ರಾಷ್ಟ್ರೀಯ ಕ್ರೀಡಾ ದಿನ | 30 ಕ್ಕೂ ಹೆಚ್ಚು ಕ್ರೀಡೆಗಳ ಆಯೋಜನೆ: ಸಚಿವ ಬಿ ನಾಗೇಂದ್ರ

Date:

  • ಕಂಠೀರವ ಕ್ರೀಡಾಂಗಣದಲ್ಲಿ ರಾಷ್ಟ್ರೀಯ ಕ್ರೀಡಾ ದಿನ ಆಚರಣೆ
  • ‘ಒಂಬತ್ತು ದಿನ ಶಾಲೆಗಳಲ್ಲಿ ನಿತ್ಯ ಒಂದು ಕ್ರೀಡಾ ಚಟುವಟಿಕೆ’

ಆಗಸ್ಟ್ 29ರಂದು ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ರಾಷ್ಟ್ರೀಯ ಕ್ರೀಡಾ ದಿನ-2023ರ ಆಚರಣೆಯನ್ನು ಬಹಳ ವಿನೂತನ ರೀತಿಯಲ್ಲಿ ಆಯೋಜಿಸಲಾಗುತ್ತಿದೆ. ಅಂದು ಬೆಳಗ್ಗೆ 8 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ಒಲಿಂಪಿಕ್ ಕ್ರೀಡೆಗಳು, ಸಾಹಸ ಕ್ರೀಡೆಗಳು, ದೇಸಿ, ಸಾಂಪ್ರದಾಯಿಕ ಕ್ರೀಡೆಗಳು ಹಾಗೂ ಮನರಂಜನಾ ಕ್ರೀಡೆಗಳು ಸೇರಿದಂತೆ 30 ಕ್ಕೂ ಹೆಚ್ಚು ವಿವಿಧ ಕ್ರೀಡೆಗಳನ್ನು ಆಯೋಜಿಸಲಾಗುತ್ತಿದೆ ಎಂದು ಯುವ ಸಬಲೀಕರಣ ಹಾಗೂ ಕ್ರೀಡಾ ಸಚಿವ ಬಿ ನಾಗೇಂದ್ರ ಹೇಳಿದರು.

ವಿಧಾನಸೌಧದ ಶುಕ್ರವಾರ ಸುದ್ದಿಗೋಷ್ಠಿ ಕರೆದು ಮಾತನಾಡಿದ ಅವರು, “ಪ್ರತಿ ವರ್ಷ ಆಗಸ್ಟ್ 29 ರಂದು ಕ್ರೀಡಾಪಟು ಮತ್ತು ಕ್ರೀಡಾ ಅಭಿಮಾನಿಗಳಿಗೆ ಬಹಳ ಮುಖ್ಯವಾದ ದಿನ. ಹಾಕಿ ಮಾಂತ್ರಿಕ ಮೇಜರ್ ಧ್ಯಾನಚಂದ್ ರವರ ಹುಟ್ಟುಹಬ್ಬದ ಗೌರವಾರ್ಥವಾಗಿ ಆಗಸ್ಟ್ 29ರಂದು ರಾಷ್ಟ್ರೀಯ ಕ್ರೀಡಾ ದಿನ ಆಚರಿಸಲಾಗುತ್ತದೆ” ಎಂದರು.

“2023 ನೇ ಸಾಲಿನ ರಾಷ್ಟ್ರೀಯ ಕ್ರೀಡಾ ದಿನದ ಘೋಷವಾಕ್ಯ ಎಲ್ಲರನ್ನು ಒಳಗೊಳ್ಳುವ ಹಾಗೂ ಸದೃಢ ಸಮಾಜಕ್ಕಾಗಿ ಕ್ರೀಡೆ (Sports as an enabler of an inclusive and fit society) ಈ ಘೋಷವಾಕ್ಯದ ಆಶಯವನ್ನು ಸಾಕಾರಗೊಳಿಸುವ ನಿಟ್ಟಿನಲ್ಲಿ ರಾಜ್ಯದಾದ್ಯಂತ ವಿವಿಧ ರೀತಿಯ 30ಕ್ಕೂ ಹೆಚ್ಚು ಕ್ರೀಡಾ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ” ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಕಾವೇರಿ ವಿವಾದ, ಬರಗಾಲದಲ್ಲಾದರೂ ರಾಜ್ಯದ ಜನರ ಹಿತ ಕಾಯುವರೇ ಬಿಜೆಪಿ ಸಂಸದರು?

“ಸಾರ್ವಜನಿಕರಿಗೆ ವಿವಿಧ ಕ್ರೀಡೆಗಳ ಅಂತಾರಾಷ್ಟ್ರೀಯ ಗುಣಮಟ್ಟದ ಕ್ರೀಡಾ ಸಾಮಗ್ರಿ ಹಾಗೂ ಮ್ಯಾಟ್ ಗಳ ಮೇಲೆ ಸ್ವತಃ ಆಟವಾಡಿ ಆನಂದಿಸುವ ಅವಕಾಶವನ್ನು ಒದಗಿಸಲಾಗುತ್ತಿದೆ. ಈ ಕಾರ್ಯಕ್ರಮಕ್ಕೆ ಸಾರ್ವಜನಿಕರಿಗೆ ಉಚಿತ ಹಾಗೂ ಮುಕ್ತ ಪ್ರವೇಶವಿದೆ” ಎಂದರು.

“ಅಥ್ಲೆಟಿಕ್ಸ್, ಕಬಡ್ಡಿ, ವಾಲಿಬಾಲ್, ಆರ್ಚರಿ, ಮಲ್ಲಕಂಬ, ಬಾಸ್ಕೆಟ್ ಬಾಲ್, ಸ್ಪೋರ್ಟ್ಸ್ ಕ್ಲೇಬಿಂಗ್, ರ್‍ಯಾಪೆಲ್ಲಿಂಗ್ ಫೆನ್ಸಿಂಗ್, ಬ್ಯಾಕಿಂಗ್, ಹಾಕಿ, ಆರ್ಚರಿ, ಜೂಡೋ, ಟೇಕ್ವಾಡೋ, ಮಣ್ಣಿನ ಕುಸ್ತಿ, ಹಗ್ಗಜಗ್ಗಾಟ, ಜುಮಾರಿಂಗ್, ಜಿಪ್ ಲೈನ್, ಸ್ಕೆಟಿಂಗ್, ಸ್ಕೇಟ್ ಬೋರ್ಡಿಂಗ್, ಚೆಸ್, ಫುಟ್ಬಾಲ್ ಇತ್ಯಾದಿ ಕ್ರೀಡೆಗಳಲ್ಲಿ ಭಾಗವಹಿಸಬಹುದಾಗಿದೆ” ಎಂದು ವಿವರಿಸಿದರು.

“ಇನ್ನು ಈ ಬಾರಿಗೆ ರಾಜ್ಯದ ಎಲ್ಲಾ ಶಾಲಾ- ಕಾಲೇಜುಗಳ ದೈಹಿಕ ಶಿಕ್ಷಕರಿಗೆ ರಾಷ್ಟ್ರೀಯ ಕ್ರೀಡಾ ದಿನದ ಅಂಗವಾಗಿ ಸನ್ಮಾನ ಮಾಡುವಂತೆ ಸರ್ಕಾರದ ವತಿಯಿಂದ ಸುತ್ತೋಲೆ ಹೊರಡಿಸಲಾಗುತ್ತಿದೆ. ದಿನಾಂಕ 21-08-2023 ರಿಂದ 29 -08-2023ರವರೆಗೆ ರಾಜ್ಯದಾದ್ಯಂತ ಪ್ರತಿ ದಿನ ಒಂದು ಕ್ರೀಡಾ ಸಂಬಂಧಿತ ಚಟುವಟಿಕೆ ಹಮ್ಮಿಕೊಳ್ಳಲಾಗಿದೆ. ಕಂಠೀರವ ಕ್ರೀಡಾಂಗಣದಲ್ಲಿ ನಡೆಯುವ ಈ ವಿನೂತನ ಕ್ರೀಡಾ ಹಬ್ಬದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಲು ಕ್ರೀಡಾಪಟುಗಳು ಹಾಗೂ ಕ್ರೀಡಾಸಕ್ತರನ್ನು ಆಹ್ವಾನಿಸುತ್ತೇನೆ” ಎಂದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...