ಬೆಂಗಳೂರು | ಅಕ್ರಮ ವಾಸ; ಪಾಕಿಸ್ತಾನ ಪ್ರಜೆ ಸೇರಿ ನಾಲ್ವರ ಬಂಧನ

Date:

ಬೆಂಗಳೂರು ನಗರದ ಹೊರವಲಯದ ಜಿಗಣಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಅಕ್ರಮವಾಗಿ ನೆಲೆಸಿದ್ದ ಪಾಕಿಸ್ತಾನಿ ಪ್ರಜೆ ಮತ್ತು ಇತರ ಮೂವರು ವಿದೇಶಿಗರನ್ನು ಪೊಲೀಸರು ಬಂಧಿಸಿದ್ದಾರೆ. ಪಾಕಿಸ್ತಾನಿ ಪ್ರಜೆ, ಬಾಂಗ್ಲಾದೇಶಿ ಪ್ರಜೆ ಮತ್ತು ಇಬ್ಬರು ಮಕ್ಕಳನ್ನು ವಶಕ್ಕೆ ಪಡೆದಿದ್ದಾರೆ.

ಪಾಕಿಸ್ತಾನಿ ಪ್ರಜೆಯು ಬಾಂಗ್ಲಾದೇಶಿ ಪ್ರಜೆಯಾದ ತನ್ನ ಪತ್ನಿ ಮತ್ತು ಇಬ್ಬರು ಮಕ್ಕಳೊಂದಿಗೆ ಜಿಗಣಿಯಲ್ಲಿರುವ ಅಪಾರ್ಟ್‌ಮೆಂಟ್‌ನಲ್ಲಿ ಅಕ್ರಮವಾಗಿ ವಾಸಿಸುತ್ತಿದ್ದ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿರುವುದಾಗಿ ವರದಿಯಾಗಿದೆ. ಕೇಂದ್ರ ಗುಪ್ತಚರ ಸಂಸ್ಥೆಗಳ ಸುಳಿವಿನ ಮೇರೆಗೆ ಪೊಲೀಸರು ದಾಳಿ ನಡೆಸಿದ್ದರು.

ಸ್ಥಳೀಯ ಪೊಲೀಸರು ಭಾನುವಾರ ರಾತ್ರಿ ಅವರ ನಿವಾಸದ ಮೇಲೆ ದಾಳಿ ನಡೆಸಿ ಬಂಧಿಸಿದ್ದಾರೆ. ಬೆಂಗಳೂರಿನಲ್ಲಿ ಉಲ್ಫಾ ಉಗ್ರರನ್ನು ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಬಂಧಿಸಿದ ನಂತರ ಗುಪ್ತಚರ ದಳದ ಅಧಿಕಾರಿಗಳು ಪಾಕಿಸ್ತಾನಿ ಬೆಂಗಳೂರಿನಲ್ಲಿ ನೆಲೆಸಿರುವ ಬಗ್ಗೆ ಮಾಹಿತಿ ಸಂಗ್ರಹಿಸಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ? ಭೋವಿ ಅಭಿವೃದ್ಧಿ ನಿಗಮದಲ್ಲಿ ಅಕ್ರಮ, ಕೋಟ ಶ್ರೀನಿವಾಸ ಪೂಜಾರಿಗೆ ಕೋಟಿ ಕೋಟಿ ಲಂಚ: ಗೂಳಿಹಟ್ಟಿ ಶೇಖರ್‌ ಗಂಭೀರ ಆರೋಪ

ಧಾರ್ಮಿಕ ವಿಷಯಗಳ ವಿವಾದದ ಕಾರಣ ಪಾಕಿಸ್ತಾನದ ಪ್ರಜೆ ತನ್ನ ದೇಶವನ್ನು ತೊರೆದು ಬಾಂಗ್ಲಾದೇಶಕ್ಕೆ ಹೋಗಿದ್ದನು. ಬಳಿಕ ಬಾಂಗ್ಲಾದ ಢಾಕಾದಲ್ಲಿ ಮಹಿಳೆಯನ್ನು ವಿವಾಹವಾಗಿದ್ದು, ಆತ 2014ರಲ್ಲಿ ಆಕೆಯೊಂದಿಗೆ ಭಾರತಕ್ಕೆ ಬಂದಿದ್ದ ಎನ್ನಲಾಗಿದೆ.

ಆರಂಭದಲ್ಲಿ ದೆಹಲಿಯಲ್ಲಿ ನೆಲೆಸಿ ಅಲ್ಲಿ ಆಧಾರ್ ಕಾರ್ಡ್, ವೋಟರ್ ಐಡಿ ಮತ್ತು ಡ್ರೈವಿಂಗ್ ಲೈಸೆನ್ಸ್ ಪಡೆದುಕೊಂಡಿದ್ದಾನೆ. ಬಳಿಕ 2016ರಲ್ಲಿ ಕುಟುಂಬ ಸಮೇತ ಬೆಂಗಳೂರಿಗೆ ಬಂದಿದ್ದಾನೆ. ಘಟನೆಗೆ ಸಂಬಂಧಿಸಿದಂತೆ ಹೆಚ್ಚಿನ ವಿವರಗಳು ಇನ್ನಷ್ಟೇ ಹೊರಬರಬೇಕಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...