ನಮ್ಮ ಮೆಟ್ರೋ | ನೇರಳ ಮಾರ್ಗ ಪರಿಪೂರ್ಣ; ಬೈಯಪ್ಪನಹಳ್ಳಿ-ಕೆ.ಆರ್‌.ಪುರಂ ನಡುವೆ ಅ.7ರಿಂದ ಸಂಚಾರ ಆರಂಭ

Date:

ಬೆಂಗಳೂರಿನಲ್ಲಿ ಮೆಟ್ರೋ ಸಂಚಾರ ಮತ್ತಷ್ಟು ಹಿಗ್ಗಿದೆ. ಹಲವು ಕಾರಣಗಳಿಂದ ಚಾಲನೆಯಾಗದೇ ಉಳಿದಿದ್ದ ಬೈಯಪ್ಪನಹಳ್ಳಿ-ಕೆ.ಆರ್.ಪುರಂ ನಡುವಿನ ನೇರಳೆ ಮಾರ್ಗವೂ ಇದೀಗ ಸಂಚಾರಕ್ಕೆ ತೆರೆದುಕೊಳ್ಳುತ್ತಿದೆ. ಈ ಮಾರ್ಗದಲ್ಲಿ ಅಕ್ಟೋಬರ್ 7ರಿಂದ ಮೆಟ್ರೋ ಸಂಚಾರಕ್ಕೆ ಚಾಲನೆ ದೊರೆಯಲಿದೆ ಎಂದು ಬೆಂಗಳೂರು ರೈಲು ಮೆಟ್ರೋ ನಿಗಮ (ಬಿಎಂಆರ್‌ಸಿಎಲ್) ತಿಳಿಸಿದೆ.

ಇತ್ತೀಚೆಗೆ, ಕೆ.ಆರ್.ಪುರಂ ಮತ್ತು ವೈಟ್‌ಫೀಲ್ಡ್‌ ನಡುವಿನ ಮೆಟ್ರೋ ಮಾರ್ಗಕ್ಕೆ ಪ್ರಧಾನಿ ಮೋದಿ ಚಾಲನೆ ನೀಡಿದ್ದರು. ಆದರೆ, ಕೆ.ಆರ್.ಪುರಂ ಮತ್ತು ಬೈಯಪ್ಪನಹಳ್ಳಿ ನಡುವಿನ ಮಾರ್ಗದಲ್ಲಿ ನಿರ್ಮಾಣ ಕಾರ್ಯ ಮತ್ತು ತಪ್ಪಿದ್ದ ಸಂಪರ್ಕ ಕೊಂಡಿ ಕೆಲಸಗಳ ಬಾಕಿ ಉಳಿದಿದ್ದರಿಂದ ಈ ಮಾರ್ಗದಲ್ಲಿ ಸಂಚಾರಕ್ಕೆ ಚಾಲನೆ ನೀಡಲಾಗಿರಲಿಲ್ಲ.

ಇದೀಗ, ಈ ಮಾರ್ಗದಲ್ಲಿ ಎಲ್ಲ ಕೆಲಸಗಳು ಪೂರ್ಣಗೊಂಡಿದ್ದು, ಶನಿವಾರ ಮೆಟ್ರೋ ಸಂಚಾರಕ್ಕೆ ಚಾಲನೆ ದೊರೆಯಲಿದೆ. ಬೈಯಪ್ಪನಹಳ್ಳಿ-ಕೆ.ಆರ್.ಪುರಂ ನಡುವಿನ ಮಾರ್ಗವು ತೆರೆದುಕೊಳ್ಳುವುದರ ಜತೆಗೆ ಸುಮಾರು 40 ಕಿಲೋ ಮೀಟರ್ ಉದ್ದದ್ದ ನೇರಳೆ ಮಾರ್ಗವು ಸಂಪೂರ್ಣವಾಗಿ ಪೂರ್ಣಗೊಳ್ಳಲಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಮತದಾರ ಪಟ್ಟಿಗೆ ಹೆಸರು ನೋಂದಾಯಿಸಲು ಅರ್ಜಿ ಸಲ್ಲಿಕೆಗೆ ನ.6ರವರೆಗೆ ಅವಕಾಶ

ಇಂದಿನವರೆಗೆ, ಎಂಜಿ ರಸ್ತೆ, ಕೆಂಗೇರಿ ಭಾಗದಿಂದ ಕಾಡುಗೋಡಿಗೆ ಸಂಚರಿಸುವವರು ಬೈಯಪ್ಪನಹಳ್ಳಿಯಲ್ಲಿ ಇಳಿದು ಅಲ್ಲಿಂದ ಬಸ್ ಮೂಲಕ ಕೆ.ಆರ್.ಪುರಂಗೆ ತೆರಳಿ, ಅಲ್ಲಿಂದ ಮೆಟ್ರೋ ಮೂಲಕ ಕಾಡುಗೋಡಿ ತಲುಪಬೇಕಿತ್ತು. ಈಗ ಬೈಯಪ್ಪನಹಳ್ಳಿ-ಕೆ.ಆರ್.ಪುರಂ ನಡುವೆಯೂ ಮೆಟ್ರೋ ಸಂಚರಿಸುವುದರಿಂದ ಪ್ರಯಾಣಿಕರಿಗೆ ಬಸ್ ಹತ್ತುವ ಕಸರತ್ತು ಇಲ್ಲವಾಗಲಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...