ಹರಿಪ್ರಸಾದ್ ನಡೆಯನ್ನು ಪಕ್ಷ ಗಮನಿಸುತ್ತಿದ್ದು, ಹೈಕಮಾಂಡ್‌ ಉತ್ತರಿಸಲಿದೆ: ಎಂ ಬಿ ಪಾಟೀಲ

Date:

  • ‘ಕಾಂಗ್ರೆಸ್ ರಾಷ್ಟ್ರೀಯ ನಾಯಕರು ಸುಮ್ಮನೆ ಕೂರುವುದಿಲ್ಲ‌’
  • ‘ಹರಿಪ್ರಸಾದ್‌ ಮುಂದಿನ ಪರಿಣಾಮ ಎದುರಿಸಬೇಕಾಗುತ್ತದೆ’

ಬಿ ಕೆ ಹರಿಪ್ರಸಾದ್ ಅವರು ಪಕ್ಷದ ಹಿರಿಯ ನಾಯಕರು. ಅವರು ಎಐಸಿಸಿ ಪ್ರಧಾನ ಕಾರ್ಯದರ್ಶಿ, ರಾಜ್ಯಸಭಾ ಸದಸ್ಯ, ವಿಧಾನ ಪರಿಷತ್ತಿನಲ್ಲಿ ಪಕ್ಷದ ನಾಯಕರಾಗಿ ಕೆಲಸ ಮಾಡಿರುವವರು. ಅವರಿಂದ ಇಂತಹ ಮಾತು ಬರಬಾರದಿತ್ತು. ಅವರ ಮಾತುಗಳನ್ನು ಕೇಳಿಸಿಕೊಂಡು ಪಕ್ಷದ ರಾಷ್ಟ್ರೀಯ ನಾಯಕರು ಸುಮ್ಮನೆ ಕೂರುವುದಿಲ್ಲ ಎಂದು ಬೃಹತ್ ಕೈಗಾರಿಕಾ ಸಚಿವ ಎಂ ಬಿ ಪಾಟೀಲ ಹೇಳಿದರು.

ಬೆಂಗಳೂರಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, “ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಗುರಿಯಾಗಿಟ್ಟುಕೊಂಡು ಪರೋಕ್ಷ ವಾಗ್ದಾಳಿ ನಡೆಸಿರುವ ಬಿ ಕೆ ಹರಿಪ್ರಸಾದ್ ಅವರ ನಡೆಯನ್ನು ಪಕ್ಷ ಗಮನಿಸುತ್ತಿದೆ. ಹೈಕಮಾಂಡ್‌ ಸೂಕ್ತ ತೀರ್ಮಾನ ತೆಗೆದುಕೊಳ್ಳಲಿದೆ” ಎಂದರು.

“ಸೋನಿಯಾ ಗಾಂಧಿ, ರಾಹುಲ್ ಗಾಂಧಿ, ಮಲ್ಲಿಕಾರ್ಜುನ ಖರ್ಗೆ, ಸುರ್ಜೇವಾಲಾ, ವೇಣುಗೋಪಾಲ್ ಎಲ್ಲರಿಗೂ ಹರಿಪ್ರಸಾದ್‌ ಆತ್ಮೀಯರು. ಹೀಗಿರುವಾಗ ಅವರು ಎಲ್ಲ ವಿಚಾರಗಳನ್ನೂ ಪಕ್ಷದ ಒಳಗೇ ಮಾತನಾಡಬೇಕಿತ್ತು. ಆದರೆ ಅವರು ಬೀದಿಗೆ ಹೋಗಿದ್ದಾರೆ. ಇದು ಸರಿಯಲ್ಲ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಅಸಮಾಧಾನದ ಕಿಡಿ ಜ್ವಾಲೆಯಾಗಿ ಸರ್ಕಾರವನ್ನು ಸುಡದಿರಲಿ

“ಕಾಂಗ್ರೆಸ್ಸಿನಲ್ಲಿ ಯಾವ ಅಂತಃಕಲಹವೂ ಇಲ್ಲ. ಆದರೆ, ಬಹಿರಂಗವಾಗಿ ಮಾತನಾಡಿರುವ ಹರಿಪ್ರಸಾದ್‌ ಅವರು ಇದರ ಪರಿಣಾಮಗಳನ್ನು ಮುಂದೆ ಎದುರಿಸಬೇಕಾಗುತ್ತದೆ” ಎಂದು ಹೇಳಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...