ಉಡುಪಿ‌ | ಸೆ.29- ಬಂಟರ ಸಂಘದಿಂದ ಡಾ.ಕೆ.ಪ್ರಕಾಶ್ ಶೆಟ್ಟಿ ಅವರಿಗೆ ‘ಶ್ರೀಗುರು ನಿತ್ಯಾನಂದಾನುಗ್ರಹ’ ಪ್ರಶಸ್ತಿ ಪ್ರದಾನ

Date:

ಬಂಟರ ಸಂಘ ಪಡುಬಿದ್ರಿ ಬಂಟ್ಸ್ ವೆಲ್ ಫೇರ್ ಟ್ರಸ್ಟ್ ಪಡುಬಿದ್ರಿ ಇವರ ಸಹಭಾಗಿತ್ವದಲ್ಲಿ ಸಾಮಾಜಿಕ ಕಲ್ಯಾಣ ಕಾರ್ಯಕ್ರಮ ಮತ್ತು ವಿದ್ಯಾರ್ಥಿವೇತನ ವಿತರಣೆ ಹಾಗೂ ‘ಸಿರಿಮುಡಿ ದತ್ತಿನಿಧಿ ಟ್ರಸ್ಟ್’ ಬಂಟರ ಸಂಘ ಪಡುಬಿದ್ರಿ ಇದರ ಪ್ರಾಯೋಜಕತ್ವದಲ್ಲಿ ಮಂಗಳೂರು ವಿಶ್ವವಿದ್ಯಾಲಯದಿಂದ ಗೌರವ ಡಾಕ್ಟರೇಟ್ ಪ್ರಶಸ್ತಿಗೆ ಭಾಜನರಾದ ಉದ್ಯಮಿ ಡಾ.ಕೆ.ಪ್ರಕಾಶ್ ಶೆಟ್ಟಿ ಅವರಿಗೆ ‘ಶ್ರೀ ಗುರು ನಿತ್ಯಾನಂದಾನುಗ್ರಹ’ ಪ್ರಶಸ್ತಿ ನೀಡಿ ಗೌರವಿಸುವ ಕಾರ್ಯಕ್ರಮವನ್ನು ಇದೇ ಸೆ.29 ರಂದು ಪಡುಬಿದ್ರಿ ಬಂಟರ ಸಂಘದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಪಡುಬಿದ್ರಿ ಬಂಟರ ಸಂಘದ ಅಧ್ಯಕ್ಷ ಡಾ. ದೇವಿಪ್ರಸಾದ್‌ ಶೆಟ್ಟಿ ತಿಳಿಸಿದರು.

ಪಡುಬಿದ್ರಿ ಬಂಟರ ಸಂಘದಲ್ಲಿ ಇಂದು ನಡೆದ ಸುದ್ದಿಗೋಷ್ಠಿಯಲ್ಲಿ ಈ ಕುರಿತು ಮಾಹಿತಿ ನೀಡಿದ ಅವರು, ಅಂದು ಬೆಳಿಗ್ಗೆ 9 ಗಂಟೆಗೆ ಪಡುಬಿದ್ರಿ ಪೇಟೆಯಿಂದ ಬಂಟರ ಭವನದವರೆಗೆ ಅದ್ದೂರಿ ಮೆರವಣಿಗೆ ನಡೆಯಲಿದೆ. ಈ ಮೆರವಣಿಗೆಯಲ್ಲಿ ಡಾ. ಕೆ. ಪ್ರಕಾಶ್ ಶೆಟ್ಟಿ ದಂಪತಿ ಹಾಗೂ ಇತರ ಅತಿಥಿ ಗಣ್ಯರನ್ನು ಸಂಭ್ರಮದಿಂದ ಬರಮಾಡಿಕೊಳ್ಳಲಾಗುವು ದು. ಬೆಳಿಗ್ಗೆ 10ಗಂಟೆಯಿಂದ ಪಡುಬಿದ್ರಿ ಬಂಟರ ಸಂಘದ ಸದಸ್ಯರಿಂದ ವೈವಿಧ್ಯಮಯ ನೃತ್ಯ ಕಾರ್ಯಕ್ರಮ ಜರಗಲಿದೆ ಎಂದರು.

ಬೆಳಿಗ್ಗೆ 10.30ಕ್ಕೆ ಆರಂಭಗೊಳ್ಳುವ ಸಭಾ ಕಾರ್ಯಕ್ರಮವನ್ನು ಬಂಟ್ಸ್ ಸಂಘ ಬೆಂಗಳೂರು ಇದರ ಅಧ್ಯಕ್ಷ ಸಿ.ಎ. ಅಶೋಕ ಶೆಟ್ಟಿ ಉದ್ಘಾಟಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಮುಂಬೈ ಪೆನಿನ್ಸುಲಾ ಗ್ರೂಪ್ ಆಫ್ ಹೊಟೇಲ್ಸ್ ನ ಸಿಎಂಡಿ ಕರುಣಾಕರ ಆರ್. ಶೆಟ್ಟಿ, ಬಂಟ್ಸ್ ಸಂಘ ಪಿಂಪ್ರಿ ಚಿಂಚಿವಾಡ ಪುಣೆ ಇದರ ಮಾಜಿ ಅಧ್ಯಕ್ಷ ಎರ್ಮಾಳು ಸೀತಾರಾಮ ಶೆಟ್ಟಿ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಈ ವೇಳೆ ಡಿಸೆಂಬರ್ ತಿಂಗಳ ಅಂತ್ಯದಲ್ಲಿ ಪಡುಬಿದ್ರಿ ಬಂಟರ ಸಂಘದ ವತಿಯಿಂದ ಆಯೋಜಿಸಲು ಉದ್ದೇಶಿಸಿರುವ ಅಂತರ್ ರಾಜ್ಯ ಬಂಟರ ಕ್ರೀಡಾಕೂಟ ಇದರ ಮಾಹಿತಿ ಕೈಪಿಡಿಯನ್ನು ಬಿಡುಗಡೆಗೊಳಿಸಲಾಗುವುದು ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸುದ್ದಿಗೋಷ್ಠಿಯಲ್ಲಿ ಬಂಟ್ಸ್ ವೆಲೈರ್ ಟ್ರಸ್ಟ್ ಅಧ್ಯಕ್ಷರಾದ ಎರ್ಮಾಳ್ ಶಶಿಧರ ಶೆಟ್ಟಿ, ಸಿರಿಮುಡಿ ದತ್ತಿನಿಧಿ ಸ್ಥಾಪಕಧ್ಯಕ್ಷರಾದ ಸಾಂತೂರು ಭಾಸ್ಕರ ಶೆಟ್ಟಿ, ಪಡುಬಿದ್ರಿ ಬಂಟರ ಸಂಘದ ಪ್ರಧಾನ ಕಾರ್ಯದರ್ಶಿ ಪ್ರಕಾಶ್ ಶೆಟ್ಟಿ ಪಡುಹಿತ್ತು, ಕೋಶಾಧಿಕಾರಿ ರವಿ ಶೆಟ್ಟಿ ಗುಂಡ್ಲಾಡಿ, ಉಪಾಧ್ಯಕ್ಷರಾದ ಶ್ರೀನಾಥ್ ಹೆಗ್ಡೆ, ಮಹಿಳಾ ವಿಭಾಗದ ಅಧ್ಯಕ್ಷೆ ಜ್ಯೋತಿ ಆರ್. ಶೆಟ್ಟಿ, ಯುವ ವಿಭಾಗದ ಅಧ್ಯಕ್ಷೆ ನವೀನ್ ಎನ್. ಶೆಟ್ಟಿ ಹಾಗೂ ಸಾಂಸ್ಕೃತಿಕ ವಿಭಾಗದ ಸಂಚಾಲಕ ಜಯ ಶೆಟ್ಟಿ ಉಪಸ್ಥಿತರಿದ್ದರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...