ಯೂಟ್ಯೂಬರ್ ಸಮೀರ್ ಎಂ.ಡಿ. ಮನೆ ಸುತ್ತುವರಿದ ಖಾಕಿ ಪಡೆ, ತಾಯಿಯ ವಿಚಾರಣೆ

Date:

ಯೂಟ್ಯೂಬರ್ ಸಮೀರ್.ಎಂ.ಡಿ ಬಂಧನಕ್ಕೆ ಸಂಬಂಧಿಸಿದಂತೆ ಬೆಂಗಳೂರಿನಲ್ಲಿರುವ ಸಮೀರ್ ಅವರ ಮನೆಯನ್ನು ಧರ್ಮಸ್ಥಳ ಖಾಕಿ ಪಡೆ ಸುತ್ತುವರಿದಿದೆ. ಅವರನ್ನು ಬಂಧಿಸುವ ಸಾಧ್ಯತೆ ಇದೆ ಎಂದು ತಿಳಿದು ಬಂದಿದೆ.

ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ದಾಖಲಾದ ಪ್ರಕರಣದ ಸಂಬಂಧ ನೋಟಿಸ್ ನೀಡಿದ್ದರೂ ವಿಚಾರಣೆಗೆ ಠಾಣೆಗೆ ಹಾಜರಾಗದ ಹಿನ್ನೆಲೆ ಯೂಟ್ಯೂಬರ್ ಸಮೀರ್.ಎಮ್.ಡಿ ಬಂಧನ ಮಾಡಲು ವಾರೆಂಟ್ ಜತೆಗೆ ಧರ್ಮಸ್ಥಳ ಪೊಲೀಸ್ ಸಬ್ ಇನ್ಸ್ಪೆಕ್ಟರ್ ಅನಂದ್.ಎಮ್ ರವರ ನೇತೃತ್ವದ ತಂಡ ಬೆಂಗಳೂರಿನ ಬನ್ನೇರುಘಟ್ಟದಲ್ಲಿರುವ ಯೂಟ್ಯೂಬರ್ ಸಮೀರ್.ಎಮ್.ಡಿ ಬಾಡಿಗೆ ಮನೆಗೆ ಆ.21 ರಂದು ಸುತ್ತುವರಿದ್ದಾರೆ ಎನ್ನಲಾಗಿದೆ.

ಈ ಬಗ್ಗೆ ಸ್ವತಃ ಹೋರಾಟಗಾರ ಗಿರೀಶ್ ಮಟ್ಟಣ್ಣಣವರ್ ತಮ್ಮ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟರ್ ಹಾಕಿದ್ದಾರೆ‌.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸಮೀರ್‌ ತಾಯಿಯ ವಿಚಾರಣೆ

ಯೂಟ್ಯೂಬರ್ ಸಮೀರ್ ಎಂ.ಡಿ. ಮನೆ ಸುತ್ತುವರಿದಿದ್ದ ಖಾಕಿ ಪಡೆ ಕೊನೆಗೂ ಮನೆಯನ್ನು ಕಂಡುಹಿಡಿದು ಸಮೀರ್‌ ತಾಯಿಯನ್ನು ವಿಚಾರಣೆ ಮಾಡಿ ಮಾಹಿತಿ ಪಡೆದಿದ್ದಾರೆ. ಸಮೀರ್‌ ಬೇರೊಂದು ಪ್ರಕರಣದ ನಿಮಿತ್ತ ಹಿರಿಯ ವಕೀಲರನ್ನು ಕಾಣುವ ಸಲುವಾಗಿ ಬೆಳಿಗ್ಗೆಯೆ ಮನೆಯಿಂದ ತೆರಳಿದ್ದರು ಅಂತ ಅವರ ತಾಯಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಸಮೀರ್‌ ಪರ ವಕೀಲರ ಸಮ್ಮುಖದಲ್ಲಿ ಪೊಲೀಸರು ಸಮೀರ್‌ ತಾಯಿಯವರನ್ನು ವಿಚಾರಿಸಿದ್ದು, ಸಮೀರ್‌ ತಾಯಿ ಸಕಾರಾತ್ಮಕವಾಗಿ ಸ್ಪಂದಿಸಿ ಮನೆಯೆಲ್ಲ ತೋರಿಸಿದ್ದಾರೆ. ಮುಂದುವರೆದು, ಮಗ ಬಂದ ಕೂಡಲೇ ಪೊಲೀಸರ ಬಳಿಗೆ ವಕೀಲರೊಂದಿಗೆ ಕಳುಹಿಸುವುದಾಗಿ ಸಮೀರ್‌ ತಾಯಿ ಹೇಳಿದ್ದರಿಂದ ಪೊಲೀಸರು ಸ್ಥಳದಿಂದ ನಿರ್ಗಮಿಸಿದ್ದಾರೆ.

ಸಮಿರ್‌ ಮನೆ ಮುಂದೆ ಬೆಳಿಗ್ಗೆಯಿಂದಲೇ ಜಮಾಯಿಸಿದ್ದ ಪೊಲೀಸರ ಬಳಿ ಆತನ ಮನೆ ಶೋಧಿಸಲು ಸರ್ಚ್‌ ವಾರೆಂಟ್‌ ಇರಲಿಲ್ಲ. ಅಲ್ಲದೆ, ಸಮೀರ್‌ನನ್ನು ಬಂಧಿಸಲು ಅರೆಸ್ಟ್‌ ವಾರೆಂಟ್‌ ಕೂಡ ಪೊಲೀಸರ ಬಳಿ ಇರಲಿಲ್ಲ ಎಂಬುದಾಗಿ ಸಮೀರ್‌ ತಾಯಿ ಮತ್ತು ಸಮೀರ್‌ ಪರ ವಕೀಲರು ಈದಿನ.ಕಾಂಗೆ ತಿಳಿಸಿದ್ದಾರೆ.

1001880739
eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...