ಮನುಷ್ಯತ್ವ ಇಲ್ಲದವರು ಸಾರ್ವಜನಿಕ ಸೇವೆಗೆ ಬರಬೇಡಿ: ಸಿಎಂ ಸಿದ್ದರಾಮಯ್ಯ

Date:

  • ಅಧಿಕಾರಿಗಳು ಮನೆಯಿಂದ ಕೆಲಸ ಮಾಡಬಾರದು
  • ಜನಸಾಮಾನ್ಯರ ಕರೆಗಳನ್ನು ಸ್ವೀಕರಿಸಿ: ಸೂಚನೆ

ಅಧಿಕಾರಿಗಳಿಗೆ ಹೃದಯ ಸರಿಯಾಗಿ ಕೆಲಸ ಮಾಡಬೇಕು. ಮನುಷ್ಯತ್ವ ಇಲ್ಲದವರು ಸಾರ್ವಜನಿಕ ಸೇವೆಗೆ ಬರಲೇಬಾರದು. ನಿಮ್ಮ ನಿರ್ಲಕ್ಷ್ಯ ಮತ್ತು ಉಡಾಫೆತನದಿಂದ ಸರ್ಕಾರಕ್ಕೆ ಕೆಟ್ಟ ಹೆಸರು ಬಂದರೆ ನಾವು ಸುಮ್ಮನೆ ಕೂರುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಎಚ್ಚರಿಸಿದರು.

ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಮಂಗಳವಾರ ನಡೆದ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪಂಚಾಯತ್‌ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳ ಸಭೆಯಲ್ಲಿ ಅವರು ಮಾತನಾಡಿ, “ಜಿಲ್ಲೆ ಮತ್ತು ತಾಲ್ಲೂಕು ಕೇಂದ್ರಗಳಲ್ಲಿ ಅಧಿಕಾರಿಗಳು ಮನೆಯಿಂದ ಕೆಲಸ ಮಾಡಬಾರದು. ಕಚೇರಿಯಲ್ಲೇ ಕುಳಿತು ಕೆಲಸ ಮಾಡಬೇಕು” ಎಂದು ಸೂಚನೆ ನೀಡಿದರು.

“ಅಧಿಕಾರಿಗಳು ಕೇಂದ್ರಸ್ಥಾನದಲ್ಲಿಯೇ ವಾಸವಿದ್ದು, ಜನರ ಸೇವೆಗೆ ಲಭ್ಯರಿರಬೇಕು. ಅಧಿಕಾರಿಗಳು ಕಚೇರಿಯಲ್ಲಿರಬೇಕು, ಇಲ್ಲ ಪ್ರವಾಸದಲ್ಲಿರಬೇಕು. ಮನೆಯಲ್ಲಿ ಕುಳಿತು ಕೆಲಸ ಮಾಡಬಾರದು. Work from home ಗೆ ಅವಕಾಶವಿಲ್ಲ. ಇದರಿಂದ ಜನರಿಗೆ ತೊಂದರೆಯಾಗುವುದನ್ನು ಸರ್ಕಾರ ಸಹಿಸುವುದಿಲ್ಲ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಅಧಿಕಾರಿಗಳು ದೂರವಾಣಿ ಕರೆಗೆ ಸಿಗುವುದಿಲ್ಲ ಎಂಬ ದೂರುಗಳೂ ಸಾರ್ವಜನಿಕರು, ಶಾಸಕರು ಮತ್ತು ಮಂತ್ರಿಗಳಿಂದ ಇವೆ. ಇದು ಒಳ್ಳೆಯದಲ್ಲ. ಮುಖ್ಯಮಂತ್ರಿ ಕಚೇರಿಯಿಂದ ಇರಲಿ, ಸಚಿವರಿರಲಿ, ಶಾಸಕರಿರಲಿ, ಜನಸಾಮಾನ್ಯರಿರಲಿ, ಅವರ ಕರೆಗಳಿಗೆ ಸ್ಪಂದಿಸಬೇಕು. ಯಾವುದೇ ಪಕ್ಷದ ಶಾಸಕರುಗಳಿರಲಿ ಪ್ರೋಟೋಕಾಲ್ ಚಾಚೂ ತಪ್ಪದೆ ಪಾಲಿಸಬೇಕು” ಎಂದು ಸೂಚಿಸಿದರು.

ಈ ಸುದ್ದಿ ಓದಿದ್ದೀರಾ? ಸಣ್ಣ ಸಮಸ್ಯೆಗೂ ಜನ ನನ್ನ ಬಳಿಗೆ ಬರುತ್ತಾರೆ ಎಂದರೆ ಡಿಸಿಗಳಿದ್ದು ಏನು ಪ್ರಯೋಜನ?: ಸಿದ್ದರಾಮಯ್ಯ ತರಾಟೆ

ರೈತರಿಗೆ ಕಿರುಕುಳ ಸಹಿಸಲ್ಲ

“ರಾಜ್ಯದಲ್ಲಿ 251 ರೈತರ ಆತ್ಮಹತ್ಯೆ ಪ್ರಕರಣ ವರದಿಯಾಗಿದ್ದು, 174 ಪ್ರಕರಣಗಳಷ್ಟೇ ಇತ್ಯರ್ಥವಾಗಿದೆ. ಉಳಿದ ಪ್ರಕರಣಗಳನ್ನೂ ಶೀಘ್ರವೇ ವಿಲೇವಾರಿ ಮಾಡಿ, ಪರಿಹಾರ ವಿತರಿಸಬೇಕು. ಇದರಲ್ಲಿ ವಿಳಂಬ ಸರಿಯಲ್ಲ.
ಬರ ಘೋಷಣೆಯಾದ ನಂತರ ಖಾಸಗಿ ಲೇವಾದೇವಿದಾರರ ಮೇಲೆ ನಿಗಾ ಇಡಬೇಕು. ಬ್ಯಾಂಕುಗಳು ರೈತರಿಗೆ ಕಿರುಕುಳ ಕೊಡದಂತೆ ನೋಡಿಕೊಳ್ಳಬೇಕು” ಎಂದು ಎಚ್ಚರಿಸಿದರು.

“ಆರೋಗ್ಯ ಇಲಾಖೆಯಲ್ಲಿ ವೈದ್ಯರು ಲಭ್ಯವಿರುವುದಿಲ್ಲ. ಅರೆ ವೈದ್ಯಕೀಯ ಸಿಬ್ಬಂದಿಯೇ ವೈದ್ಯರ ಪಾತ್ರ ನಿರ್ವಹಿಸುವುದು, ಔಷಧ ಪ್ರಿಸ್ಕ್ರಿಪ್ಷನ್‌ ಬರೆಯುವುದು ಇವೆಲ್ಲ ಆಗಬಾರದು. ವೈದ್ಯರು ತಮ್ಮ ಕೇಂದ್ರ ಸ್ಥಾನದಲ್ಲಿಯೇ ಇದ್ದುಕೊಂಡು ಜನರ ಕಷ್ಟಗಳಿಗೆ ಸ್ಪಂದಿಸಬೇಕು” ಎನ್ನುವ ಸೂಚನೆ ನೀಡಿದರು.

ಸ್ಮಶಾನಗಳಿಗೆ ಜಾಗ ಒದಗಿಸಿ

“ಸ್ಮಶಾನಗಳಿಗೆ ಮತ್ತು ಖಬರ್‌ಸ್ತಾನ್‌ಗಳಿಗೆ ಕೂಡಲೇ ಜಾಗ ಒದಗಿಸಬೇಕು. ಶಾಲಾ ಕಟ್ಟಡ, ಅಂಗನವಾಡಿ, ಆರೋಗ್ಯ ಕೇಂದ್ರ ಸ್ಮಶಾನಗಳಿಗೆ ಜಾಗ ಕೂಡಲೇ ಗುರುತಿಸಿ ಕೊಡಬೇಕು. ಸಾರ್ವಜನಿಕರಿಗೆ ಭೇಟಿ ಸಮಯ ನಿಗದಿ ಮಾಡಬೇಕು. ಕೇಂದ್ರ ಕಚೇರಿಯಲ್ಲಿರುವಾಗ ಸಾರ್ವಜನಿಕರಿಗೆ ಸಮಯ ನಿಗದಿ ಮಾಡಬೇಕು. ಆ ಸಮಯದಲ್ಲಿ ಜನರ ಸಮಸ್ಯೆಗಳನ್ನು ಆಲಿಸಿ, ಕೂಡಲೇ ಪರಿಹಾರ ಒದಗಿಸಬೇಕು. ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳು, ಜಿಲ್ಲಾಧಿಕಾರಿಗಳು, ಜಿಲ್ಲೆಯ ಹಿರಿಯ ಅಧಿಕಾರಿಗಳು ಹಾಸ್ಟೆಲುಗಳು, ಆಸ್ಪತ್ರೆಗಳಿಗೆ ಭೇಟಿ ನೀಡಬೇಕು. ಜಿಲ್ಲಾಧಿಕಾರಿಗಳು ಅಧೀನ ಕಚೇರಿಗಳಿಗೆ ಭೇಟಿ ನೀಡಬೇಕು” ಎಂದರು

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...