ಬೆಂಗಳೂರು ಮೆಟ್ರೋ ದರ ಏರಿಕೆ ವಿರುದ್ಧ ಸಹಿ ಸಂಗ್ರಹಕ್ಕೆ ತಡೆಯೊಡ್ಡಿದ ಪೊಲೀಸರು: ಬೆಂಬಲಕ್ಕೆ ನಿಂತ ಜನ

Date:

‘ನಮ್ಮ ಮೆಟ್ರೋ’ ದರ ಏರಿಕೆಯ ವಿರುದ್ಧ ಸಾಮಾಜಿಕ ಹೋರಾಟಗಾರರು ನಡೆಸುತ್ತಿದ್ದ ಸಹಿ ಸಂಗ್ರಹ ಅಭಿಯಾನಕ್ಕೆ ಬೆಂಗಳೂರು ನಗರ ಪೊಲೀಸರು ತಡೆಯೊಡ್ಡಿದ ಘಟನೆ ಶುಕ್ರವಾರ ಸಂಜೆ ಎಂ ಜಿ ರೋಡ್‌ ಮೆಟ್ರೋ ಸ್ಟೇಷನ್ ಬಳಿ ನಡೆದಿದೆ.

ಬೆಂಗಳೂರು ನಾಗರಿಕ ಹೋರಾಟಗಾರರೇ ಸೇರಿಕೊಂಡು ‘ಬೆಂಗಳೂರು ಉಳಿಸಿ’ ಎಂಬ  ಸಮಿತಿ ರಚಿಸಿದ್ದು, ಇದರ ನೇತೃತ್ವದಲ್ಲಿ ಫ್ರೀಡಂ ಪಾರ್ಕಿನಲ್ಲಿ ಶನಿವಾರ ಸಂಜೆ 4.30ಕ್ಕೆ ಮೆಟ್ರೋ ದರ ಏರಿಕೆಯ ವಿರುದ್ಧ  ಬೃಹತ್ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗಿದೆ. ಈ ಹಿನ್ನೆಲೆಯಲ್ಲಿ ಹೋರಾಟ ಸಮಿತಿಯ ಮುಖಂಡರು ಬೆಂಗಳೂರಿನ ಮೆಟ್ರೋ ನಿಲ್ದಾಣಗಳಿಗೆ ತೆರಳಿ ಸಾರ್ವಜನಿಕರಿಂದ ಸಹಿ ಸಂಗ್ರಹ ಅಭಿಯಾನವನ್ನು ನಡೆಸುತ್ತಿದ್ದಾರೆ.

ಇಂದು(ಶುಕ್ರವಾರ) ಎಂ ಜಿ ರೋಡ್ ಮೆಟ್ರೋ ಸ್ಟೇಷನ್‌ ಬಳಿ ಇರುವ ಚರ್ಚ್ ಸ್ಟ್ರೀಟ್‌ನಲ್ಲಿ ನಾಗರಿಕ ಸಮಿತಿ ವತಿಯಿಂದ ಸಹಿ ಸಂಗ್ರಹ ನಡೆಸುತ್ತಿದ್ದಾಗ ಸ್ಥಳಕ್ಕೆ ಬಂದ ಕಬ್ಬನ್ ಪಾರ್ಕ್‌ ಸ್ಟೇಷನ್‌ನ ಪೊಲೀಸ್ ಅಧಿಕಾರಿಗಳು, ಸಹಿ ಸಂಗ್ರಹ ನಡೆಸಲು ಅನುಮತಿ ಪಡೆದಿಲ್ಲ ಎಂಬ ನೆಪವೊಡ್ಡಿ ತಡೆಯಲು ಯತ್ನಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಪೊಲೀಸರು ತಡೆಯೊಡ್ಡಿದಾಗ ಹೋರಾಟಗಾರರ ಬೆಂಬಲಕ್ಕೆ ಮೆಟ್ರೋದಿಂದ ಕೆಳಗಿಳಿಯುತ್ತಿದ್ದ ಪ್ರಯಾಣಿಕರು ಬೆಂಬಲ ಸೂಚಿಸಿದ್ದಾರೆ. ಜನರು ಬೆಂಬಲಕ್ಕೆ ನಿಲ್ಲುತ್ತಿದ್ದಂತೆಯೇ ಪೊಲೀಸರೊಂದಿಗೆ ವಾಗ್ವಾದ ಕೂಡ ನಡೆದಿರುವುದಾಗಿ ವರದಿಯಾಗಿದೆ.

ಘಟನೆಯ ಬಗ್ಗೆ ಈದಿನ ಡಾಟ್ ಕಾಮ್ ಜೊತೆಗೆ ಮಾಹಿತಿ ನೀಡಿರುವ ಎಸ್‌ಯುಸಿಎಲ್ ಸಂಘಟನೆಯ ಮುಖಂಡರಾದ ಶಿವಪ್ರಕಾಶ್, “ಮೆಟ್ರೋ ದಿಢೀರ್ ದರ ಏರಿಕೆಯ ವಿರುದ್ಧ ನಾವು ಕಳೆದ ಕೆಲವು ದಿನಗಳಿಂದ ನಾನಾ ಮೆಟ್ರೋ ಸ್ಟೇಷನ್‌ಗೆ ತೆರಳಿ ಜನರಿಂದ ಸಹಿ ಸಂಗ್ರಹ ಮಾಡುತ್ತಿದ್ದೇವೆ. ಈ ಹಿನ್ನೆಲೆಯಲ್ಲಿ ಇಂದು ಮಹಾತ್ಮ ಗಾಂಧಿ(ಎಂ ಜಿ ರೋಡ್) ಮೆಟ್ರೋ ಸ್ಟೇಷನ್‌ನ ನಿಲ್ದಾಣಕ್ಕೂ ತೆರಳಿದ್ದೆವು. ಈ ವೇಳೆ ಜನರ ಕೂಡ ಸಹಕಾರ ನೀಡುತ್ತಿದ್ದರು. ಈ ವೇಳೆ ಸಂಜೆ 7.30ರ ಸುಮಾರಿಗೆ ಸ್ಥಳಕ್ಕೆ ಬಂದ ಪೊಲೀಸರು, ಪರ್ಮಿಷನ್ ತಗೊಂಡಿಲ್ಲ ಎಂದು ವಾದಕ್ಕೆ ನಿಂತರು. ಈ ವೇಳೆ ಬೆಲೆ ಏರಿಕೆಯಿಂದ ಆಕ್ರೋಶಗೊಂಡಿದ್ದ ಜನರು ನಮ್ಮ ಪರ ನಿಂತರು. ಪೊಲೀಸರ ವಿರುದ್ಧವೇ ಸಿಡಿದೆದ್ದರು” ಎಂದು ತಿಳಿಸಿದರು.

WhatsApp Image 2025 02 14 at 9.01.40 PM 1

ವಾದ ವಿವಾದ ನಡೆಯುತ್ತಿದ್ದಂತೆಯೇ, ಮೆಟ್ರೋದವರು ಬೆಲೆ ಏರಿಕೆ ಮಾಡುವಾಗ ಜನತೆಯಿಂದ ಒಂದು ಅಭಿಪ್ರಾಯನೂ ಪಡೆದಿಲ್ಲ. ಏಕಾಏಕಿ ಏರಿಸಿ ನಮ್ಮನ್ನು ಕಷ್ಟಕ್ಕೆ ದೂಡಿದ್ದಾರೆ. ಇದಕ್ಕೆ ಮೊದಲು ಉತ್ತರಿಸಬೇಕು ಎಂದು ಪಟ್ಟು ಹಿಡಿದು ನೂರಾರು ಜನ ಸೇರಿಕೊಂಡಾಗ ಕೊನೆಗೆ ಪೊಲೀಸರೇ ಸುಮ್ಮನಾಗಿ, ‘ಘೋಷಣೆ ಕೂಗುವ ಹಾಗಿಲ್ಲ’ ಎಂದು ತಿಳಿಸಿದರು. ಆ ಬಳಿಕ ಅಲ್ಲಿ ಸಹಿ ಸಂಗ್ರಹ ಅಭಿಯಾನ ಮುಗಿಸಿ, ಹಲಸೂರು, ಮಂತ್ರಿ ಮಾಲ್, ಮೆಜೆಸ್ಟಿಕ್, ರಾಜಾಜಿ ನಗರ ಮೆಟ್ರೋ ಸ್ಟೇಷನ್‌ ಬಳಿ ತೆರಳಿ ಸಹಿ ಸಂಗ್ರಹಿಸಿದೆವು ಎಂದು ತಿಳಿಸಿದರು.

WhatsApp Image 2025 02 14 at 8.59.58 PM 2

“ಜನತೆ ಮೆಟ್ರೋ ದರ ಏರಿಕೆಯಿಂದ ಆಕ್ರೋಶಗೊಂಡಿದ್ದಾರೆ. ಸರ್ಕಾರಗಳು ಈ ರೀತಿಯಲ್ಲಿ ಜನರ ಸುಲಿಗೆ ಮಾಡುವುದನ್ನು ನಿಲ್ಲಿಸಬೇಕು. ಮೆಟ್ರೋ ದರ ಏರಿಕೆ ಮಾಡಿರುವುದನ್ನು ಖಂಡಿಸುತ್ತೇವೆ. ದರ ಇಳಿಸುವಂತೆ ಒತ್ತಾಯಿಸಿ  ‘ಬೆಂಗಳೂರು ಉಳಿಸಿ’ ಎಂಬ  ಸಮಿತಿ ರಚಿಸಿ, ಇದರ ನೇತೃತ್ವದಲ್ಲಿ ಫ್ರೀಡಂ ಪಾರ್ಕಿನಲ್ಲಿ ಶನಿವಾರ ಸಂಜೆ 4.30ಕ್ಕೆ ಬೃಹತ್ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗಿದೆ. ಇದರಲ್ಲಿ ಸಾರ್ವಜನಿಕರು ಭಾಗವಹಿಸಬೇಕು” ಎಂದು ‘ಬೆಂಗಳೂರು ಉಳಿಸಿ’ ಸಮಿತಿಯ ಪರವಾಗಿ ಶಿವಪ್ರಕಾಶ್ ವಿನಂತಿಸಿದ್ದಾರೆ.

WhatsApp Image 2025 02 14 at 8.59.58 PM 1
WhatsApp Image 2025 02 14 at 8.59.58 PM
WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುಂಡ್ಲುಪೇಟೆ | ಸಿಡಿಪಿಒ ವಿರುದ್ಧ ಜಾರಕಿಹೊಳಿ ಬ್ರಿಗೇಡ್ ಭ್ರಷ್ಟಾಚಾರ ಆರೋಪ; ದೂರು

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ಸಿಡಿಪಿಓ ಹೇಮಾವತಿ ವಿರುದ್ದ ಜಾರಕಿಹೊಳಿ ಬ್ರಿಗೇಡ್ ಜಿಲ್ಲಾಧಿಕಾರಿಯವರಿಗೆ...

ಗದಗ | SC ST ಜನರ ನಡುವೆ ಗಲಾಟೆ; ಗಾಯಾಳುಗಳು ಆಸ್ಪತ್ರೆಗೆ ದಾಖಲು

ನೀರು ಕುಡಿದ ವಿಚಾರಕ್ಕೆ ಪರಿಶಿಷ್ಟ ಜಾತಿ(SC) ಪರಿಶಿಷ್ಟ(ST) ಜನಾಂಗದವರ ನಡುವೆ ಗಲಾಟೆ...

ದಾವಣಗೆರೆ | ರಾಜಕಾಲುವೆ ಚರಂಡಿ ಹಾಗೂ ತಡೆ ಗೋಡೆ ನಿರ್ಮಾಣ ಕಾಮಗಾರಿ ಸ್ಥಗಿತಕ್ಕೆ ತಹಶೀಲ್ದಾರ್ ಆದೇಶ

ರಾಜಕಾಲುವೆ ಭೂಮಾಪನ ಕಾರ್ಯ ಸಂಪೂರ್ಣಗೊಳ್ಳುವವರೆಗೆ ಹರಿಹರ ನಗರದ ರಾಜ ಕಾಲುವೆಯಲ್ಲಿ ಸಣ್ಣ...

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...