ಯಾದಗಿರಿ | ಪ್ರತಿಭಟನಾನಿರತ ರೈತ ಮುಖಂಡನೊಂದಿಗೆ ಅಮಾನವೀಯತೆಯಿಂದ ವರ್ತಿಸಿದ ಪೊಲೀಸರು

Date:

ಅಂಗನವಾಡಿ ಕೇಂದ್ರಗಳನ್ನು ಮೇಲ್ದರ್ಜೆಗೇರಿಸಲು ಆಗ್ರಹಿಸಿ ಯಾದಗಿರಿಯಲ್ಲಿ ಸಿಐಟಿಯು ನೇತೃತ್ವದಲ್ಲಿ ನಡೆಯುತ್ತಿರುವ ಧರಣಿಗೆ ಕರ್ನಾಟಕ ಪ್ರಾಂತ ರೈತ ಸಂಘದ ಮುಖಂಡ ಚನ್ನಪ್ಪ ಆನೇಗುಂದಿ ಬೆಂಬಲ ಸೂಚಿಸಿ, ಧರಣಿ ನಡೆಸಿದಾಗ ಪೊಲೀಸರು ಅಮಾನವೀಯತೆಯಿಂದ ನಡೆದುಕೊಂಡು, ಮನಬಂದಂತೆ ಎಳೆದಾಡಿ ಪೊಲೀಸ್ ಜೀಪಿನೊಳಗೆ ಹಾಕಿ ವಶಕ್ಕೆ ಪಡೆದ ಘಟನೆ ನಡೆದಿದೆ.

ಅಂಗನವಾಡಿ ಕೇಂದ್ರಗಳನ್ನು ಮೇಲ್ದರ್ಜೆಗೇರಿಸಿ ICDS ಪ್ರತ್ಯೇಕ ನಿರ್ದೇಶನಾಲಯ ಮಾಡಿ, ಪೂರಕ ಪೌಷ್ಠಿಕ ಆಹಾರದ ಬದಲು ಸಂಪೂರ್ಣ ಆಹಾರ ನೀಡಿ, ಗ್ರಾಜ್ಯುವಿಟಿ ಅನುದಾನದ ಬಿಡುಗಡೆಗಾಗಿ ಒತ್ತಾಯಿಸಿ, 2018ರಿಂದ ಕೇಂದ್ರ ಸರ್ಕಾರದ ವೇತನ ಹೆಚ್ಚಿಸದ ಧೋರಣೆ ಖಂಡಿಸಿ ಮತ್ತು ಬಜೆಟ್‌ನಲ್ಲಿ ಅನುದಾನ ಹೆಚ್ಚಿಸಲು ಒತ್ತಾಯಿಸಿ ಕರ್ನಾಟಕ ರಾಜ್ಯ ಅಂಗನವಾಡಿ ನೌಕರರ ಸಂಘ(CITU) ವತಿಯಿಂದ ಯಾದಗಿರಿ ಜಿಲ್ಲಾಧಿಕಾರಿ ಕಚೇರಿ ಎದುರುಗಡೆ ಅಹೋರಾತ್ರಿ ಪ್ರತಿಭಟನಾ ಧರಣಿಯನ್ನು ಹಮ್ಮಿಕೊಳ್ಳಲಾಗಿದೆ.

ಜಿಲ್ಲಾ ಕೇಂದ್ರದಲ್ಲಿ ಸಿಐಟಿಯು ನೇತೃತ್ವದಲ್ಲಿ ನಡೆಯುತ್ತಿರುವ ಅಹೋರಾತ್ರಿ ಪ್ರತಿಭಟನಾ ಧರಣಿಗೆ ಕರ್ನಾಟಕ ಪ್ರಾಂತ ರೈತ ಸಂಘ ಪ್ರತಿಭಟನೆಗೆ ಬೆಂಬಲ ಸೂಚಿಸಿ ರೈತ ಮುಖಂಡ ಚನ್ನಪ್ಪ ಆನೇಗುಂದಿ ಪ್ರತಿಭಟನೆಯಲ್ಲಿ ಭಾಗವಹಿಸಿ ಮಾತನಾಡುತ್ತಿರುವಾಗ ಪೋಲಿಸ್ ಅಧಿಕಾರಿ (ಪಿಎಸ್ಐ) ಪ್ರತಿಭಟನಾನಿರತರೊಂದಿಗೆ ಅಮಾನವೀಯತೆಯಿಂದ ನಡೆದುಕೊಂಡು ಅವರನ್ನು ಮನಬಂದಂತೆ ಎಳೆದಾಡಿ ಪೋಲಿಸ್ ಜಿಪ್ ಕರೆದುಕೊಂಡು ಹೋಗಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕೂಲಿ ಕಾರ್ಮಿಕ ಸಂಘದ ಜಿಲ್ಲಾ ಮುಖಂಡ ಮಾತನಾಡಿ, “ಪ್ರತಿಭಟನಾನಿರತರೊಂದಿಗೆ ಪಿಎಸ್ಐ ಅಸಭ್ಯವಾಗಿ ವರ್ತಿಸಿ ರೈತ ಮುಖಂಡ ಚನ್ನಪ್ಪ ಆನೇಗುಂದಿ ಅವರನ್ನು ಎಳೆದುಕೊಂಡು ಪೋಲಿಸ್ ಜಿಪ್ ನಲ್ಲಿ ಕರೆದುಕೊಂಡು ಹೊಗಿರುವುದನ್ನು ಖಂಡನೀಯ” ಎಂದರು.

“ಪ್ರತಿಭಟನಾನಿರತರೊಂದಿಗೆ ಅಮಾನವೀಯತೆಯಿಂದ ನಡೆದುಕೊಂಡ ಯಾದಗಿರಿ ಪಿಎಸ್ಐ ಅವರ ಮೇಲೆ ಸೂಕ್ತ ಕ್ರಮ ಕೈಗೊಳ್ಳಬೇಕು. ಈ ಕೂಡಲೇ ಅವರನ್ನುಅಮಾನತು ಮಾಡಬೇಕು ಇಲ್ಲವಾದಲ್ಲಿ ಉಗ್ರವಾದ ಹೋರಾಟ ಮಾಡಬೇಕಾಗುತ್ತದೆ” ಎಂದು ಎಚ್ಚರಿಕೆ ನೀಡಿದರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...