ರಾಯಚೂರು | ಪೆನ್ನು ಕದ್ದ ಆರೋಪ; ಬಾಲಕನನ್ನು ಕೋಣೆಯಲ್ಲಿ ಕೂಡಿಟ್ಟು ಚಿತ್ರಹಿಂಸೆ ನೀಡಿದ ರಾಮಕೃಷ್ಣ ಆಶ್ರಮದ ಗುರೂಜಿ!

Date:

ರಾಯಚೂರಿನ ರಾಮಕೃಷ್ಣ ಆಶ್ರಮದಲ್ಲಿ ಅಮಾನವೀಯ ಘಟನೆಯೊಂದು ನಡೆದಿದ್ದು, ಪೆನ್ನು ಕದ್ದ ಆರೋಪದಲ್ಲಿ ಬಾಲಕನೋರ್ವನಿಗೆ ಮಠದ ಗುರೂಜಿ ಮೂರು ದಿನ ಕತ್ತಲೆ ಕೋಣೆಯಲ್ಲಿ ಕೂಡಿಟ್ಟು, ಚಿತ್ರಹಿಂಸೆ ನೀಡಿರುವ ಘಟನೆ ಬೆಳಕಿಗೆ ಬಂದಿದೆ.

ವಿದ್ಯಾರ್ಥಿಯೋರ್ವ ಪೆನ್ನು ಕದ್ದಿದ್ದಾನೆ ಎಂಬ ಕಾರಣಕ್ಕೆ ಆಶ್ರಮದ ಗುರೂಜಿ ವಿದ್ಯಾರ್ಥಿಯನ್ನು ಮನಬಂದಂತೆ ಥಳಿಸಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ. ಅಷ್ಟೇ ಅಲ್ಲದೆ ವಿದ್ಯಾರ್ಥಿಯನ್ನು ಮೂರು ದಿನಗಳ ಕಾಲ ಕತ್ತಲೆ ಕೋಣೆಯಲ್ಲಿ ಕೂಡಿಟ್ಟಿದ್ದಾರೆ. ವಿದ್ಯಾರ್ಥಿಯ ಕಣ್ಣುಗಳು ಬಾವು ಬರುವಂತೆ ಮನಸೋ ಇಚ್ಛೆ ಹಲ್ಲೆ ನಡೆಸಿದ್ದಾರೆ ಎನ್ನಲಾಗಿದೆ.

image 4

ವಿದ್ಯಾರ್ಥಿ ಶ್ರವಣ್ ಕುಮಾರ್ ಹಲ್ಲೆಗೊಳಗಾದ ಬಾಲಕ. ಸರ್ಕಾರಿ ಶಾಲೆಯಲ್ಲಿ ಓದುತ್ತಿದ್ದ ಶ್ರವಣ್ ಕುಮಾರ್ ಕುಟುಂಬದಲ್ಲಿ ಕಡು ಬಡತನ ಹಿನ್ನೆಲೆಯಲ್ಲಿ ಆಶ್ರಮದಲ್ಲಿದ್ದ. ತನ್ನ ಸಹಪಾಠಿಗಳ ಜೊತೆ ಆಟವಾಡುತ್ತಾ ಒಮ್ಮೆ ಪೆನ್ನು ಕದ್ದಿದ್ದ. ಈ ವಿಚಾರ ಸಂಬಂಧ ಶ್ರವಣಕುಮಾರ್ ಸಹಪಾಠಿಗಳು ಆತನ ವಿರುದ್ಧ ದೂರು ನೀಡಿದ್ದರು. ಈ ದೂರಿನ ಅನ್ವಯ ರಾಮಕೃಷ್ಣ ಮಠದ ಗುರೂಜಿ ವೇಣುಗೋಪಾಲ ಎಂಬುವವರು ಶ್ರವಣ್ ಕುಮಾರ್​ನನ್ನು ಕರೆದು ಮನಬಂದಂತೆ ಥಳಿಸಿದ್ದಾರೆ. ಜೊತೆಗೆ ಮೂರು ದಿನಗಳ ಕಾಲ ಕತ್ತಲೇ ಕೋಣೆಯಲ್ಲಿ ಕೂಡಿ ಹಾಕಿದ್ದಾರೆ ಎಂದು ತಿಳಿದುಬಂದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ರಾಯಚೂರು ನಗರದ ಸ್ಟೇಷನ್ ರಸ್ತೆಯಲ್ಲಿರುವ ರಾಮಕೃಷ್ಣ ಆಶ್ರಮಕ್ಕೆ ಆಕಸ್ಮಿಕವಾಗಿ ಶ್ರವಣ್ ಕುಮಾರ್ ತಾಯಿ ಭೇಟಿ ನೀಡಿದಾಗ ವಿಷಯ ಬಹಿರಂಗವಾಗಿದೆ. ಸದ್ಯ ಶ್ರವಣಕುಮಾರ್‌ಗೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಮೈಕೈ ತುಂಬಾ ಗಾಯಗಳಾಗಿದ್ದು, ಕಣ್ಣು ಪೂರ್ತಿ ಬಾವು ಬಂದಿದೆ. ರಾಯಚೂರು ಪಶ್ಚಿಮ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಮಗನ ಸ್ಥಿತಿಗೆ ಪೋಷಕರು ಕಣ್ಣೀರು ಹಾಕಿದ್ದಾರೆ.

ಇದನ್ನು ಓದಿದ್ದೀರಾ? ಈ ದಿನ ಗ್ರೌಂಡ್ ರಿಪೋರ್ಟ್‌ | ವಯನಾಡ್; ಕೆಸರು ಮಣ್ಣು ಎಂದು ಕಾಲಿಟ್ಟಿದ್ದೆ, ಆದರೆ, ಅಲ್ಲಿ ಪುಟ್ಟ ಮಗುವಿನ ಮೃತದೇಹವಿತ್ತು!

ಘಟನೆಯ ಬಗ್ಗೆ ಮಾಹಿತಿ ತಿಳಿದ ರಾಯಚೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಂ ಪುಟ್ಟಮಾದಯ್ಯ ಅವರ ಸೂಚನೆಯ ಮೇರೆಗೆ ಆರೋಪಿ ಹಾಗೂ ಮಠದ ಉಸ್ತುವಾರಿಯಾಗಿರುವ ಪಿ ವೇಣುಗೋಪಾಲ್ ಅವರನ್ನು ಪೊಲೀಸರು ಬಂಧಿಸಿದ್ದಾರೆ. ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿದ್ದು, ಬಾಲಕನಿಗೆ ಹಲ್ಲೆ ನಡೆಸಿ, ಮಾರಣಾಂತಿಕ ದೌರ್ಜನ್ಯವೆಸಗಿರುವ ಹಿನ್ನೆಲೆಯಲ್ಲಿ ನ್ಯಾಯಾಲಯವು ನ್ಯಾಯಾಂಗ ಬಂಧನ ವಿಧಿಸಿರುವುದಾಗಿ ವರದಿಯಾಗಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...