ಶಿವಮೊಗ್ಗ | ಆನಂದಪುರದಲ್ಲಿ ಆರೋಪಿ ಸಚಿನ್ ಅಲಿಯಾಸ್ ಶ್ಯಾಡೋಗೆ ಪೊಲೀಸರ ಗುಂಡೇಟು

Date:

ಸಾಗರ ತಾಲೂಕಿನ ಆನಂದಪುರದಲ್ಲಿ ಬೆನ್ಜ್ ಲಾರಿಗೆ ಅಡ್ಡ ಹಾಕಿ ಸುಲಿಗರ, ಬೆದರಿಕೆ, ಪೆಟ್ರೋಲ್ ಬಂಕ್ ನಲ್ಲಿ ಪೆಟ್ರೋಲ್ ಹಾಕಿಸಿ ಹಣ ನೀಡದೆ ಎಸ್ಕೇಪ್, ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದ ಬೆನ್ನಲ್ಲೆ ಸಚಿನ್ ಅಲಿಯಾಸ್ ಶ್ಯಾಡೋಗೆ ಕಾಲಿಗೆ ಗುಂಡೇಟು ಹೊಡೆಯಲಾಗಿದೆ.

ಗೂಂಡಾ ಆಕ್ಟ್ ನಲ್ಲಿ ಒಂದು ವರ್ಷದ ಹಿಂದೆ ಜೈಲಿಗೆ ತೆರಳಿದ್ದ ಸಚಿನ್ ಶ್ಯಾಡೋ 20 ದಿನಗಳ ಹಿಂದೆ ರಿಲೀಸ್ ಆಗಿ ಬಂದಿದ್ದ. ದೊಡ್ಡಪೇಟೆ, ತುಂಗ ನಗರ , ಜಯನಗರ, ಕೋಟೆ, ಶಿವಮೊಗ್ಗ ಗ್ರಾಮಾಂತರ ಪೊಲೀಸ್ ಠಾಣೆ, ವಿನೋಬ ನಗರ ಪೊಲೀಸ್ ಠಾಣೆಯಲ್ಲಿ ಸುಲಿಗೆ ಪ್ರಕರಣಗಳು ದಾಖಲಾಗಿತ್ತು.

20 ದಿನಗಳ ಹಿಂದೆ ಜೈಲಿನಿಂದ ಬಿಡುಗಡೆಯಾಗಿ ಬಂದಿದ್ದ ಸ್ಯಾಡೋ ಆನಂದಪುರದ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಚಲಿಸುತ್ತಿದ್ದ ಲಾರಿಯನ್ನ ಅಡ್ಡಹಾಕಿ ಚಾಲಕನ ಮೊಬೈಲ್ ಮತ್ತು ಹಣ ಕಿತ್ತುಕೊಂಡು ಓಡಿಹೋಗಿದ್ದ.ಪೆಟ್ರೋಲ್ ಬಂಕ್ ನಲ್ಲಿ ಹಣ ನೀಡದೆ ಟೋಪಿಹಾಕಿ ಪರಾರಿಯಾಗಿದ್ದ ಸಚಿನ್ ಯಾನೆ ಸ್ಯಾಡೋ ವಿರುದ್ಧ ಪೆಟ್ರೋಲ್ ಬಂಕ್ ನ ಸಂಘದ ಅಧ್ಯಕ್ಷ ಮತ್ತು ಎಂಎಲ್ ಸಿ ಅರುಣ್ ಎಸ್ಪಿ ಅವರಿಗೆ ಮಾಹಿತಿ ನೀಡಿದ್ದರು. ಈ ಹಿನ್ನಲೆಯಲ್ಲಿ ಆನಂದಪುರ ಮತ್ತು ಎಸ್ಪಿಗೆ ಸಚಿನ್ ದೂರು ನೀಡಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಅನಂದಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಇಂದು ಪೊಲೀಸರ ಗುಂಡಿನ ಸದ್ದು ಕೇಳಿ ಬಂದಿದೆ. ಶ್ಯಾಡೋ ಸಚಿನ್‌ ಎಂಬ ಆರೋಪಿಯ ಕಾಲಿಗೆ ಗುಂಡು ಹಾರಿಸಿದ್ದಾರೆ.

1001700605

ಸ್ಯಾಡೋ ಸಚಿನ್ ಎಂಬುವವನ ಮೇಲೆ 30 ಪ್ರಕರಣವಿದ್ದು ಪ್ರಕರಣದ ಆರೋಪಿಯನ್ನು ಮಂಗಳವಾರ ಮಧ್ಯಾಹ್ನ ಮೆಣಸಿನಸರ ಬಳಿ ಈತನನ್ನ ಬಂಧಿಸುವ ಸಂದರ್ಭದಲ್ಲಿ ಆರೋಪಿಯು ಹೆಡ್ ಕಾನ್ಸೆಬಲ್ ಆಶೋಕ್ ರವರ ಮೇಲೆ ಮಚ್ಚಿನಿಂದ ಹಲ್ಲೆ ಮಾಡಿ ಪಿಎಸ್‌ಐ ಯುವರಾಜ್ ರ ಮೇಲೆ ಹಲ್ಲೆ ಮಾಡಲು ಯತ್ನ ಮಾಡಿದ್ದಾನೆ ಎಂಬ ಮಾಹಿತಿಯಾಗಿದೆ.

ಪೊಲೀಸರು ತಮ್ಮ ಆತ್ಮ ರಕ್ಷಣೆಗಾಗಿ ಆರೋಪಿಯ ಕಾಲಿಗೆ ಗುಂಡು ಹಾರಿಸಿದ್ದಾರೆ ಎಂದು ತಿಳಿದುಬಂದಿದೆ.ಒಂದು ಸುತ್ತು ಪಿಎಸ್ಐ ಗುಂಡು ಹಾರಿಸಿದ್ದಾರೆ. ನಂತರ ಆತನ ಎಡಗಾಲಿಗೆ ಗುಂಡು ಹಾರಿಸಿ ರಕ್ಷಣೆ ಮಾಡಲಾಗಿದೆ. ಗಾಯಗೊಂಡ ಸಿಬ್ಬಂದಿ ಮತ್ತು ಸಿಬ್ಬಂದಿಯನ್ನ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...