ಗುಬ್ಬಿ ಟಿಎಪಿಸಿಎಂಎಸ್ ಅಧ್ಯಕ್ಷರಾಗಿ ಪಂಚಾಕ್ಷರಿ, ಉಪಾಧ್ಯಕ್ಷರಾಗಿ ಜಯಪ್ರಕಾಶ್ ಅವಿರೋಧ ಆಯ್ಕೆ

Date:

ಗುಬ್ಬಿ ತಾಲ್ಲೂಕು ವ್ಯವಸಾಯೋತ್ಪನ್ನ ಮಾರಾಟ ಸಹಕಾರ ಸಂಘದ ಆಡಳಿತ ಮಂಡಳಿ ಅಧ್ಯಕ್ಷರಾಗಿ ಬೆಣಚಿಗೆರೆ ಬಿ.ಎಸ್.ಪಂಚಾಕ್ಷರಿ ಹಾಗೂ ಉಪಾಧ್ಯಕ್ಷರಾಗಿ ಹಾಗಲವಾಡಿ ಜಯಪ್ರಕಾಶ್ ಅವಿರೋಧ ಆಯ್ಕೆಯಾದರು.

ಟಿಎಪಿಸಿಎಂಎಸ್ ಕಚೇರಿ ಸಭಾಂಗಣದಲ್ಲಿ ನಡೆದ ಚುನಾವಣಾ ಪ್ರಕ್ರಿಯೆಯನ್ನು ಚುನಾವಣಾಧಿಕಾರಿಯಾಗಿ ಸಹಕಾರ ಇಲಾಖೆಯ ಕೆ.ಎಚ್.ಮಹಂತೇಶಯ್ಯ ನಡೆಸಿಕೊಟ್ಟರು. ಒಟ್ಟು 15 ನಿರ್ದೇಶಕರ ಸಮ್ಮುಖದಲ್ಲಿ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಚುನಾವಣೆಗೆ ಏಕೈಕ ನಾಮಪತ್ರ ಸಲ್ಲಿಸಿದ್ದ ಪಂಚಾಕ್ಷರಿ ಹಾಗೂ ಜಯಪ್ರಕಾಶ್ ಪ್ರತಿಸ್ಪರ್ಧಿ ಇಲ್ಲದೆ ಅವಿರೋಧ ಆಯ್ಕೆ ಘೋಷಣೆ ಮಾಡಲಾಯಿತು.

ನೂತನ ಅಧ್ಯಕ್ಷರಾದ ಬಿ.ಎಸ್.ಪಂಚಾಕ್ಷರಿ ಮಾತನಾಡಿ ಕೃಷಿಕ ವರ್ಗದ ಹಿತ ಕಾಯುವ ಜೊತೆಗೆ ಈ ಸಹಕಾರ ಸಂಘವನ್ನು ಅಭಿವೃದ್ದಿ ಪಡಿಸುವ ನಿಟ್ಟಿನಲ್ಲಿ ತಾಲ್ಲೂಕಿನ ಎಲ್ಲಾ ನಿರ್ದೇಶಕರ ಸಹಕಾರ ಪಡೆದು ಕೆಲಸ ಮಾಡುತ್ತೇನೆ. ರೈತರ ಕ್ಷೇತ್ರದಿಂದ ಆಯ್ಕೆಯಾದ ನಾನು ರೈತ ಪರ ಕೆಲಸ ಮಾಡಲು ಎಲ್ಲರ ಸಹಕಾರವನ್ನು ಪಕ್ಷಾತೀತವಾಗಿ ಮಾಡುತ್ತೇನೆ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಡಿಸಿಸಿ ಬ್ಯಾಂಕ್ ನಿರ್ದೇಶಕ ಹಾರನಹಳ್ಳಿ ಪ್ರಭಣ್ಣ ಮಾತನಾಡಿ ಪಕ್ಷಾತೀತ ನಿಲುವು ಸಹಕಾರ ಕ್ಷೇತ್ರದಲ್ಲಿ ಮೊದಲಿನಿಂದಲೂ ಕಂಡಿದೆ. ಆದರೆ ಈ ಬಾರಿ ಚುನಾವಣೆಯಲ್ಲಿ ಸ್ವಲ್ಪ ರಾಜಕಾರಣ ಕಂಡು ಬಂತು. ಆದರೂ ಮತದಾರರು ಆಯ್ಕೆ ಮಾಡಿದ ನಿರ್ದೇಶಕರು ರೈತರ ಪರ ನಿಲ್ಲುತ್ತಾರೆ. ಸರ್ಕಾರ ಹಾಗೂ ಸಹಕಾರ ಇಲಾಖೆಯ ಸಹಾಯ ಪಡೆದು ಕೆ.ಎನ್.ರಾಜಣ್ಣ ಅವರ ಮಾರ್ಗದರ್ಶನದಲ್ಲಿ ಸಂಘವನ್ನು ಹೆಚ್ಚಿನ ರೀತಿಯಲ್ಲಿ ಉನ್ನತಗೊಳಿಸುವ ಕೆಲಸ ಎಲ್ಲರೂ ಒಗ್ಗೂಡಿ ಮಾಡುತ್ತೇವೆ ಎಂದರು.

ನೂತನ ಉಪಾಧ್ಯಕ್ಷ ಜಯಪ್ರಕಾಶ್ ಮಾತನಾಡಿ ಕೆಲ ನಿರ್ದೇಶಕರ ಆಯ್ಕೆ ಅವಿರೋಧ ಹಾಗೂ ಕೆಲ ಸದಸ್ಯರ ಆಯ್ಕೆ ಮತದಾನ ಮೂಲಕ ನಡೆದಿದೆ. ಆದರೆ ನಂತರದಲ್ಲಿ ಯಾವ ಗೊಂದಲವಿಲ್ಲದೆ ಅವಿರೋಧವಾಗಿ ಅಧ್ಯಕ್ಷ ಹಾಗೂ ಉಪಾಧ್ಯಕ್ಷರ ಆಯ್ಕೆ ನಡೆದಿದೆ. ಈ ಸ್ಥಾನಕ್ಕೆ ನ್ಯಾಯ ಒದಗಿಸುವ ಕೆಲಸ ಮಾಡುತ್ತೇವೆ ಎಂದರು.

ಈ ಸಂದರ್ಭದಲ್ಲಿ ನೂತನ ಅಧ್ಯಕ್ಷ ಹಾಗೂ ಉಪಾಧ್ಯಕ್ಷರ ಬೆಂಬಲಿಗರು ಪಟಾಕಿ ಸಿಡಿಸಿ ಸಿಹಿ ಹಂಚಿ ಸಂಭ್ರಮಿಸಿದರು. ನಿರ್ದೇಶಕರಾದ ನಟರಾಜು, ಕೆ.ಆರ್.ಬಸವರಾಜು, ಜಿ.ಯತೀಶ್, ಸಿ.ಎಂ.ಹಿತೇಶ್, ರಾಮಚಂದ್ರ, ಜಗದೀಶಯ್ಯ, ಲಕ್ಷ್ಮೀನಾರಾಯಣ್, ಎನ್.ಸಿ.ಗಿರೀಶ್, ವೈ.ಜಿ.ತ್ರಿನೇಶ್, ಕೆ.ಎನ್.ಸವಿತಾ, ಎಸ್. ವಸಂತಾ, ಸಹಕಾರ ಸಂಘಗಳ ಸಹಾಯಕ ನಿಬಂಧಕ ಓಬಳೇಶ್, ಸಹಕಾರ ಯೂನಿಯನ್ ನಿರ್ದೇಶಕ ಜಿ. ಡಿ.ಸುರೇಶಗೌಡ, ಸಂಘದ ಕಾರ್ಯದರ್ಶಿ ಎಸ್.ವಿ.ಶ್ರೀನಾಥ್, ಮುಖಂಡರಾದ ಎಚ್.ಟಿ.ಭೈರಪ್ಪ, ಯತೀಶ್, ಸಿದ್ದರಾಮಯ್ಯ, ಉಮೇಶ್, ಜಿ.ಆರ್.ಪ್ರಕಾಶ್, ಡಿ.ರಘು, ಅರ್ಜುನ್, ಅನಿಲ್, ಅರೇಹಳ್ಳಿ ರಾಜು ಸೇರಿದಂತೆ ಸಂಘದ ಎಲ್ಲಾ ಸಿಬ್ಬಂದಿಗಳು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...