ಪೋಕ್ಸೋ ಪ್ರಕರಣ: ಆರೋಪ ಮುಕ್ತಗೊಂಡ ತುಮಕೂರು ವಿಶ್ವವಿದ್ಯಾಲಯದ ಪಿಎಚ್‌ಡಿ ವಿದ್ಯಾರ್ಥಿ

Date:

ಪೋಕ್ಸೋ ಪ್ರಕರಣದ ಆರೋಪ ಹೊತ್ತಿದ್ದ ತುಮಕೂರು ವಿಶ್ವವಿದ್ಯಾಲಯದ ಪಿಎಚ್‌ಡಿ ವಿದ್ಯಾರ್ಥಿ ಮಲ್ಲಿಕಾರ್ಜುನ್ ಅವರನ್ನು ಆರೋಪ ಮುಕ್ತಗೊಳಿಸಿ ನ್ಯಾಯಾಲಯ ಆದೇಶ ನೀಡಿದೆ.

2022ರ ಡಿಸೆಂಬರ್‌ನಲ್ಲಿ ವಿವಿಯ ಡಾ.ಡಿ.ವಿ.ಗುಂಡಪ್ಪ ಕನ್ನಡ ಅಧ್ಯಯನ ಕೇಂದ್ರದ ಪಿಎಚ್‌ಡಿ ವಿದ್ಯಾರ್ಥಿ ಮಲ್ಲಿಕಾರ್ಜುನ ಎಂಬುವವರ ಮೇಲೆ ತುಮಕೂರಿನ ಎನ್.ಆರ್. ಕಾಲೋನಿಯ ವಾಸಿಯಾಗಿರುವ ನೊಂದ ಬಾಲಕಿಯ ತಂದೆ ಆರೋಪ ಹೊರಿಸಿ ಪೋಕ್ಸೋ ಕಾಯ್ದೆಯ ಅಡಿಯಲ್ಲಿ ಪ್ರಕರಣ ದಾಖಲಿಸಿದ್ದರು. ಪ್ರಕರಣ ದಾಖಲಿಸುವಾಗ ಸಂತ್ರಸ್ತ ಬಾಲಕಿ ಏಳು ತಿಂಗಳ ಗರ್ಭಿಣಿಯಾಗಿದ್ದಳು. ಈ ಪ್ರಕರಣದಲ್ಲಿ ಆರೋಪಿಯಾಗಿದ್ದ ಮಲ್ಲಿಕಾರ್ಜುನನ್ನು ಆರು ತಿಂಗಳ ನಂತರ ಬಂಧಿಸಿ, ನ್ಯಾಯಲಯದ ಕಸ್ಟಡಿಗೆ ನೀಡಲಾಗಿತ್ತು.

ಈ ವೇಳೆಗೆ ಆ ಬಾಲಕಿಗೆ ಹೆಣ್ಣು ಮಗುವು ಜನಿಸಿತ್ತು. ಈ ಎಲ್ಲ ಅಂಶಗಳನ್ನು ಉಲ್ಲೇಖಿಸಿ ಮಹಿಳಾ ಠಾಣೆಯ ಪೊಲೀಸರು ಸ್ಥಳ ಮಹಜರು ಮಾಡಿ ದಾಖಲೆಗಳನ್ನು ಸಂಗ್ರಹಿಸಿ ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ? ಕೋಲಾರ | ಕಾಲೇಜಿನ ಶೌಚಾಲಯದಲ್ಲೇ ಮಗುವಿಗೆ ಜನ್ಮವಿತ್ತ ಅಪ್ರಾಪ್ತ ವಿದ್ಯಾರ್ಥಿನಿ!

ನ್ಯಾಯಾಲಯಕ್ಕೆ ಸಂತ್ರಸ್ತ ಬಾಲಕಿಯ ದಿನದ ನಿಖರ ಮಾಹಿತಿ ಲಭ್ಯವಾಗದಿರುವುದು ಮತ್ತು ನಮ್ಮಿಬ್ಬರದು ಸಮ್ಮತಿ ಲೈಂಗಿಕತೆ ಎಂಬ ಆಕೆಯ ಹೇಳಿಕೆ ಆಧರಿಸಿ ತೀರ್ಪು ನೀಡಲಾಗಿದೆ ಹಾಗೂ ಆಕೆಗೆ ಜನಿಸಿದ ಮಗುವಿಗೆ ಮಲ್ಲಿಕಾರ್ಜುನ್ ಜೈವಿಕ ತಂದೆಯಲ್ಲ ಎಂಬುದು ಸಾಬೀತಾದ ಹಿನ್ನಲೆಯಲ್ಲಿ ನ್ಯಾಯಾಲಯವು ಆರೋಪಿಯನ್ನು ಪೋಕ್ಸೋ ಪ್ರಕರಣದಿಂದ ಆರೋಪ ಮುಕ್ತಗೊಳಿಸಿದೆ.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...