ಕಲಬುರಗಿ | ಸಿಎಂ ವಿರುದ್ಧ ತನಿಖೆಗೆ ಅನುಮತಿ : ರಾಜ್ಯಪಾಲರ ನಡೆ ವಿರುದ್ಧ ಸಿಡಿದ ಆಕ್ರೋಶ

Date:

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ (ಮುಡಾ) ಹಗರಣ ನಡೆದಿದೆ ಎನ್ನುವ ವಿಚಾರವಾಗಿ ಸಿಎಂ ಸಿದ್ದರಾಮಯ್ಯ ಅವರ ವಿರುದ್ಧದ ತನಿಖೆಗೆ ರಾಜ್ಯಪಾಲರು ಅನುಮತಿ ನೀಡಿರುವ ಕ್ರಮವನ್ನು ಖಂಡಿಸಿ ಜೇವರ್ಗಿ ಪಟ್ಟಣದ ಅಖಂಡೇಶ್ವರ ವೃತ್ತದಲ್ಲಿ ಸಿಎಂ ಸಿದ್ದರಾಮಯ್ಯನವರ ಅಭಿಮಾನಿಗಳು ಟೈರ್‌ಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದರು.

ಈ ವೇಳೆ ಮುಖಂಡ ರಾಜಶೇಖರ್ ಮುತ್ತಕೊಡ್ ಮಾತನಾಡಿ, ʼಸಿದ್ದರಾಮಯ್ಯನವರು ತಮ್ಮ 40 ವರ್ಷದ ರಾಜಕೀಯ ಬದುಕಿನಲ್ಲಿ ಒಂದೇ ಒಂದು ಕಪ್ಪು ಚುಕ್ಕಿ ಇಲ್ಲ. ಆದರೆ ಬಿಜೆಪಿ, ಜೆಡಿಎಸ್ ಪಕ್ಷದ ಕುತಂತ್ರದಿಂದ ರಾಜ್ಯಪಾಲರು ಕೇಂದ್ರ ಸರಕಾರದ ಕೈಗೊಂಬೆಯಾಗಿ ಮುಖ್ಯಮಂತ್ರಿಗಳಿಗೆ ನೋಟಿಸ್ ನೀಡಿದ್ದಾರೆ. ಇದು ಸಿದ್ದರಾಮಯ್ಯನ ಅಭಿಮಾನಿಗಳು ಪಕ್ಷದ ಕಾರ್ಯಕರ್ತರು ತೀವ್ರವಾಗಿ ಖಂಡಿಸುತ್ತೇವೆʼ ಎಂದರು.

ಮುಖಂಡ ಚಂದ್ರಶೇಖರ್ ನೇರಡಗಿ ಮಾತನಾಡಿ, ʼಮುಡಾ ಹಗರಣಕ್ಕೆ ಸಂಬಂಧಿಸಿದಂತೆ ರಾಜ್ಯಪಾಲರು ಸಿದ್ದರಾಮಯ್ಯ ಅವರಿಗೆ ನೀಡಿದ ನೋಟಿಸ್ ಕೂಡಲೇ ಹಿಂಪಡೆಯಬೇಕುʼ ಎಂದು ಒತ್ತಾಯಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಸಿಎಂ ವಿರುದ್ಧ ತನಿಖೆಗೆ ಅನುಮತಿ | ರಾಜ್ಯಪಾಲರ ನಡೆ ಖಂಡಿಸಿ ರಾಜ್ಯಾದ್ಯಂತ ನಾಳೆ (ಆ.19) ಕೆಪಿಸಿಸಿ ಪ್ರತಿಭಟನೆ

ಪ್ರತಿಭಟನೆಯಲ್ಲಿ ಪ್ರಮುಖರಾದ ರವಿ ಕುಳಗೇರಾ, ಭೀಮಶಂಕರ್ ಬಿಲ್ಲಾಡ್, ಯಲ್ಲಾಲಿಂಗ ದೊರೆ, ಭೀಮು ಖಾದ್ಯಪುರ್, ತೋಟಪ್ಪ ಜನಿವಾರ ಸೇರಿದಂತೆ ಕುರುಬ ಸಮುದಾಯ ಮುಖಂಡರು ಹಾಗೂ ಸಿದ್ದರಾಮಯ್ಯನವರ ಅಭಿಮಾನಿಗಳು, ಕಾಂಗ್ರೆಸ್ ಕಾರ್ಯಕರ್ತರಿದ್ದರು.

ವರದಿ : ಮೀಡಿಯಾ ವಾಲಿಯಂಟರ್ : ಶರಣು

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...