ಗುಲಬರ್ಗಾ ವಿಶ್ವವಿದ್ಯಾಲಯ ಉಳಿಸಲು ಜನಾಂದೋಲನ : ರಾಮಣ್ಣ ಇಬ್ರಾಹಿಂಪುರ

Date:

ಗುಲಬರ್ಗಾ ವಿಶ್ವವಿದ್ಯಾಲಯದ ಸಮಗ್ರ ಅಭಿವೃದ್ಧಿಗೆ ನಿರ್ಲಕ್ಷ್ಯ ಧೋರಣೆ ತಾಳಿದರೆ ಜಿಲ್ಲೆಯ ಎಲ್ಲಾ ಶಿಕ್ಷಣ ಪ್ರೇಮಿಗಳು, ವಿದ್ಯಾರ್ಥಿ ಮತ್ತು ಯುವಜನರು, ಶಿಕ್ಷಕರು, ಪಾಲಕರು, ವಿವಿಧ ಸಂಘ-ಸಂಸ್ಥೆಗಳನ್ನು ಸೇರಿಸಿಕೊಂಡು ಗುಲಬರ್ಗಾ ವಿಶ್ವವಿದ್ಯಾಲಯ ಉಳಿಸಲು ಜನಾಂದೋಲನ ರೂಪಿಸುತ್ತೇವೆ ಎಂದು ಅಖಿಲ ಭಾರತ ಶಿಕ್ಷಣ ಉಳಿಸಿ ಸಮಿತಿಯ (ಎಐಎಸ್ಇಸಿ) ಜಿಲ್ಲಾ ಕಾರ್ಯದರ್ಶಿ ರಾಮಣ್ಣ ಎಸ್. ಇಬ್ರಾಹಿಂಪುರ ಅವರು ಹೇಳಿದ್ದಾರೆ.

‘ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಶಿಕ್ಷಣ ವಿರೋಧಿ ನೀತಿಗಳಿಂದಾಗಿ ಗುಲಬರ್ಗಾ ವಿವಿ ಅಧೋಗತಿ ತಲುಪಿದೆ. ವಿದ್ಯಾರ್ಥಿಗಳ ಪ್ರವೇಶಾತಿ ಸಂಖ್ಯೆಯೂ ಕುಸಿತವಾಗಿದೆ. ಸರ್ಕಾರ ಸಹ ಮೂಲಸೌಕರ್ಯ ನೀಡದೆ, ಬೋಧಕರನ್ನು ನೇಮಕಾತಿ ಮಾಡದೆ ನಿಷ್ಕಾಳಜಿ ತೋರಿಸುತ್ತಿದೆ. ಖಾಸಗಿ ವಿಶ್ವವಿದ್ಯಾಲಯಗಳಿಗೆ ಮುಕ್ತ ಅವಕಾಶ ನೀಡುತ್ತಿರುವುದರಿಂದ ಜ್ಞಾನಗಂಗಾದಲ್ಲಿ ವಿದ್ಯಾರ್ಥಿಗಳ ಬರ ಎದುರಿಸುವಂತ್ತಾಗಿದೆ’ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

‘ಪರೀಕ್ಷಾ ವಿಭಾಗವು ನಿಯಮಿತವಾಗಿ ಪರೀಕ್ಷೆಗಳನ್ನು ನಡೆಸಿ ಫಲಿತಾಂಶ ಪ್ರಕಟಿಸಿ, ಅಂಕಪಟ್ಟಿಗಳನ್ನು ನೀಡುವಲ್ಲಿ ವಿಳಂಬ ಮಾಡುತ್ತಿದೆ. ಇದರಿಂದಲೂ ವಿದ್ಯಾರ್ಥಿಗಳು ಇಲ್ಲಿ ಪ್ರವೇಶ ಪಡೆಯದೆ ಬೇರೆ ವಿಶ್ವವಿದ್ಯಾಲಯಗಳಲ್ಲಿ ಪ್ರವೇಶ ಪಡೆಯುತ್ತಿದ್ದಾರೆ. ವಿಶ್ವವಿದ್ಯಾಲಯದ ನೂರಾರು ಎಕರೆ ಇಎಸ್‌ಐ ಆಸ್ಪತ್ರೆಯಂತಹ ಶಿಕ್ಷಣೇತರ ಚಟುವಟಿಕೆಗಳಿಗೆ ನೀಡಲಾಗಿದೆ. ಈಗ ಮತ್ತೆ ಹಲವು ಇಲಾಖೆಗಳು ಜಮೀನು ಕೊಡುವಂತೆ ಒತ್ತಾಯ ಮಾಡುತ್ತಿವೆ. ಯಾವುದೇ ಕಾರಣಕ್ಕೂ ವಿವಿಯ ಜಾಗವನ್ನು ಅನ್ಯ ಇಲಾಖೆಗಳಿಗೆ ಬಿಟ್ಟುಕೊಡಬಾರದು’ ಎಂದು ಒತ್ತಾಯಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

‘ವಿಶ್ವವಿದ್ಯಾಲಯದ ಸಮಗ್ರ ಅಭಿವೃದ್ಧಿಗೆ ವಿಶೇಷ ಪ್ಯಾಕೇಜ್ ಘೋಷಿಸಬೇಕು. ಖಾಲಿ ಇರುವ ಬೋಧಕ ಮತ್ತು ಬೋಧಕೇತರ ಹುದ್ದೆಗಳನ್ನು ಸಮರೋಪಾದಿಯಲ್ಲಿ ಭರ್ತಿ ಮಾಡಬೇಕು. ಪರೀಕ್ಷಾ ವಿಭಾಗವನ್ನು ಸುಧಾರಿಸಬೇಕು. ವಿದಾರ್ಥಿಗಳಿಗೆ ಮೂಲಸೌಕರ್ಯಗಳನ್ನು ಒದಗಿಸಬೇಕು’ ಎಂದಿದ್ದಾರೆ

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...