ಬೆಳಗಾವಿ | ಸಂಸದೆ ಪ್ರಿಯಾಂಕಾ ಜಾರಕಿಹೊಳಿಗೆ ಸನ್ಮಾನ ವಿಚಾರ: ಗ್ರಾ. ಪಂಚಾಯತಿಗೆ ಬೆಂಕಿ ಹಚ್ಚಿದ ದುಷ್ಕರ್ಮಿಗಳು

Date:

ಚಿಕ್ಕೋಡಿ ಸಂಸದೆ ಪ್ರಿಯಾಂಕಾ ಜಾರಕಿಹೊಳಿಯವರಿಗೆ ಸನ್ಮಾನ ಮಾಡುವ ವಿಚಾರವಾಗಿ ಗ್ರಾಮ ಪಂಚಾಯತಿಗೆ ಬೆಂಕಿ ಹಚ್ಚಿದ ಘಟನೆ ಬೆಳಗಾವಿ ತಾಲೂಕಿನ ಕಲಕಾಂಬ ಗ್ರಾಮದಲ್ಲಿ ನಡೆದಿದೆ.

ಗ್ರಾಮ ಪಂಚಾಯಿತಿ ಕಟ್ಟಡದ ಮೇಲೆ ತಡರಾತ್ರಿ ದುಷ್ಕರ್ಮಿಗಳು ಪೆಟ್ರೋಲ್‌ ಬಾಂಬ್‌ ಎಸೆದು ಪರಾರಿಯಾಗಿದ್ದಾರೆ. ತಡರಾತ್ರಿ ಆಗಮಿಸಿದ್ದ ಕಿಡಿಗೇಡಿಗಳು ಬಿಯರ್ ಬಾಟಲ್‌ನಲ್ಲಿ ಪೆಟ್ರೋಲ್ ಸುರಿದು ಬಟ್ಟೆ ಹಾಕಿ ಬೆಂಕಿ ಹಚ್ಚಿ ಪರಾರಿಯಾಗಿದ್ದು, ಅಲ್ಲದೇ, ಗ್ರಾಮ ಪಂಚಾಯಿತಿ ಆವರಣ ಹಾಗೂ ಒಳಗಡೆ ಬಿಯರ್ ಬಾಟಲ್‌ಗಳನ್ನು ಎಸೆಯಲಾಗಿದೆ.‌ ಕೃತ್ಯ ಎಸಗಿ ಸಿಕ್ಕಿಬಿಳುತ್ತೇವೆ ಎಂದು ಗ್ರಾಪಂ ಕಟ್ಟಡದ ಸಿಸಿಟಿವಿ ಕ್ಯಾಮೆರಾ ತೆಗೆದುಕೊಂಡು ಹೋಗಿದ್ದಾರೆ ಎಂದು ತಿಳಿದುಬಂದಿದೆ.

ಶುಕ್ರವಾರ ರಸ್ತೆ ಕಾಮಗಾರಿಗೆ ಚಾಲನೆ ನೀಡಲು ಚಿಕ್ಕೋಡಿ ಸಂಸದೆ ಪ್ರಿಯಾಂಕಾ ಜಾರಕಿಹೊಳಿ ಕಲಕಾಂಬ ಗ್ರಾಮಕ್ಕೆ ಭೇಟಿ ನೀಡಿದ್ದರು. ಈ ಸಂದರ್ಭದಲ್ಲಿ ಕಾಂಗ್ರೆಸ್ಸಿನ ಒಂದು ಗುಂಪು ಸಂಸದೆಯರನ್ನು ಸನ್ಮಾನಿಸಿದ್ದು ಮತ್ತೊಂದು ಗುಂಪಿನ ಸದಸ್ಯರು ತಮ್ಮ ಕಾಲೋನಿಗೆ ಕರೆದೊಯ್ದು ಸನ್ಮಾನಿಸುವ ಉದ್ದೇಶ ಹೊಂದಿದ್ದರು. ಆದರೆ ಇದಕ್ಕೆ ಅವಕಾಶ ಸಿಗದಿದ್ದಾಗ ಎರಡು ಗುಂಪುಗಳ ನಡುವೆ ವಾಗ್ವಾದ ನಡೆದು, ರಾತ್ರಿ ಸಮಯದಲ್ಲಿ ಬಿಯರ್ ಬಾಟಲಿಯಲ್ಲಿ ಪೆಟ್ರೋಲ್‌ ಹಾಕಿ ಗ್ರಾಮ ಪಂಚಾಯತಿ ಕಛೇರಿಯತ್ತ ಎಸೆದಿದ್ದಾರೆ. ಇದರಿಂದಾಗಿ ಕಿಟಕಿ ಗಾಜು ಜಖಂ ಆಗಿದ್ದು, ಕೆಲ ವಸ್ತುಗಳು ಸುಟ್ಟು ಕರಕಲಾಗಿವೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ? ರಾಯಚೂರು | ವಿದ್ಯುತ್ ಶಾರ್ಟ್ ಸರ್ಕ್ಯೂಟ್: ಸುಟ್ಟು ಕರಕಲಾದ ಹತ್ತಿ; ಸಂಕಷ್ಟಕ್ಕೆ ಸಿಲುಕಿದ ರೈತ

ಮಾರಿಹಾಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಗ್ರಾಮದಲ್ಲಿ ಪೊಲೀಸರು ಠಿಕಾಣಿ ಹೂಡಿದ್ದಾರೆ.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...