ರಾಯಚೂರು | ಪೋಲಿಸರ ಕಿರುಕುಳ ಆರೋಪ; ಜಿಲ್ಲಾಸ್ಪತ್ರೆಯಲ್ಲಿ ವ್ಯಕ್ತಿ ಸಾವು

Date:

ಪೋಲಿಸರ ಕಿರುಕುಳ ಕಾರಣಕ್ಕೆ ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿ ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಮೃತಪಟ್ಟಿರುವ ಘಟನೆ ರಾಯಚೂರು ಜಿಲ್ಲಾಸ್ಪತ್ರೆಯಲ್ಲಿ ನಡೆದಿದೆ.

ಸುನಿಲ್ ಮೃತಪಟ್ಟಿರುವ ವ್ಯಕ್ತಿ ಎಂದು ಗುರುತಿಸಲಾಗಿದೆ. ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪದ ಮೇರೆಗೆ ಹಣ ನೀಡುವಂತೆ ಪೀಡಿಸುತ್ತಿದ್ದ ನೇತಾಜಿ ನಗರದ ಪೊಲೀಸ್ ಠಾಣೆಯ ಪೊಲೀಸರ ಕಿರುಕುಳ ತಾಳಲಾರದೇ ಸುನಿಲ್ ಡಿ.28 ರಂದು ಆತ್ಮಹತ್ಯೆಗೆ ಯತ್ನಿಸಿದ್ದ, ಬಳಿಕ ಆತನನ್ನು ಸ್ಥಳೀಯ ರಿಮ್ಸ್ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಇಂದು ಮೃತಪಟ್ಟಿದ್ದಾನೆ.

ಇದನ್ನು ಓದಿದ್ದೀರಾ? ಕಲಬುರಗಿ| ಸಾಲಬಾಧೆ : ವಿಷ ಸೇವಿಸಿ ಯುವ ರೈತ ಆತ್ಮಹತ್ಯೆ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸುನೀಲ್ ಸಾವಿಗೆ ಪೊಲೀಸರ ಕಿರುಕುಳವೇ ಕಾರಣ, ಆತ ಗಾಂಜಾ ಮಾರಾಟ ಮಾಡುತ್ತಿದ್ದಾನೆ ಎಂದು ಸುಳ್ಳು ಆರೋಪ ಹೊರೆಸಿ ಕಿರುಕುಳ ನೀಡಿದ್ದರಿಂದಲೇ ಆತ್ಮಹತ್ಯೆಗೆ ‌ಯತ್ನಿಸಿ‌ ಈಗ ಸಾವನ್ನಪ್ಪಿದ್ದಾನೆ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ. ಎಸ್‌ಪಿ‌ ಅವರು ಗಂಭೀರವಾಗಿ ಪರಿಗಣಿಸಿ ನಮಗೆ ನ್ಯಾಯ ಒದಗಿಸಬೇಕು ಎಂದು ಒತ್ತಾಯಿಸಿದ್ದಾರೆ.

ನೆನಪಿಡಿ: ಸಮಸ್ಯೆಗಳಿಗೆ ಆತ್ಮಹತ್ಯೆ ಪರಿಹಾರವಲ್ಲ… ಆತ್ಮಹತ್ಯೆಗಳ ಕುರಿತು ಚರ್ಚಿಸುವುದು ಕೂಡ ಕೆಲವರಿಗೆ ಪ್ರಚೋದನೆ ನೀಡಬಹುದು. ಸಮಸ್ಯೆಗಳ ಬಗ್ಗೆ ಆಪ್ತರೊಂದಿಗೆ ಹಂಚಿಕೊಳ್ಳುವುದರಿಂದ, ಸಮಾಲೋಚನೆ ನಡೆಸುವುದರಿಂದ ಆತ್ಮಸ್ಥೈರ್ಯ ಹೆಚ್ಚುತ್ತದೆ. ಆತ್ಮಹತ್ಯೆಗಳನ್ನು ತಡೆಯಬಹುದು. ತುರ್ತು ಪರಿಸ್ಥಿತಿಯಿದ್ದರೆ ಕರೆ ಮೂಲಕ ವೈದ್ಯರನ್ನು ಸಂಪರ್ಕಿಸಿ. ಬೆಂಗಳೂರು ಸಹಾಯವಾಣಿ 080-25497777, ನಿಮಾನ್ಸ್ ಸಹಾಯವಾಣಿ 080-46110007, ಆರೋಗ್ಯ ಸಹಾಯವಾಣಿ 104.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...