ಪೊಲೀಸ್ ʼಅಕ್ಕ ಪಡೆ‌ʼ ಕಾರ್ಯ ಶ್ಲಾಘನೀಯ : ರಾಜ್ಯಾದ್ಯಂತ ವಿಸ್ತರಣೆ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್

Date:

ಮಹಿಳೆಯರ ಸುರಕ್ಷತೆ ಹಿನ್ನೆಲೆಯಲ್ಲಿ ಬೀದರ ಜಿಲ್ಲಾ ಪೊಲೀಸ್ ಇಲಾಖೆಯು ರಚಿಸಿದ ಮಹಿಳಾ ಪೊಲೀಸ್ ʼಅಕ್ಕ ಪಡೆ‌ʼ ಯನ್ನು ರಾಜ್ಯಾದ್ಯಂತ ವಿಸ್ತರಿಸಲು ಗೃಹ ಮಂತ್ರಿಗಳೊಂದಿಗೆ ಚರ್ಚಿಸುವುದಾಗಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ತಿಳಿಸಿದರು.

ಜಿಲ್ಲಾ ಪಂಚಾಯತ ಸಭಾಭವನದಲ್ಲಿ ಕಲಬುರಗಿ ವಿಭಾಗ ಮಟ್ಟದಲ್ಲಿ ಐಸಿಡಿಎಸ್ ಶಾಖೆಯಲ್ಲಿ ಕೈಗೊಂಡಿರುವ ಪ್ರಗತಿ ಪರಿಶೀಲನೆ ನಂತರ ಸುದ್ದಿಗಾರರೊಂದಿಗೆ ಮಾತನಾಡಿ, ಮಹಿಳೆಯರ ರಕ್ಷಣೆ ಹಾಗೂ ಸಮಸ್ಯೆ ಬಗೆಹರಿಸಲು ಮಹಿಳಾ ಪೊಲೀಸರ ತಂಡ ಅಕ್ಕ ಪಡೆ ಮಾದರಿ ಹಾಗೂ ಶ್ಲಾಘನೀಯ. ಇಂತಹ ಪಡೆಯನ್ನು ಪ್ರತಿ ಜಿಲ್ಲೆಯಲ್ಲೂ ರಚಿಸುವಂತೆ ಗೃಹಸಚಿವರೊಂದಿಗೆ ಚರ್ಚಿಸುವುದಾಗಿ ಸಚಿವೆ ಹೆಬ್ಬಾಳಕರ್ ತಿಳಿಸಿದರು.

ಕಳೆದೆರಡು ದಿನಗಳಿಂದ ಕಲಬುರಗಿ ವಿಭಾಗದ ಏಳು ಜಿಲ್ಲೆಗಳ ಅಧಿಕಾರಿಗಳ ಸಭೆಯಲ್ಲಿ ಹಲವಾರು ವಿಷಯಗಳನ್ನು ಸುಧೀರ್ಘವಾಗಿ ಚರ್ಚಿಸಲಾಗಿದೆ. ಮಕ್ಕಳ, ಮಹಿಳೆಯರ, ಗರ್ಭೀಣಿಯರ, ಅಂಗವಿಕಲರ ಹಾಗೂ ಹಿರಿಯ ನಾಗರಿಕರಿಗೆ ಸರಕಾರವು ಅನುಷ್ಠಾನಗೊಳಿಸಿದ ವಿವಿಧ ಯೋಜನೆಗಳನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸಲು ಅಧಿಕಾರಿಗಳಿಗೆ ನಿರ್ದೇಶನ ನೀಡಲಾಗಿದೆ. ನಗರ ಹಾಗೂ ಗ್ರಾಮೀಣ ಪ್ರದೇಶಗಳ ಕ್ಷೇತ್ರ ಮಟ್ಟದಲ್ಲಿ ಯೋಜನೆಗಳನ್ನು ಹೆಚ್ಚು ಪ್ರಚಾರ ಕೈಗೊಂಡು ಸಮಸ್ಯೆಗಳನ್ನು ಬಗೆಹರಿಸಿ ಕಾಲಕಾಲಕ್ಕೆ ನೀಡಲಾಗುವ ಗುರಿಯನ್ನು ತಲುಪಿಸಬೇಕುʼ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ʼಅಂಗನವಾಡಿ ಸಹಾಯಕಿಯರ ನೇಮಕಾತಿಯನ್ನು ಸರಳ ಹಾಗೂ ಪಾರದರ್ಶಕಗೊಳಿಸಲು 90 ದಿನಗಳಲ್ಲಿ ಪ್ರಕ್ರಿಯೆಯನ್ನು ಪೂರ್ಣಗೊಳಿಸುವಂತೆ ಸೂಚಿಸಲಾಗಿದೆ. ಭಾಗ್ಯಲಕ್ಷ್ಮೀ ಯೋಜನೆಯಡಿ ರಾಜ್ಯಾದ್ಯಂತ 1.60 ಸಾವಿರ ಹೆಣ್ಣು ಮಕ್ಕಳಿಗೆ ಬಾಂಡ್ ವಿತರಿಸಲು ಕ್ರಮ ಕೈಗೊಳ್ಳುತ್ತಿದ್ದು, ಈ ಪೈಕಿ 20 ಸಾವಿರ ಜನರ ವಿಳಾಸ ಸರಿಯಾಗಿ ಸಿಗುತ್ತಿಲ್ಲ. ಅವರ ಪಾಲಕರು ಸಂಪರ್ಕಿಸಿ ಪಡೆಯಬಹುದಾಗಿದೆʼ ಎಂದು ತಿಳಿಸಿದರು.

ʼಗೃಹಲಕ್ಷ್ಮೀ ಯೋಜನೆಯಡಿ ಕಲಬುರಗಿ ವಿಭಾಗದಲ್ಲಿ 10 ಸಾವಿರ ಕೋಟಿ ಅನುದಾನವನ್ನು ಮಹಿಳೆಯ ಆರ್ಥಿಕ ಸಬಲೀಕರಣಕ್ಕೆ ಸಂದಾಯವಾಗಿದೆ. ಈ ಕುರಿತು ಕಿರುಚಿತ್ರವೊಂದನ್ನು ನಿರ್ಮಿಸಲಾಗುವುದು. ಸ್ತ್ರೀಶಕ್ತಿ ಸಂಘಗಳ ಮಾದರಿಯಲ್ಲಿ ಗೃಹಲಕ್ಷ್ಮೀ ಸಂಘಗಳನ್ನು ಶೀಘ್ರವೇ ಆರಂಭಿಸಲಾಗುವುದು. ಈ ಸಂಘಗಳ ಮೂಲಕ ವಿವಿಧ ರೀತಿಯ ಸಹಾಯ ಸೌಲಭ್ಯಗಳನ್ನು ವಿತರಿಸಲಾಗುವುದುʼ ಎಂದು ಮಾಹಿತಿ ನೀಡಿದರು.

ʼಅಂಗವಿಕಲರ ಯುಡಿಐ ಕಾರ್ಡ ವಿತರಣೆಯಲ್ಲಿರುವ ಸಮಸ್ಯೆಯನ್ನು ಶೀಘ್ರವೇ ಬಗೆಹರಿಸಲು ಕ್ರಮ ಕೈಗೊಳ್ಳಲಾಗುವುದು. ಮಕ್ಕಳ ಹಾಗೂ ಮಹಿಳೆಯರ ಕಳ್ಳ ಸಾಗಾಣಿಕೆ, ಭಿಕ್ಷಾಟನೆ ಕುರಿತು ತೀವ್ರ ನಿಗಾ ವಹಿಸುವಂತೆ ಅದಧಿಕಾರಿಗಳಿಗೆ ಕಟ್ಟುನಿಟ್ಟಿನ ನಿರ್ದೇಶನ ನೀಡಲಾಗಿದೆ. ಅಪೌಷ್ಠಿಕತೆ ನಿವಾರಣೆಗೆ ಹಲವಾರು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಬೀದರ ಜಿಲ್ಲೆಯಲ್ಲಿ ಮೊಟ್ಟೆ ವಿತರಣೆ ಸಮಸ್ಯೆ ಕುರಿತು ಗಮನಕ್ಕೆ ಬಂದಿದ್ದು, ರಾಜ್ಯದ ಇತರೆ ಜಿಲ್ಲೆಗಳಂತೆ ಬಾಲವಿಕಾಸ ಸಮಿತಿಗೆ ಮೊಟ್ಟೆ ಅನುದಾನ ಸಂದಾಯವಾಗುವಂತೆ ಕ್ರಮಕೈಗೊಳ್ಳಲಾಗುವುದುʼ ಎಂದು ಹೇಳಿದರು.

ವಿಶೇಷ ಚೇತನ ಫಲಾನುಭವಿಗಳಿಗೆ ವಿವಿಧ ಸವಲತ್ತು ವಿತರಣೆ :

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಅವರು ವಿಶೇಷ ಚೇತನರಿಗೆ ವಿವಿಧ ಸವಲತ್ತುಗಳನ್ನು ವಿತರಿಸಿದರು.

WhatsApp Image 2025 07 05 at 6.27.11 PM 1

ಬೀದರ್ ಜಿಲ್ಲಾ ಪಂಚಾಯತ್ ಆವರಣದಲ್ಲಿ ನಡೆದ ಸಮಾರಂಭದಲ್ಲಿ ಸಚಿವರು 7 ಅಂಧ ವಿದ್ಯಾರ್ಥಿಗಳಿಗೆ ಟಾಕಿಂಗ್ ಲ್ಯಾಪ್ ಟಾಪ್, 5 ಅಂಧ ವಿದ್ಯಾರ್ಥಿಗಳಿಗೆ ಬ್ರೈಲ್ ಕಿಟ್ ಮತ್ತು 7 ಮಂದಿಗೆ ಶ್ರವಣದೋಷ ಇರುವವರಿಗೆ ಸ್ವಯಂ ಉದ್ಯೋಗಕ್ಕಾಗಿ ಹೊಲಿಗೆ ಯಂತ್ರಗಳನ್ನು ವಿತರಿಸಲಾಯಿತು.

ಇದನ್ನೂ ಓದಿ : ಬೀದರ್‌ | ಸೆ.3ರಂದು ಬಸವ ಸಂಸ್ಕೃತಿ ಅಭಿಯಾನ; ಅರ್ಥಪೂರ್ಣವಾಗಿ ನಡೆಸಲು ಒಕ್ಕೊರಲ ತೀರ್ಮಾನ

ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ. ಗಿರೀಶ್ ಬದೋಲೆ, ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಪ್ರದೀಪ್ ಗುಂಟಿ, ಇಲಾಖೆಯ ನಿರ್ದೇಶಕ ರಾಘವೇಂದ್ರ, ಜಂಟಿ ಕಾರ್ಯದರ್ಶಿ ಹಾಗೂ ಸಚಿವರ ವಿಶೇಷ ಕರ್ತವ್ಯಾಧಿಕಾರಿ ಬಿ.ಎಚ್.ನಿಶ್ಚಲ್, ಅಂಗವಿಕಲ ವ್ಯಕ್ತಿಗಳ ಹಕ್ಕುಗಳ ಅಧಿನಿಯಮದ ರಾಜ್ಯ ಆಯುಕ್ತ ದಾಸ್ ಸೂರ್ಯವಂಶಿ ಸೇರಿದಂತೆ ಇಲಾಖೆಯ ಜಂಟಿ ನಿರ್ದೇಶಕರು, ಉಪ ನಿರ್ದೇಶಕರು ಸೇರಿದಂತೆ ಅಧಿಕಾರಿಗಳು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮೈಸೂರು | ನಂಜನಗೂಡಿನಲ್ಲಿ ಮರಗಳ ಹನನ; ಸಂಘಟನೆಗಳಿಂದ ಪ್ರತಿಭಟನೆ

ದಿನಾಂಕ-07-03-2026ರಂದು ಮೈಸೂರು ಜಿಲ್ಲೆ, ನಂಜನಗೂಡಿನ ಹೆಜ್ಜಿಗೆ ಗ್ರಾಮದ ಬಳಿ ಕಪಿಲಾ ನದಿ...

ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಬ್ಯಾಲೆಟ್ ಪೇಪರ್ ಬಳಕೆ; ವಿಧಾನಸಭೆಯಲ್ಲಿ ಮಸೂದೆ ಅಂಗೀಕಾರ

ರಾಜ್ಯದ ಸ್ಥಳೀಯ ಸಂಸ್ಥೆಗಳ ಚುನಾವಣಾ ಪ್ರಕ್ರಿಯೆಯಲ್ಲಿ ಬದಲಾವಣೆ ತರಲು ರಾಜ್ಯ ಸರ್ಕಾರ...

ಗುಂಡ್ಲುಪೇಟೆ | ಸಿಡಿಪಿಒ ವಿರುದ್ಧ ಜಾರಕಿಹೊಳಿ ಬ್ರಿಗೇಡ್ ಭ್ರಷ್ಟಾಚಾರ ಆರೋಪ; ದೂರು

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ಸಿಡಿಪಿಓ ಹೇಮಾವತಿ ವಿರುದ್ದ ಜಾರಕಿಹೊಳಿ ಬ್ರಿಗೇಡ್ ಜಿಲ್ಲಾಧಿಕಾರಿಯವರಿಗೆ...

ಗದಗ | SC ST ಜನರ ನಡುವೆ ಗಲಾಟೆ; ಗಾಯಾಳುಗಳು ಆಸ್ಪತ್ರೆಗೆ ದಾಖಲು

ನೀರು ಕುಡಿದ ವಿಚಾರಕ್ಕೆ ಪರಿಶಿಷ್ಟ ಜಾತಿ(SC) ಪರಿಶಿಷ್ಟ(ST) ಜನಾಂಗದವರ ನಡುವೆ ಗಲಾಟೆ...