದಾಗ ತಹಶೀಲ್ದಾರ್ ರವರು ಒಪ್ಪಿ ಸರ್ವೇ ಕಾರ್ಯವನ್ನು ಮುಂದುವರಿಸುತ್ತಿದ್ದಾರೆ.

ಈ ವಿಶೇಷ ಸುದ್ದಿ ಓದಿದ್ದೀರಾ? ‘ಬೃಹತ್ ಮೈಸೂರು ಮಹಾನಗರ ಪಾಲಿಕೆ’ ಪ್ರಸ್ತಾವಿತ ಯೋಜನೆಯ ಸಾಧಕ-ಬಾಧಕಗಳೇನು?

ಪ್ರತಿಭಟನೆಯಲ್ಲಿ ವಿಭಾಗೀಯ ಸಂಘಟನಾ ಕಾರ್ಯದರ್ಶಿ ಹೊಸಕೋಟೆ ಬಸವರಾಜು, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಪಿ.ಮರಂಕಯ್ಯ, ಗುಡುಮಾದನಹಳ್ಳಿ ರೈತ ಸಂಘದ ಘಟಕ ಅಧ್ಯಕ್ಷ ಕುಮಾರ್, ಅಣ್ಣಯ್ಯ, ರಾಜೇಶ್ ಸೇರಿದಂತೆ ನೂರಾರು ಕಾರ್ಯಕರ್ತರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...