ಪಾವಗಡ | ವೆಂಕಟಮ್ಮನಹಳ್ಳಿ ಪೊಲೀಸ್‌ ಹತ್ಯಾಕಾಂಡ: 19 ವರ್ಷದ ಬಳಿಕ ಆರೋಪಿಯ ಬಂಧನ

Date:

ತುಮಕೂರು ಜಿಲ್ಲೆಯ ಪಾವಗಡ ತಾಲೂಕಿನ ನಾಗಲಮಡಿಕೆ ಹೋಬಳಿಯ ವೆಂಕಟಮ್ಮನಹಳ್ಳಿಯಲ್ಲಿ 2005ರಲ್ಲಿ ನಡೆದ ಏಳು ಪೊಲೀಸರ ಹತ್ಯಾಕಾಂಡದ ಆರೋಪಿಯೋರ್ವನನ್ನು ಪೊಲೀಸರು 19 ವರ್ಷಗಳ ನಂತರ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಬಂಧಿತನನ್ನು ಮಾಜಿ ನಕ್ಸಲ್ ಚಂದ್ರ ಅಲಿಯಾಸ್ ಬಿ.ಮುತ್ಯಾಲು (36) ಎಂದು ಗುರುತಿಸಲಾಗಿದೆ. ಈತ ಈ ಪ್ರಕರಣದಲ್ಲಿ 75ನೇ ಆರೋಪಿಯಾಗಿದ್ದ.

2005ರ ಫೆಬ್ರುವರಿ 10ರಂದು ವೆಂಕಟಮ್ಮನಹಳ್ಳಿಯಲ್ಲಿ ನಕ್ಸಲರು ದಾಳಿ ನಡೆಸಿ ಏಳು ಪೊಲೀಸರನ್ನು ಹತ್ಯೆ ಮಾಡಿದ್ದು ದೇಶಾದ್ಯಂತ ದೊಡ್ಡ ಸುದ್ದಿಯಾಗಿತ್ತು. ಘಟನೆ ನಡೆದ ನಂತರ ತಲೆಮರೆಸಿಕೊಂಡಿದ್ದ ಆರೋಪಿ ಬಿ.ಮುತ್ಯಾಲು ವಿರುದ್ಧ ಪಟ್ಟಣದ ಜೆಎಂಎಫ್‌ಸಿ ನ್ಯಾಯಾಲಯ ಜಾಮೀನು ರಹಿತ ವಾರಂಟ್ ಹೊರಡಿಸಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕಳೆದ 19 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಈತ, ಆಂಧ್ರದ ಅನಂತಪುರ ಜಿಲ್ಲೆಯ ಗಾರಲದಿನ್ನೆಯ ಕೇಶವಪುರದ ನಿವಾಸಿಯಾಗಿದ್ದು, ಬೆಂಗಳೂರಿನ ಬಿಬಿಎಂಪಿಯಲ್ಲಿ ಕೂಲಿ ಕಾರ್ಮಿಕನಾಗಿ ಕೆಲಸ ಮಾಡುತ್ತಿದ್ದ ಎಂದು ತಿಳಿದುಬಂದಿದೆ.

ವೆಂಕಟಮ್ಮನಹಳ್ಳಿ ಪೊಲೀಸ್‌ ಹತ್ಯಾಕಾಂಡ 2
ಚಂದ್ರ ಅಲಿಯಾಸ್ ಬಿ.ಮುತ್ಯಾಲು

ಆರೋಪಿಯನ್ನು ಘಟನೆ ನಡೆದು ಒಂದೂವರೆ ದಶಕದ ಬಳಿಕ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದು, ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ನ್ಯಾಯಾಲಯವು ನ್ಯಾಯಾಂಗ ಬಂಧನ ವಿಧಿಸಿದ ಹಿನ್ನೆಲೆಯಲ್ಲಿ, ಪರಪ್ಪನ ಅಗ್ರಹಾರಕ್ಕೆ ಕಳುಹಿಸಲಾಗಿದೆ.

ಪ್ರಕರಣದ ಹಿನ್ನೆಲೆ

ವೆಂಕಟಮ್ಮನಹಳ್ಳಿ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಭದ್ರತಾ ದೃಷ್ಟಿಯಿಂದ ನಿಯೋಜಿಸಿದ್ದ ಕೆಎಸ್‌ಆರ್‌ಪಿ 9ನೇ ಕ್ಯಾಂಪ್‌ನ ಮೇಲೆ ಸುಮಾರು 300ಕ್ಕೂ ಹೆಚ್ಚು ನಕ್ಸಲರ ತಂಡವು 2005ರ ಫೆಬ್ರುವರಿ 10ರಂದು ಏಕಾಏಕಿ ದಾಳಿ ನಡೆಸಿತ್ತು.

ಲಾರಿಗಳಲ್ಲಿ ಬಂದಿದ್ದ ನಕ್ಸಲರು, ಒಮ್ಮೆಲೆ ದಾಳಿ ನಡೆಸಿ ಪೊಲೀಸರ ಬಳಿ ಇದ್ದ ಬಂದೂಕು, ಮದ್ದು ಗುಂಡುಗಳನ್ನು ದೋಚಿದ್ದರು. ನಂತರ ಮನ ಬಂದಂತೆ ಗುಂಡು ಹಾರಿಸಿದ್ದರು. ಘಟನೆಯಲ್ಲಿ, ಏಳು ಮಂದಿ ಪೊಲೀಸರು ಮೃತಪಟ್ಟಿದ್ದರು ಹಾಗೂ ಕ್ಯಾಂಪ್ ಮುಂಭಾಗ ನಿಂತಿದ್ದ ಖಾಸಗಿ ಬಸ್ ಕ್ಲೀನರ್​ನನ್ನ ಕೊಲೆ ಮಾಡಲಾಗಿತ್ತು. ತಿರುಮಣಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ವೆಂಕಟಮ್ಮನಹಳ್ಳಿ ಪೊಲೀಸ್‌ ಹತ್ಯಾಕಾಂಡ ಪ್ರಕರಣದ ಕುರಿತು ಪಾವಗಡ ಮತ್ತು ಮಧುಗಿರಿ ನ್ಯಾಯಾಲಯದಲ್ಲಿ ಇನ್ನೂ ವಿಚಾರಣೆ ನಡೆಯುತ್ತಿದೆ. ಬಹುತೇಕ ಆರೋಪಿಗಳ ವಿರುದ್ಧ ಕೋರ್ಟ್ ಜಾಮೀನು ರಹಿತ ವಾರಂಟ್ ಹೊರಡಿಸಿದೆ.

ಕೆಲವು ಆರೋಪಿಗಳು ಆಂಧ್ರ ಪ್ರದೇಶ, ಬೆಂಗಳೂರಿನಲ್ಲಿ ಕಾರ್ಮಿಕರಾಗಿ ಜೀವನ ಸಾಗಿಸುತ್ತಿದ್ದಾರೆ. ಪ್ರಕರಣದ ಸಂಬಂಧ ಪೊಲೀಸರು ಆರೋಪಿಗಳನ್ನು ಹಂತ ಹಂತವಾಗಿ ಬಂಧಿಸಿ ನ್ಯಾಯಾಲಯಕ್ಕೆ ಹಾಜರು ಪಡಿಸುತ್ತಿದ್ದಾರೆ.

ತುಮಕೂರು, ಬೆಂಗಳೂರು ಐಎಸ್‌ಡಿ ವಿಭಾಗದ ನಕ್ಸಲ್ ನಿಗ್ರಹ ಪಡೆ ಮಾಹಿತಿ ಮೇರೆಗೆ ತುಮಕೂರು ಜಿಲ್ಲಾ ವರಿಷ್ಠಾಧಿಕಾರಿಗಳ ತಂಡ, ಸಿಐ ತಂಡವು ತಲೆ ಮರೆಸಿಕೊಂಡಿದ್ದ ಮುತ್ಯಾಲ ಚಂದ್ರುನನ್ನು ಬೆಂಗಳೂರಿನ ಜೆ.ಪಿ.ನಗರದ ಸುರಭಿ ನಗರದ ಮನೆಯಲ್ಲಿ ಬಂಧಿಸಿದ್ದಾರೆ.

ವೆಂಕಟಮ್ಮನಹಳ್ಳಿ ಪೊಲೀಸ್‌ ಹತ್ಯಾಕಾಂಡ
ಶಂಕರ ಅಲಿಯಾಸ್ ಕೊತ್ತಗೆರೆ ಶಂಕರ

ಕಳೆದ ಮೇ ತಿಂಗಳಲ್ಲಿ ಬೆಂಗಳೂರಿನ ಗೌರಿಪಾಳ್ಯದಲ್ಲಿ ವಾಸವಿದ್ದುಕೊಂಡು ಬಿಬಿಎಂಪಿಯಲ್ಲಿ ಡ್ರೈವರ್ ಆಗಿ ಕೆಲಸ ಮಾಡುತ್ತಿದ್ದ ಶಂಕರ ಅಲಿಯಾಸ್ ಕೊತ್ತಗೆರೆ ಶಂಕರ (38) ಎಂಬಾತನನ್ನು ಕೂಡ ಬಂಧಿಸಲಾಗಿತ್ತು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...