ಉಡುಪಿ | ಪರಶುರಾಮ ಥೀಮ್ ಪಾರ್ಕ್ ಹಗರಣ : ನಿರ್ಮಿತಿ ಕೇಂದ್ರದ ಯೋಜನಾ ನಿರ್ದೇಶಕ ಅರುಣಕುಮಾರ್ ಅಮಾನತು

Date:

ಪರಶುರಾಮ ಥೀಮ್ ಪಾರ್ಕ್ ಕಾಮಗಾರಿ ಅವ್ಯವಹಾರಕ್ಕೆ ಸಂಬಂಧಿಸಿದಂತೆ ನಿರ್ಮಿತಿ ಕೇಂದ್ರದ ನಿರ್ದೇಶಕ ಅರುಣಕುಮಾರ್ ಅವರನ್ನು ಅಮಾನತುಗೊಳಿಸಿ ಜಿಲ್ಲಾಧಿಕಾರಿ ಡಾ.ವಿದ್ಯಾಕುಮಾರಿ ಆದೇಶ ಹೊರಡಿಸಿದ್ದಾರೆ.

ರಾಜ್ಯಾದ್ಯಂತ ಭಾರೀ ಸುದ್ದಿಯಾಗಿದ್ದ ಹಿಂದುತ್ವದ ಭಾವನೆಗಳಿಗೆ ಧಕ್ಕೆಯಾದ ಕಾರ್ಕಳ ತಾಲೂಕಿನ ಯರ್ಲಪಾಡಿ ಗ್ರಾಮದ ಉಮಿಕಲ್ ಬೆಟ್ಟದಲ್ಲಿ ನಿರ್ಮಿಸಿರುವ ಪರಶುರಾಮ ಥೀಮ್ ಪಾರ್ಕ್ ಕಾಮಗಾರಿ ಪೂರ್ಣಗೊಳಿಸದೇ ಸಂಬಂಧಪಟ್ಟ ಇಲಾಖೆಗೆ ಹಸ್ತಾಂತರ ಮಾಡದಿರುವ ಆರೋಪದಡಿ ಅಮಾನತು ಮಾಡಲಾಗಿದೆ.

ಥೀಮ್ ಪಾರ್ಕ್ ನಿರ್ಮಾಣಕ್ಕೆ‌ ಒಟ್ಟು 11.5 ಕೋಟಿ ರೂ. ಮಂಜೂರಾಗಿ, 6.72 ಕೋಟಿ ಅನುದಾನ ಬಿಡುಗಡೆಯಾಗಿತ್ತು. ಆದರೆ, ಕಾಮಗಾರಿ ಪೂರ್ಣಗೊಳಿಸದೆ ಸಂಬಂಧಪಟ್ಟ ಇಲಾಖೆಗೆ ಹಸ್ತಾಂತರಿಸದೇ ತರಾತುರಿಯಲ್ಲಿ ಉದ್ಘಾಟಿಸಿದ ಕಾರಣ ಕಾಮಗಾರಿ ಗುಣಮಟ್ಟ ಹಾಗೂ ಧಾರ್ಮಿಕ ಭಾವನೆಗಳಿಗೆ ಅಪಚಾರವಾಗುತ್ತಿರುವ ಬಗ್ಗೆ ಸಾರ್ವಜನಿಕ ವಲಯದಲ್ಲಿ ನಡೆದ ಭಾರಿ ಪರ-ವಿರೋಧ ಚರ್ಚೆಗಳ ಕುರಿತು ಮಾಧ್ಯಮಗಳಲ್ಲಿ ಸುದ್ದಿಯಾಗಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಚಿಕ್ಕಬಳ್ಳಾಪುರ | ಹೃದಯ ವಿದ್ರಾವಕ ಘಟನೆ; ಅಪ್ಪ, ಮಗನನ್ನು ಕೊಂದ ಚಿಕ್ಕಪ್ಪ

ಈ ಕಾಮಗಾರಿಯ ಬಗ್ಗೆ ಪೊಲೀಸ್ ಇಲಾಖೆ ಹಾಗೂ ನ್ಯಾಯಮೂರ್ತಿ ಹೆಚ್.ಎನ್.ನಾಗಮೋಹನ್‌ದಾಸ್ ವಿಚರಣಾ ಆಯೋಗದಲ್ಲಿ ತನಿಖಾ ಹಂತದಲ್ಲಿದ್ದು, ತನಿಖೆಗೆ ಅಡ್ಡಿ ಉಂಟಾಗುವ ಸಾಧ್ಯತೆ ಇರುವುದರಿಂದ ಆಡಳಿತಾತ್ಮಕ ಹಿತದೃಷ್ಟಿಯಿಂದ ನಿರ್ದೇಶಕರನ್ನು ಕರ್ತವ್ಯದಿಂದ ಅಮಾನತು ಮಾಡಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...