ಚಿಕ್ಕಮಗಳೂರು | ವಕೀಲನ ಮೇಲೆ ದೌರ್ಜನ್ಯ: ಪೊಲೀಸರನ್ನು ಹಿಡಿಯಲು ವಿಶೇಷ ಪೊಲೀಸರು!

Date:

ರಾಜ್ಯಾದ್ಯಂತ ಸುದ್ದಿಯಾಗಿರುವ ಯುವ ವಕೀಲನೋರ್ವನ ಮೇಲೆ ಚಿಕ್ಕಮಗಳೂರಿನ ಪೊಲೀಸರು ನಡೆಸಿದ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಆರು ಮಂದಿ ಪೊಲೀಸರು ಅಮಾನತಾದ ಬೆನ್ನಲ್ಲೇ ತಲೆಮರೆಸಿಕೊಂಡಿದ್ದಾರೆ.

ಸದ್ಯ ತಲೆಮರೆಸಿಕೊಂಡಿರುವ ಪೊಲೀಸರನ್ನು ಹುಡುಕಲಿಕ್ಕೆಂದೇ ವಿಶೇಷ ಪೊಲೀಸರ ತಂಡವನ್ನು ಚಿಕ್ಕಮಗಳೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಚನೆ ಮಾಡಿದ್ದಾರೆ.

ಈ ಬಗ್ಗೆ ಮಾಹಿತಿ ನೀಡಿರುವ ಚಿಕ್ಕಮಗಳೂರು ಎಸ್‌ಪಿ ಡಾ.ವಿಕ್ರಮ್ ಅಮಟೆ, ‘ವಕೀಲ ಪ್ರೀತಮ್ ಎಂಬುವವರ ಮೇಲೆ ನಡೆದಿದ್ದ ಹಲ್ಲೆಗೆ ಸಂಬಂಧಪಟ್ಟಂತೆ ಚಿಕ್ಕಮಗಳೂರು ನಗರ ಠಾಣೆಯಲ್ಲಿ ಗುರುವಾರ (ನ.30) ಪ್ರಕರಣ ದಾಖಲಾಗಿತ್ತು. ಆ ಬಳಿಕ ಆರೋಪಿಗಳು ತಲೆಮರೆಸಿಕೊಂಡಿದ್ದು, ಪಿಎಸ್‌ಐ ಸೇರಿದಂತೆ ಆರು ಮಂದಿ ಪೊಲೀಸ್ ಸಿಬ್ಬಂದಿಗಳ ಬಂಧನಕ್ಕೆ ಚಿಕ್ಕಮಗಳೂರು ಡಿವೈಎಸ್‌ಪಿ ಶೈಲೇಂದ್ರ ಕುಮಾರ್ ನೇತೃತ್ವದಲ್ಲಿ ವಿಶೇಷ ತಂಡ ರಚನೆ ಮಾಡಲಾಗಿದೆ’ ಎಂದು ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
sp chikkamagaluru vikram amate
ಚಿಕ್ಕಮಗಳೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವಿಕ್ರಮ್ ಅಮಟೆ

 

ಇದೇನು ಉಗಾಂಡವೇ?: ಹೈಕೋರ್ಟ್ ಗರಂ
ಇನ್ನು ಈ ಘಟನೆಗೆ ಸಂಬಂಧಪಟ್ಟಂತೆ ಪಿಎಸ್​ಐ ಸೇರಿದಂತೆ 6 ಪೊಲೀಸ್​ ಸಿಬ್ಬಂದಿಗಳ ಬಂಧನಕ್ಕೆ ಆಗ್ರಹಿಸಿದ್ದ ವಕೀಲರು, ರಾಜ್ಯಾದ್ಯಂತ ಕೋರ್ಟ್ ಬಹಿಷ್ಕರಿಸಿ ಪ್ರತಿಭಟನೆ ಮಾಡಿದ್ದರು.

ಈ ಹಿನ್ನೆಲೆಯಲ್ಲಿ ನಿನ್ನೆ(ಡಿ.01) ಹೈಕೋರ್ಟ್ ಸ್ವಯಂಪ್ರೇರಿತವಾಗಿ ಪ್ರಕರಣ ದಾಖಲಿಸಿಕೊಂಡು ವಿಚಾರಣೆ ನಡೆಸಿತ್ತು.

ಇದನ್ನು ಓದಿದ್ದೀರಾ? ಚಿಕ್ಕಮಗಳೂರು | ಠಾಣೆಯಲ್ಲಿ ಕೂಡಿಹಾಕಿ ಯುವ ವಕೀಲನಿಗೆ ಥಳಿತ; ಪಿಎಸ್‌ಐ ಸೇರಿ 6 ಮಂದಿ ಅಮಾನತು

ವಿಚಾರಣೆಯ ವೇಳೆ, ‘ಇದೇನು ಉಂಗಾಡವೇ’ ಎಂದು ಪ್ರಶ್ನಿಸಿದ ಹೈಕೋರ್ಟ್‌, ‘ಚಿಕ್ಕಮಗಳೂರಿನಲ್ಲಿ ವಕೀಲ ಪ್ರೀತಂ ಮೇಲೆ ಪೊಲೀಸರಿಂದ ನಡೆದಿರುವ ಹಲ್ಲೆ ಪ್ರಕರಣ ಈ ಹಿಂದೆ ಉಗಾಂಡದಲ್ಲಿ ನಡೆಯುತ್ತಿದ್ದಂತಹ ಸಂಗತಿಗಳನ್ನು ನೆನಪಿಸಿದೆ. ವಕೀಲರಿಗೆ ಹೀಗಾದರೆ ಸಾಮಾನ್ಯರ ಗತಿಯೇನು? ಪೊಲೀಸರ ನಡೆ ಕಾನೂನಿಗೆ ಬೆದರಿಕೆ ಎಂದು ಮೌಖಿಕವಾಗಿ ಕಳವಳ ವ್ಯಕ್ತಪಡಿಸಿತ್ತು. ಅಲ್ಲದೇ, ಘಟನೆಯ ಸಂಪೂರ್ಣ ವರದಿ ಕೇಳಿದ್ದು, ಮಂಗಳವಾರದ ಒಳಗೆ ತನಿಖೆಯ ಸಂಪೂರ್ಣ ಮಾಹಿತಿ ನೀಡುವಂತೆ ಸೂಚಿಸಿದೆ.

ಈ ಘಟನೆಯ ಬಗ್ಗೆ ಈ ದಿನ.ಕಾಮ್ ಜೊತೆಗೆ ಮಾತನಾಡಿದ ಹೈಕೋರ್ಟ್‌ನ ಹಿರಿಯ ವಕೀಲ ಹಾಗೂ ಬೆಂಗಳೂರು ವಕೀಲರ ಸಂಘದ ಅಧ್ಯಕ್ಷ ವಿವೇಕ್ ಸುಬ್ಬಾರೆಡ್ಡಿ, “ಭಾರತೀಯ ದಂಡ ಸಂಹಿತೆಯಲ್ಲಿ ಪೊಲೀಸರು ಆರೋಪಿಗಳಾದರೆ ಅವರಿಗೂ ಕೂಡ ಅದೇ ನ್ಯಾಯ ಅನ್ವಯವಾಗುತ್ತದೆ. ಚಿಕ್ಕಮಗಳೂರು ಘಟನೆಯಲ್ಲಿ ಎಫ್‌ಐಆರ್ ದಾಖಲಿಸಿದ್ದು ಬಿಟ್ಟರೆ, ಇದುವರೆಗೂ ಬೇರೆ ಯಾವುದೇ ಕಠಿಣ ಕ್ರಮ ಆಗಿಲ್ಲ. ಇದು ನಿಜಕ್ಕೂ ಶೋಚನೀಯ. ಪೊಲೀಸ್‌ನವರಿಗೆ ಬೇರೆಯೇ ದಂಡ ಸಂಹಿತೆ ಇದೆಯೇ? ಎಂದು ನಾವು ಪ್ರಶ್ನಿಸಬೇಕಾದ ಅನಿವಾರ್ಯತೆ ಸೃಷ್ಟಿಯಾಗಿದೆ’ ಎಂದು ತಿಳಿಸಿದರು.

‘ಸಾಮಾನ್ಯ ಜನರ ಮೇಲೆ ಐಪಿಸಿ ಸೆಕ್ಷನ್ 307(ಕೊಲೆ ಯತ್ನ) ಪ್ರಕರಣ ದಾಖಲಾದರೆ, ಪೊಲೀಸರು ತಕ್ಷಣ ಅವರನ್ನು ವಶಕ್ಕೆ ಪಡೆದುಕೊಂಡು ನ್ಯಾಯಾಲಯಕ್ಕೆ ಹಾಜರುಪಡಿಸುತ್ತಾರೆ. ಆದರೆ ಈ ಪ್ರಕರಣದಲ್ಲಿ ಪೊಲೀಸರು ವಿರಾಜಮಾನರಾಗಿ ಓಡಾಡಿಕೊಂಡಿದ್ದಾರೆ. ಈ ಅನ್ಯಾಯವನ್ನು ನಾವು ಖಂಡಿಸುತ್ತೇವೆ. ಚಿಕ್ಕಮಗಳೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ತನಿಖಾ ತಂಡ ರಚಿಸಿ 24 ಗಂಟೆಗಳಾದರೂ ಇನ್ನೂ ಅವರನ್ನು ಬಂಧಿಸಿಲ್ಲ. ತನಿಖೆ ನಡೆಸುತ್ತಿರುವ ಪೊಲೀಸರು, ಆರೋಪ ಹೊತ್ತಿರುವ ಪೊಲೀಸರನ್ನು ರಕ್ಷಣೆ ಮಾಡುತ್ತಿರಬಹುದೇ ಎಂಬ ಅನುಮಾನ ವಕೀಲ ಸಮುದಾಯದವರ ನಡುವೆ ಹುಟ್ಟಿಕೊಂಡಿದೆ. ಪೊಲೀಸ್ ಸ್ಟೇಷನ್ ಒಳಗಡೆ ಆಗಿರುವ ಈ ಘಟನೆಯ ಬಗ್ಗೆ ಹೈಕೋರ್ಟ್‌ ಕೂಡ ತುಂಬಾ ಕಳವಳ ವ್ಯಕ್ತಪಡಿಸಿದೆ. ಘಟನೆಯ ಬಗ್ಗೆ ಸಿಸಿಟಿವಿ ದೃಶ್ಯಾವಳಿಯನ್ನು ನ್ಯಾಯಾಲಯಕ್ಕೆ ಸಲ್ಲಿಸುವ ಬಗ್ಗೆಯೂ ನಾವು ಅರ್ಜಿ ಸಲ್ಲಿಸಲಿದ್ದೇವೆ’ ಎಂದು ವಿವೇಕ್ ಸುಬ್ಬಾರೆಡ್ಡಿ ತಿಳಿಸಿದ್ದಾರೆ.

ಏನಿದು ಘಟನೆ?
ದ್ವಿಚಕ್ರ ವಾಹನದಲ್ಲಿ ಹೆಲ್ಮೆಟ್ ಧರಿಸದೆ ಬಂದ ಚಿಕ್ಕಮಗಳೂರಿನ ಯುವ ವಕೀಲ ಪ್ರೀತಂ ಎಂಬುವವರನ್ನು ಠಾಣೆಯಲ್ಲಿ ಕೂಡಿಹಾಕಿ ಪೊಲೀಸರು ಮನಸೋ ಇಚ್ಛೆ ಹಲ್ಲೆ ನಡೆಸಿರುವ ಘಟನೆ ಕಳೆದ ನ.30ರ ರಾತ್ರಿ ಚಿಕ್ಕಮಗಳೂರಿನಲ್ಲಿ ನಡೆದಿದೆ. ಘಟನೆಗೆ ಸಂಬಂಧಿಸಿ ಈಗಾಗಲೇ ಪಿಎಸ್‌ಐ ಸೇರಿ 6 ಮಂದಿ ಪೊಲೀಸರನ್ನು ಅಮಾನತುಗೊಳಿಸಲಾಗಿದೆ.

vakeela visit
ವಕೀಲ ಪ್ರೀತಂ ಅವರ ಆರೋಗ್ಯ ವಿಚಾರಿಸಿದ ಬೆಂಗಳೂರು ವಕೀಲರ ಸಂಘದ ಅಧ್ಯಕ್ಷ ವಿವೇಕ್ ಸುಬ್ಬಾರೆಡ್ಡಿ ಹಾಗೂ ವಕೀಲರು

ಯುವ ವಕೀಲ ಪ್ರೀತಂ ಎಂಬುವವರು ಗುರುವಾರ ರಾತ್ರಿ ಹೆಲ್ಮೆಟ್ ಇಲ್ಲದೆ ಮಾರುಕಟ್ಟೆ ರಸ್ತೆಯಲ್ಲಿ ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದರು. ಠಾಣೆಯ ಎದುರು ಅಡ್ಡಗಟ್ಟಿದ ಚಿಕ್ಕಮಗಳೂರು ನಗರ ಪೊಲೀಸರು, ಅವರ ಬೈಕ್‌ನಿಂದ ಕೀ ಕಸಿದುಕೊಂಡಿದ್ದಾರೆ. ಬಳಿಕ ಠಾಣೆಯೊಳಗೆ ಕರೆದುಕೊಂಡು ಹೋಗಿ, ಕೂಡಿ ಹಾಕಿದ್ದಲ್ಲದೇ, ಮನಸೋ ಇಚ್ಛೆ ಹಲ್ಲೆ ನಡೆಸಿದ್ದಾರೆ.

ಪೊಲೀಸರ ದೌರ್ಜನ್ಯದಿಂದ ವಕೀಲ ಪ್ರೀತಂ ಅವರ ಎದೆ, ಕೈ ಮತ್ತು ಬೆನ್ನಿಗೆ ಸಾಕಷ್ಟು ಗಾಯಗಳಾಗಿದ್ದು, ಇದು ವಕೀಲ ಸಮೂಹವನ್ನು ಇನ್ನಷ್ಟು ಕೆರಳುವಂತೆ ಮಾಡಿತ್ತು. ರಾತ್ರಿಯಿಡೀ ಠಾಣೆಯ ಎದುರು ಧರಣಿ ನಡೆಸಿ, ಹಲ್ಲೆ ನಡೆಸಿದ ಪೊಲೀಸರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...