‘ಊಟಕ್ಕಿಲ್ಲದ ಉಪ್ಪಿನಕಾಯಿ’ ರೀತಿಯಲ್ಲಿವೆ ‘ಪಶು ಸಂಜೀವಿನಿ’ ಆ್ಯಂಬುಲೆನ್ಸ್‌ಗಳು

Date:

ಹೈನುಗಾರಿಕೆ ಉತ್ತೇಜನ, ಜಾನುವಾರುಗಳ ಆರೋಗ್ಯ ರಕ್ಷಿಸುತ್ತೇವೆಂದು ಕೇಂದ್ರ-ರಾಜ್ಯಗಳು ಒಗ್ಗೂಡಿ ಜಾರಿಗೆ ತಂದ ‘ಪಶು ಸಂಜೀವಿನಿ’ ಯೋಜನೆ ‘ಊಟಕ್ಕಿಲ್ಲದ ಉಪ್ಪಿನಕಾಯಿಯಂತಾಗಿದೆ’ ಎಂದು ರೈತರು ಹೇಳುತ್ತಿದ್ದಾರೆ. ಯೋಜನೆ ಜಾರಿಯಾಗಿ ಒಂದು ವರ್ಷ ಪೂರೈಸುತ್ತಿದ್ದರೂ, ಯೋಜನೆಯ ಫಲಭವ ಮಾತ್ರ ಯಾರಿಗೂ ದೊರೆತಿಲ್ಲವೆಂದೂ ಆರೋಪಿಸಲಾಗಿದೆ.

ಕೇಂದ್ರ ಮತ್ತು ರಾಜ್ಯ ಸರ್ಕಾರಗಳು 60:40 ಸಹಭಾಗಿತ್ವದಲ್ಲಿ 2022ರ ಜುಲೈನಲ್ಲಿ ‘ಪಶುಸಂಜೀವಿನಿ’ ಯೋಜನೆಯನ್ನು ಜಾರಿಗೊಳಿಸಿದ್ದವು. ಇರದಂತೆ ರಾಜ್ಯದ ಎಲ್ಲ ತಾಲೂಕುಗಳಿಗೂ ತಲಾ ಒಂದರಕ್ಕೆ 300 ಆ್ಯಂಬುಲೆನ್ಸ್‌ಗಳನ್ನು ಒದಗಿಸಲಾಗಿತ್ತು. ಆದರೆ, ಆ್ಯಂಬುಲೆನ್ಸ್‌ ಪಶು ಆಸ್ಪತ್ರೆಗಳ ಬಾಗಿಲಿನಲ್ಲಿ ನಿಂತು ಒಂದು ವರ್ಷವೇ ಕಳೆದರೂ, ಅವು ನಿಂತ ಜಾಗದಿಂದ ಕದಲಿಲ್ಲ. ಚಾಲಕರು ಮತ್ತು ಸಹಾಯಕರ ಕೊರತೆಯಿಂದ ಅವುಗಳು ನಿಂತಲ್ಲಿಯೇ ನಿಂತಿವೆ. ಅವುಗಳನ್ನು ಬಳಕೆ ಮಾಡಿಕೊಳ್ಳುವಲ್ಲಿ ಪಶುಪಾಲನೆ ಇಲಾಖೆಯ ವೈದ್ಯರು ಮತ್ತು ಸಿಬ್ಬಂದಿಯೂ ಅಸಹಾಯಕರಾಗಿದ್ದಾರೆ.

ಉಡುಪಿ ಜಿಲ್ಲೆಯಲ್ಲಿ 8 ಹೊಸ ಆ್ಯಂಬುಲೆನ್ಸ್‌ಗಳು ಬಿಸಿಲು ಮಳೆ ಎನ್ನದೇ ನಿಂತಲ್ಲೇ ನಿಂತಿವೆ. ಇದೀಗ, ವಾಹನಗಳ ಕೆಳಗೆ ಕಳೆ ಗಿಡಗಳು ಬೆಳೆದಿವೆ. ಜನರ ತೆರಿಗೆ ಹಣ ಯಾವ ರೀತಿಯಲ್ಲಿ ಪೋಲಾಗುತ್ತಿದೆ ಎಂಬುದಕ್ಕೆ ಇದು ಕೂಡ ಒಂದು ಉದಾಹರಣೆ. ಕೋಟ್ಯಾಂತರ ರೂಪಾಯಿ ವೆಚ್ಚದಲ್ಲಿ ಸರ್ಕಾರಗಳು ಯೋಜನೆಗಳನ್ನು ರೂಪಿಸಿದರೂ, ಸಮರ್ಪಕವಾಗಿ ಕಾರ್ಯರೂಪಕ್ಕೆ ತಂದು ಬಳಕೆ ಮತ್ತು ನಿರ್ವಹಣೆ ಮಾಡುವಲ್ಲಿ ವಿಫಲವಾಗುತ್ತಿವೆ ಎಂದು ಹಲವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
WhatsApp Image 2023 08 05 at 11.35.54 PM

ವಾಹನದಲ್ಲಿ ಆಧುನಿಕ ಶಸ್ತ್ರಚಿಕಿತ್ಸೆ, ಪ್ರಯೋಗಶಾಲೆ ಮತ್ತು ಸ್ಕ್ಯಾನಿಂಗ್‌ಗೆ ಅಗತ್ಯವಿರುವ ಉಪಕರಣಗಳನ್ನು ಅಳವಡಿಸಲಾಗಿದೆ. ಆದರೆ, ಆ್ಯಂಬುಲೆನ್ಸ್‌ ಬಳಕೆಯಾಗದೇ ಲಕ್ಷಾಂತರ ರೂಪಾಯಿ ಮೌಲ್ಯದ ಯಂತ್ರೋಪಕರಣಗಳೂ ಹಾಳಾಗುತ್ತಿವೆ. ಇದರಿಂದ ಸಾರ್ವಜನಿಕರ ತೆರಿಗೆ ಹಣವೂ ಪೋಲಾಗುತ್ತಿದೆ. ಸಂಭದ ಪಟ್ಟ ಇಲಾಖೆಯ ಅಧಿಕಾರಿಗಳು ಮತ್ತು ಸಚಿವರು ಆ್ಯಂಬುಲೆನ್ಸ್‌ ಬಳಕೆಯ ಕುರಿತು ಗಮನ ಹರಿಸಬೇಕು ಎಂದು ಹೈನುಗಾರಿಕೆ ಮಾಡುತ್ತಿರುವ ರೈತರು ಒತ್ತಾಯಿಸಿದ್ದಾರೆ.

ಆ್ಯಂಬುಲೆನ್ಸ್‌ ಬಳಕೆಯಲ್ಲಿನ ಲೋಪಗಳ ಕುರಿತು ಈದಿನ.ಕಾಮ್‌ ಜೊತೆ ಮಾತನಾಡಿದ ಉಡುಪಿಯ ಪಶು ವೈದ್ಯ ಡಾ. ಚಂದ್ರಶೇಖರ್, “ಉಡುಪಿ ಜಿಲ್ಲೆಗೆ ಒಟ್ಟು 8 ಆಂಬ್ಯುಲೆನ್ಸ್‌ಗಳನ್ನು ನೀಡಲಾಗಿದೆ. ಅವುಗಳಲ್ಲಿ ಏಳು ತಾಲೂಕಿಗೆ ಒಂದರಂತೆ ಮತ್ತು ಪಾಲಿ ಕ್ಲಿನಿಕ್‌ಗೆ ಒಂದನ್ನು ನೀಡಲಾಗಿದೆ. ಯಜೇಸ್ ಸ್ಪಾರ್ಕ್ ಎನ್ನುವ ಕಂಪನಿ ಅವುಗಳ ನಿರ್ವಹಣೆಯ ಗುತ್ತಿಗೆ ತೆಗೆದುಕೊಂಡಿದೆ. ಅವರೇ ಎಲ್ಲ ರೀತಿಯಲ್ಲಿ ಆ್ಯಂಬುಲೆನ್ಸ್‌ಗಳ ನಿರ್ವಹಣೆ ಮಾಡಬೇಕು. ಒಂದು ಆಂಬ್ಯುಲೆನ್ಸ್‌ಗೆ ಒಬ್ಬ ಡಾಕ್ಟರ್, ಒಬ್ಬ ವಿಎಲ್ ಮತ್ತು ಒಬ್ಬ ‘ಡಿ ಗ್ರೂಪ್’ ನೌರಕರನ್ನು ಕಂಪನಿ ನೇಮಿಸಿಕೊಂಡು, ಆ್ಯಂಬುಲೆನ್ಸ್‌ಗಳ ಬಳಕೆಯನ್ನು ಆರಂಭಿಸಬೇಕಿತ್ತು. ಆದರೆ, ಅವುಗಳ ಬಳಕೆ ಆರಂಭವಾಗಿಲ್ಲ” ಎಂದು ತಿಳಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಶಾರೂಕ್ ತೀರ್ಥಹಳ್ಳಿ
ಶಾರೂಕ್ ತೀರ್ಥಹಳ್ಳಿ
ಮೂಲತಃ ತೀರ್ಥಹಳ್ಳಿಯವರಾದ ಇವರು ಪ್ರಸ್ತುತ ಈದಿನ. ಕಾಮ್ ಉಡುಪಿ ಜಿಲ್ಲಾ ವರದಿಗಾರರಾಗಿ ಮತ್ತು ಕರಾವಳಿ ಮಲೆನಾಡು ಭಾಗದ ವಲಯ ಸಂಯೋಜಕರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. 2017 ರಿಂದ ಪತ್ರಿಕೋದ್ಯಮದಲ್ಲಿ ತೊಡಗಿಸಿಕೊಂಡ ಇವರು ದಿನ ಪತ್ರಿಕೆ, ವಾರ ಪತ್ರಿಕೆ, ನ್ಯೂಸ್ ವೆಬ್ ಪೋರ್ಟಲ್ ನಲ್ಲಿ ಕಾರ್ಯನಿರ್ವಹಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...