ಪಹಲ್ಗಾಮ್‌ ದಾಳಿ | ಬೀದರ್‌ನಲ್ಲಿ ಸಚಿವ ಈಶ್ವರ ಖಂಡ್ರೆ ನೇತ್ರತ್ವದಲ್ಲಿ ʼಕ್ಯಾಂಡಲ್‌ ಮಾರ್ಚ್‌ʼ

Date:

ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಭಯಾನಕ ಭಯೋತ್ಪಾದಕ ದಾಳಿಯನ್ನು ಖಂಡಿಸಿ ಬೀದರ ಜಿಲ್ಲಾ ಕಾಂಗ್ರೆಸ್ ಹಾಗೂ ಬ್ಲಾಕ್ ಕಾಂಗ್ರೆಸ್ ವತಿಯಿಂದ ಬೀದರನಲ್ಲಿ ಶನಿವಾರ ಸಂಜೆ ಕ್ಯಾಂಡಲ್ ಮಾರ್ಚ್ ನಡೆಯಿತು.

ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಬಿ. ಖಂಡ್ರೆ, ಪೌರಾಡಳಿತ ರಹೀಂ ಖಾನ್‌, ಬೀದರ್‌ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಬಸವರಾಜ ಜಾಬಶೆಟ್ಟಿ, ನಗರಸಭೆ ಅಧ್ಯಕ್ಷ ಮುಹಮ್ಮದ್‌ ಗೌಸ್‌ ನೇತೃತ್ವದಲ್ಲಿ ‘ಕ್ಯಾಂಡಲ್‌ ಮಾರ್ಚ್‌’ ಮಾಡಲಾಯಿತು.

ನಗರದ ಡಾ.ಬಿ.ಆರ್‌.ಅಂಬೇಡ್ಕರ್‌ ವೃತ್ತದ ಕಾಂಗ್ರೆಸ್‌ ಕಾರ್ಯಕರ್ತರು ಮೇಣದ ಬತ್ತಿ ಬೆಳಗಿಸಿ, ಎರಡು ನಿಮಿಷ ಮೌನ ಆಚರಿಸಿ, ಉಗ್ರರ ದಾಳಿಯಲ್ಲಿ ಮೃತಪಟ್ಟವರಿಗೆ ಶ್ರದ್ಧಾಂಜಲಿ ಸಲ್ಲಿಸಿದರು. ಬಳಿಕ ಮೇಣದ ಬತ್ತಿಯೊಂದಿಗೆ ಹೆಜ್ಜೆ ಹಾಕಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸಚಿವ ಈಶ್ವರ ಖಂಡ್ರೆ ಮಾತನಾಡಿ, ʼಭಯೋತ್ಪಾದನೆ ಎಂಬುದು ಮಾನವೀಯತೆಗೆ ವಿರುದ್ಧವಾದ ಅತ್ಯಂತ ಹೀನ ಮತ್ತು ಅಸ್ವೀಕೃತ ಕೃತ್ಯವಾಗಿದೆ. ಈ ದೇಶದ ಏಕತೆ, ಅಖಂಡತೆ ಮತ್ತು ಶಾಂತಿಯನ್ನು ಭಂಗಪಡಿಸುವ ದುಷ್ಕೃತ್ಯಗಳನ್ನು ತೀವ್ರವಾಗಿ ಖಂಡಿಸುತ್ತೇನೆ. ಇಂತಹ ದುರ್ಘಟನೆಗಳು ಮರುಕಳಿಸದಂತೆ ತಡೆಯುವುದು ಸರ್ಕಾರದ ಮುಖ್ಯ ಜವಾಬ್ದಾರಿಯಾಗಿದೆ. ಜನರಿಗೆ ಭದ್ರತೆ ಒದಗಿಸುವಲ್ಲಿ ವೈಫಲ್ಯ ಕಂಡಾಗ, ಕಾರ್ಯತ್ಮಕ ಕ್ರಮ ಕೈಗೊಳ್ಳಬೇಕು. ಸರ್ಕಾರ ಜನರ ಭದ್ರತೆಗೆ ಬದ್ಧವಾಗಿದೆ ಎಂಬ ವಿಶ್ವಾಸವನ್ನು ಜನತೆಗೆ ನೀಡಬೇಕಾದ ಅಗತ್ಯವಿದೆʼ ಎಂದು ತಿಳಿಸಿದರು.

ಈ ಸುದ್ದಿ ಓದಿದ್ದೀರಾ? ಬೀದರ್‌ | ಬಸವ ಜಯಂತಿಯೊಂದಿಗೆ ಪಂಚಾಚಾರ್ಯರ ಯುಗಮಾನೋತ್ಸವಕ್ಕೆ ಖಂಡನೆ; ಹೋರಾಟದ ಎಚ್ಚರಿಕೆ

ಕರ್ನಾಟಕ ಪಶು ವೈದ್ಯಕೀಯ, ಮೀನುಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ಸಿಂಡಿಕೇಟ್‌ ಸದಸ್ಯ ಬಸವರಾಜ ಭತಮುರ್ಗೆ, ಕ್ರಿಶ್ಚಿಯನ್‌ ಅಭಿವೃದ್ಧಿ ನಿಗಮದ ಉಪಾಧ್ಯಕ್ಷ ಸಂಜಯ್‌ ಜಾಹಗೀರದಾರ್‌, ಕಾಂಗ್ರೆಸ್‌ ಮಹಿಳಾ ಮೋರ್ಚಾ ಜಿಲ್ಲಾಧ್ಯಕ್ಷೆ ಪೂಜಾ ಜಾರ್ಜ್‌ ಮತ್ತಿತರರು ಪಾಲ್ಗೊಂಡಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಔರಾದ್‌ | ಅಪ್ಪಟ ದೇಶಪ್ರೇಮಿ ಶಾಹೀದ್ ಭಗತ್ ಸಿಂಗ್

ಭಾರತದ ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ನಿದ್ದೆಗೆಡಿಸಿದ ಸಿಂಹಾಳಿಯಂತೆ ಗರ್ಜಿಸಿ ಭಾರತದ ಹಿರಿಮೆ ಗರಿಮೆಯನ್ನು...

ಬೀದರ್‌ | ಕಾರಂಜಾ ಸಂತ್ರಸ್ತರಿಗೆ ಕಾಲಮಿತಿಯಲ್ಲಿ ವಿಶೇಷ ಪ್ಯಾಕೇಜ್ ಘೋಷಿಸಿ

ಕಾರಂಜಾ ಸಂತ್ರಸ್ತರ ಸಮಸ್ಯೆ ಕುರಿತು ದಶಕಗಳಿಂದ ಹೋರಾಟ ನಡೆಯುತ್ತಿದ್ದು, ಸರ್ಕಾರಕ್ಕೂ ಈ...

ಬೀದರ್‌ನಲ್ಲಿ ಮಾ.25ರಂದು ಉದ್ಯೋಗ ಮೇಳ

ಬೀದರ್ ನಗರದ ನೌಬಾದ್‍ನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿಲ್ಲಾ ಉದ್ಯೋಗ...

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...