ಮದ್ದೂರು ನೂತನ ನಗರಸಭೆಗೆ ಪೌರಾಯುಕ್ತರಾಗಿ ಪರಶುರಾಮ್‌ ಸತ್ತಿಗೇರಿ ನೇಮಕ

Date:

ಮದ್ದೂರು ಪುರಸಭೆಯನ್ನು ನಗರಸಭೆಯನ್ನಾಗಿ ಮೇಲ್ದರ್ಜೆಗೇರಿಸಿದ್ದು, ಸರ್ಕಾರದ ಅಧಿಸೂಚನೆಯಂತೆ ಮಂಡ್ಯ ಜಿಲ್ಲಾಧಿಕಾರಿ ಡಾ. ಕುಮಾ‌ರ್ ಅವರು ಮುಂದಿನ ಆದೇಶದವರೆಗೆ ಮದ್ದೂರು ತಹಶೀಲ್ದಾ‌ರ್ ಪರಶುರಾಮ್ ಸತ್ತಿಗೇರಿ ಅವರನ್ನು ಪ್ರಭಾರ ಪೌರಾಯುಕ್ತರನ್ನಾಗಿ ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ.

ನೂತನ ಪ್ರಭಾರ ಪೌರಾಯುಕ್ತರಾಗಿ ಅಧಿಕಾರ ವಹಿಸಿಕೊಂಡ ಪರಶುರಾಮ್‌ ಸತ್ತಿಗೇರಿ ಅವರು ಜನಪ್ರತಿನಿಧಿಗಳು ಹಾಗೂ ಕಚೇರಿ ಸಿಬ್ಬಂದಿಗಳಿಂದ ಸನ್ಮಾನ ಸ್ವೀಕರಿಸಿ ಮಾತನಾಡಿ, ಚುನಾಯಿತ ಜನಪ್ರತಿನಿಧಿಗಳು, ಕಚೇರಿ ಸಿಬ್ಬಂದಿ, ಸಾರ್ವಜನಿಕರ ಸಹಕಾರದೊಂದಿಗೆ ನಗರದಲ್ಲಿ ಕುಡಿಯುವ ನೀರು, ನೈರ್ಮಲ್ಯಕ್ಕೆ ಮೊದಲ ಆದ್ಯತೆ ನೀಡಿ ಹಂತ ಹಂತವಾಗಿ ನಗರದ ಅಭಿವೃದ್ಧಿಗೆ ಶ್ರಮಿಸಲಾಗುವುದು ಎಂದರು.

ಇದನ್ನೂ ಓದಿ: ಮದ್ದೂರು | ಕೋಮುವಾದಿಗಳ ಪರ ಸರ್ಕಾರದ ಮೃದು ಧೋರಣೆಯೇ ಸಾಮರಸ್ಯ ಕದಡಲು ಕಾರಣ: ಕೃಷ್ಣೇಗೌಡ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮದ್ದೂರು ಪುರಸಭೆ ನಗರಸಭೆಯಾಗಿ ಮೇಲ್ದರ್ಜೆಗೇರಿದ್ದು, ನಗರದಲ್ಲಿ ತುಂಬಾ ಕೆಲಸಗಳು ಆಗಬೇಕಾಗಿದೆ. ಕೆಲ ದಿನಗಳಲ್ಲೆ ಸ್ಥಳೀಯ ಸಂಸ್ಥೆ ಚುನಾವಣೆ ಎದುರಾಗಲಿದ್ದು, ಹೀಗಾಗಿ ಅತೀ ಜರೂರಾಗಿ ವಾರ್ಡ್‌ಗಳ ವಿಂಗಡಣೆ ಕೆಲಸವಾಗಬೇಕಾಗಿದೆ. ಕೆಲಸಗಳಿಗೆ ಕಚೇರಿ ಸಿಬ್ಬಂದಿ ಕೊರತೆ ಇದೆ. ಅದನ್ನು ನೀಗಿಸಲು ಸರ್ಕಾರ ಮತ್ತು ಜಿಲ್ಲಾಡಳಿತದ ಜೊತೆ ಪ್ರಾಮಾಣಿಕವಾಗಿ ಪ್ರಯತ್ನಿಸಲಾಗುವುದು ಎಂದರು.

ನಗರಸಭಾ ಅಧ್ಯಕ್ಷೆ ಕೋಕಿಲ ಅರುಣ್, ಉಪಾಧ್ಯಕ್ಷ , ಸ್ಥಾಯಿ ಸಮಿತಿ ಅಧ್ಯಕ್ಷೆ ವನಿತಾ, ಪ್ರಭಾರ ಮುಖ್ಯಾಧಿಕಾರಿ ಶ್ರೀಧ‌ರ್, ಸಿಬ್ಬಂದಿಗಳು ಈ ವೇಳೆ ಹಾಜರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...