ಕಲಬುರಗಿ | ಸಿಎಂ ವಿರುದ್ಧ ತನಿಖೆಗೆ ಅನುಮತಿ : ರಾಜ್ಯಪಾಲರ ನಡೆಗೆ ಕಾಂಗ್ರೆಸ್‌ ಕಿಡಿ

Date:

ಮುಖ್ಯಮಂತ್ರಿ ಸಿದ್ದರಾಮಯ್ಯನವರ ವಿರುದ್ಧ ಬಿಜೆಪಿ ರಾಜಕೀಯ ಪ್ರೇರಿತವಾಗಿ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿರುವ ರಾಜ್ಯಪಾಲರ ನಡೆ ಹಾಗೂ ಕೇಂದ್ರ ಬಿಜೆಪಿ ಸರ್ಕಾರದ ನಡೆಯನ್ನು ಖಂಡಿಸಿ ಕಲಬುರಗಿಯಲ್ಲಿ ಕಾಂಗ್ರೆಸ್‌ ಪ್ರತಿಭಟನೆ ನಡೆಸಿತು.

ನಗರದ ಜಗತ್ ವೃತ್ತದಲ್ಲಿ ಜಿಲ್ಲಾ ಕಾಂಗ್ರೆಸ್ ಸಮಿತಿಯಿಂದ ಹಮ್ಮಿಕೊಂಡಿದ್ದ ಪ್ರತಿಭಟನೆಯಲ್ಲಿ ಕಾಂಗ್ರೆಸ್‌ ಶಾಸಕರು, ಮುಖಂಡರು ಸೇರಿದ ಪಕ್ಷದ ನೂರಾರು ಕಾರ್ಯಕರ್ತರು ಸೇರಿ ಮಾನವ ಸರಪಳಿ ನಿರ್ಮಿಸಿ ಟೈರ್‌ಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದರು.

WhatsApp Image 2024 08 18 at 10.22.01 AM
ಕಲಬುರಗಿಯ ಜಗತ್‌ ವೃತ್ತದ ಮುಖ್ಯ ರಸ್ತೆಯಲ್ಲಿ ಟೈರ್‌ಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದರು.

ಪ್ರತಿಭಟನೆಯಲ್ಲಿ ಕಲಬುರಗಿ ದಕ್ಷಿಣ ಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ್,ಮಾಜಿ ಸಚಿವ ರೇವುನಾಯಕ್ ಬೆಳಮಗಿ ಹಾಗೂ ಕಾಂಗ್ರೆಸ್‌ ಮುಖಂಡರಾದ ಸುಭಾಷ್ ರಾಠೋಡ್, ಅರುಣಕುಮಾರ್ ಪಾಟೀಲ್, ನೀಲಕಂಠರಾವ್ ಮೂಲಗೆ ಸೇರಿದಂತೆ ಪಕ್ಷದ ವಿವಿಧ ಪದಾಧಿಕಾರಿಗಳು, ಕಾರ್ಯಕರ್ತರು, ಮುಖಂಡರು ಉಪಸ್ಥಿತರಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಬೀದರ್‌ : ಸಂಸದ ಸಾಗರ್‌ ಖಂಡ್ರೆ ನೇತ್ರತ್ವದಲ್ಲಿ ಪ್ರತಿಭಟನೆ

ಸಿಎಂ ಸಿದ್ದರಾಮಯ್ಯ ವಿರುದ್ಧ ತನಿಖೆಗೆ ಅನುಮತಿ ನೀಡಿರುವ ರಾಜ್ಯಪಾಲರ ನಡೆಯನ್ನು ಖಂಡಿಸಿ ಶನಿವಾರ ಬೀದರನಲ್ಲಿ ಸಂಸದ ಸಾಗರ ಈಶ್ವರ ಖಂಡ್ರೆ ನೇತೃತ್ವದಲ್ಲಿ ಬೀದರ್‌ನಲ್ಲಿ ಬೃಹತ್ ಪ್ರತಿಭಟನೆ ನಡೆಸಿದರು.

ಜಿಲ್ಲಾ ಕಾಂಗ್ರೆಸ್ ಸಮಿತಿಯಿಂದ ಹಮ್ಮಿಕೊಂಡಿದ್ದ ಪ್ರತಿಭಟನೆಯು ನಗರದ ಡಾ.ಬಿ.ಆರ್.‌ ಅಂಬೇಡ್ಕರ್‌ ವೃತ್ತದಿಂದ ಜಿಲ್ಲಾಧಿಕಾರಿಗಳ ಕಚೇರಿವರೆಗೆ ಮೆರವಣಿಗೆ ನಡೆಯಿತು. ಬಳಿಕ ರಾಷ್ಟ್ರಪತಿಗಳಿಗೆ ಬರೆದ ಹಕ್ಕೊತ್ತಾಯ ಪತ್ರವನ್ನು ಅಪರ ಜಿಲ್ಲಾಧಿಕಾರಿ ಶಿವಕುಮಾರ್‌ ಶೀಲವಂತ ಅವರಿಗೆ ಸಲ್ಲಿಸಿದರು.

WhatsApp Image 2024 08 18 at 10.24.14 AM
ಬೀದರ್‌ನಲ್ಲಿ ಸಂಸದ ಸಾಗರ್‌ ಖಂಡ್ರೆ ನೇತ್ರತ್ವದಲ್ಲಿ ಕಾಂಗ್ರೆಸ್‌ ಪ್ರತಿಭಟನೆ ನಡೆಸಿತು.

ಪ್ರತಿಭಟನೆಯನ್ನು ಉದ್ದೇಶಿಸಿ ಸಂಸದ ಸಾಗರ ಖಂಡ್ರೆ ಮಾತನಾಡಿ, ʼಜನಪರ ಆಡಳಿತ ನೀಡುತ್ತಿರುವ ಸಿದ್ದರಾಮಯ್ಯ ಅವರನ್ನು ರಾಜಕೀಯವಾಗಿ ಹಣಿಯಲು ಆಗದಿರುವ ಕಾರಣ ರಾಜಭವನ ದುರುಪಯೋಗ ಮಾಡಿಕೊಂಡು ಮುಖ್ಯಮಂತ್ರಿಗಳ ಹೆಸರಿಗೆ ಕಳಂಕ ತರುವ ಕೆಲಸ ಬಿಜೆಪಿ ಹಾಗೂ ಕೇಂದ್ರ ಸರ್ಕಾರದವರು ಮಾಡುತ್ತಿದ್ದಾರೆʼ ಎಂದು ಕಿಡಿಕಾರಿದರು.

ʼಸಂವಿಧಾನದ ಮುಖ್ಯಸ್ಥರಾಗಿ ಹೀಗೆ ಅಸಂವಿಧಾನಿಕ ನಡೆ ಅನುಸರಿಸುತ್ತಿರುವ ರಾಜ್ಯಪಾಲರ ನಡೆ ಪ್ರಜಾಪ್ರಭುತ್ವಕ್ಕೆ ಮಾರಕವಾಗಿದೆ. ಕೂಡಲೇ ರಾಷ್ಟ್ರಪತಿಗಳು ರಾಜ್ಯಪಾಲರನ್ನು ವಾಪಾಸ್ ಕರೆಸಿಕೊಳ್ಳಬೇಕುʼ ಎಂದು ಒತ್ತಾಯಿಸಿದರು.

ಈ ಸುದ್ದಿ ಓದಿದ್ದೀರಾ? ಕೊಪ್ಪಳ | ದಾರುಣ ಘಟನೆ: ದಲಿತ ಯುವಕನಿಗೆ ಕ್ಷೌರ ಮಾಡಲು ನಿರಾಕರಿಸಿ ಕೊಲೆ

ಪ್ರತಿಭಟನೆಯಲ್ಲಿ ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ಅಧ್ಯಕ್ಷ ಅಮೃತರಾವ ಚಿಮಕೋಡೆ, ಜಿಲ್ಲಾ ಕಾಂಗ್ರೆಸ್‌ ಸಮಿತಿ ಅಧ್ಯಕ್ಷ ಬಸವರಾಜ ಜಾಬಶೆಟ್ಟಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ದತ್ತಾತ್ರಿ ಮೂಲಗೆ, ಡಿಸಿಸಿ ಬ್ಯಾಂಕ್‌ ಉಪಾಧ್ಯಕ್ಷ ಅಭಿಷೇಕ ಪಾಟೀಲ್‌, ಸಂಜಯ ಜಾಗಿರದಾರ್‌ ಸೇರಿದಂತೆ ಕಾಂಗ್ರೆಸ್‌ ಮುಖಂಡರು, ಕಾರ್ಯಕರ್ತರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಔರಾದ್‌ | ಅಪ್ಪಟ ದೇಶಪ್ರೇಮಿ ಶಾಹೀದ್ ಭಗತ್ ಸಿಂಗ್

ಭಾರತದ ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ನಿದ್ದೆಗೆಡಿಸಿದ ಸಿಂಹಾಳಿಯಂತೆ ಗರ್ಜಿಸಿ ಭಾರತದ ಹಿರಿಮೆ ಗರಿಮೆಯನ್ನು...

ಬೀದರ್‌ | ಕಾರಂಜಾ ಸಂತ್ರಸ್ತರಿಗೆ ಕಾಲಮಿತಿಯಲ್ಲಿ ವಿಶೇಷ ಪ್ಯಾಕೇಜ್ ಘೋಷಿಸಿ

ಕಾರಂಜಾ ಸಂತ್ರಸ್ತರ ಸಮಸ್ಯೆ ಕುರಿತು ದಶಕಗಳಿಂದ ಹೋರಾಟ ನಡೆಯುತ್ತಿದ್ದು, ಸರ್ಕಾರಕ್ಕೂ ಈ...

ಬೀದರ್‌ನಲ್ಲಿ ಮಾ.25ರಂದು ಉದ್ಯೋಗ ಮೇಳ

ಬೀದರ್ ನಗರದ ನೌಬಾದ್‍ನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿಲ್ಲಾ ಉದ್ಯೋಗ...

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...