ಬೀದರ್‌ | ಕಾರಂಜಾ ಸಂತ್ರಸ್ತರ ಬೇಡಿಕೆ ಈಡೇರಿಸಲು ಬಲವಾದ ರಾಜಕೀಯ ಇಚ್ಛಾಶಕ್ತಿಯ ಅಗತ್ಯವಿದೆ : ಲಕ್ಷ್ಮಣ ದಸ್ತಿ

Date:

ಕಾರಂಜಾ ಸಂತ್ರಸ್ತರ ಬೇಡಿಕೆಯ ಬಗ್ಗೆ ಉಪ ಮುಖ್ಯಮಂತ್ರಿಗಳು ಭರವಸೆ ನೀಡಿರುವಂತೆ ಕಾಲಮಿತಿಯಲ್ಲಿ ಬೆಂಗಳೂರಿನಲ್ಲಿ ಸಭೆ ನಡೆಸಿ ದೀರ್ಘ ಕಾಲದಿಂದ ನಡೆದಿರುವ ನ್ಯಾಯಯುತವಾದ ಬೇಡಿಕೆ ಈಡೇರಿಸಲು ಬಲವಾದ ರಾಜಕೀಯ ಇಚ್ಛಾಶಕ್ತಿ ವ್ಯಕ್ತಪಡಿಸಬೇಕೆಂದು ಕಲ್ಯಾಣ ಕರ್ನಾಟಕದ ಹಿರಿಯ ಹೋರಾಟಗಾರ ಲಕ್ಷ್ಮಣ ದಸ್ತಿ ಸರ್ಕಾರಕ್ಕೆ ಒತ್ತಾಯಿಸಿದ್ದಾರೆ.

ಬೀದರ್‌ ನಗರದ ಪ್ರವಾಸಿ ಮಂದಿರದಲ್ಲಿ ಕಾರಂಜಾ ಸಂತ್ರಸ್ತರೊಂದಿಗೆ ನಡೆದ ಮಹತ್ವದ ಸಭೆಯಲ್ಲಿ ಮಾತನಾಡಿದ ಅವರು, “ಬೆಳಗಾವಿ ಅಧಿವೇಶನದ ವೇಳೆ ಕಾರಂಜಾ ಸಂತ್ರಸ್ತರಿಗೆ ಸಮರ್ಪಕ ಪರಿಹಾರ ನೀಡುವ ಬಗ್ಗೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ಅವರ ಅಧ್ಯಕ್ಷತೆಯಲ್ಲಿ ಬೀದರ ಜಿಲ್ಲೆಯ ಸಚಿವರು ಶಾಸಕರು ಮತ್ತು ಸಂತ್ರಸ್ತರ ಮುಖಂಡರ ಉಪಸ್ಥಿತಿಯಲ್ಲಿ ಸಭೆ ನಡೆಸಿ ಕಾರಂಜಾ ಸಂತ್ರಸ್ತರಿಗೆ ಸಮರ್ಪಕ ವೈಜ್ಞಾನಿಕ ಮಾನದಂಡದ ಆದರದ ಮೇಲೆ ಪರಿಹಾರ ನೀಡುವ ಬಗ್ಗೆ ಬೆಂಗಳೂರಿನಲ್ಲಿ ಸಭೆ ನಡೆಸಿ ಬೇಡಿಕೆ ಬಗ್ಗೆ ಅಂತಿಮ ತೀರ್ಮಾನ ಕೈಗೊಳ್ಳಬೇಕು” ಎಂದು ಒತ್ತಾಯಿಸಿದರು.

“ಸಭೆಯಲ್ಲಿ ಭರವಸೆ ನೀಡಿದಂತೆ ಸಂತ್ರಸ್ತರ ಬೇಡಿಕೆ ಈಡೇರಿಕೆಗೆ ಉಪ ಮುಖ್ಯಮಂತ್ರಿಗಳು ಮುಂದಾಗಬೇಕು. ಇದಕ್ಕೆ ಜಿಲ್ಲಾ ಉ‌ಸ್ತುವಾರಿ ಸಚಿವ ಈಶ್ವರ ಖಂಡ್ರೆ ಹಾಗೂ ಸಚಿವ ರಹೀಂ ಖಾನ್ ಸೇರಿದಂತೆ ಜಿಲ್ಲೆಯ ಜನಪ್ರತಿನಿಧಿಗಳು ವಿಶೇಷ ರಾಜಕೀಯ ಇಚ್ಛಾಶಕ್ತಿ ಪ್ರದರ್ಶಿಸಿ ಸಮಾರೋಪಾದಿಯ ಕ್ರಮಕೈಗೊಳ್ಳಲು ಮುಂದಾಗಬೇಕು” ಎಂದು ಆಗ್ರಹಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಹಿಂದಿನ ಸಭೆಯಲ್ಲಿ ನಿರ್ಣಯ ಕೈಗೊಂಡಂತೆ ಬೆಂಗಳೂರಲ್ಲಿ ಸಭೆ ನಡೆಸಲು ಕಾರಂಜಾ ಮುಳುಗಡೆ ಸಂತ್ರಸ್ತರ ಸಮಿತಿಯ ನಡೆ ಜಿಲ್ಲೆಯ ಸಚಿವರು, ಶಾಸಕರಗಳ ಮನೆ ಕಡೆ ಅಭಿಯಾನ ಕಾಲಮಿತಿಯಲ್ಲಿ ಆರಂಭಿಸಲಾಗುವುದು” ಎಂದು ಸಂತ್ರಸ್ತರ ಹಿತರಕ್ಷಣಾ ಸಮಿತಿ ಅಧ್ಯಕ್ಷ ಚಂದ್ರಶೇಖರ ಪಾಟೀಲ ಹುಚಕನಳ್ಳಿ ತಿಳಿಸಿದರು.

ಈ ಸುದ್ದಿ ಓದಿದ್ದೀರಾ?  ಈ ದಿನ ಸಂಪಾದಕೀಯ | ಬಾಲ ಗರ್ಭಿಣಿಯರ ಸಂಖ್ಯೆ ಹೆಚ್ಚಳ; ಜಿಲ್ಲಾ ಮಕ್ಕಳ ರಕ್ಷಣಾ ಘಟಕಗಳು ಏನು ಮಾಡುತ್ತಿವೆ?

ಸಭೆಯಲ್ಲಿ ಉಚ್ಚ ನ್ಯಾಯಾಲಯದ ನ್ಯಾಯವಾದಿ ಎಸ್.ಜಿ.ಮಠ ಸೇರಿದಂತೆ ಸಮಿತಿಯ ಪ್ರಮುಖರಾದ ನಾಗರಾಜ್ ಕರ್ಪೂರ, ಚಂದ್ರಶೇಖರ ವಡ್ಡೆ, ಸುಧಾಕರ, ಬಸವರಾಜ ಹಿಂದಾ, ರಾಜಪ್ಪಾ ಕೋಸಂ, ಈರಯ್ಯಾ ಸ್ವಾಮಿ, ಮಡೆಪ್ಪಾ, ರಾಮರೆಡ್ಡಿ ಪಾಟೀಲ ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಔರಾದ್‌ | ಅಪ್ಪಟ ದೇಶಪ್ರೇಮಿ ಶಾಹೀದ್ ಭಗತ್ ಸಿಂಗ್

ಭಾರತದ ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ನಿದ್ದೆಗೆಡಿಸಿದ ಸಿಂಹಾಳಿಯಂತೆ ಗರ್ಜಿಸಿ ಭಾರತದ ಹಿರಿಮೆ ಗರಿಮೆಯನ್ನು...

ಬೀದರ್‌ | ಕಾರಂಜಾ ಸಂತ್ರಸ್ತರಿಗೆ ಕಾಲಮಿತಿಯಲ್ಲಿ ವಿಶೇಷ ಪ್ಯಾಕೇಜ್ ಘೋಷಿಸಿ

ಕಾರಂಜಾ ಸಂತ್ರಸ್ತರ ಸಮಸ್ಯೆ ಕುರಿತು ದಶಕಗಳಿಂದ ಹೋರಾಟ ನಡೆಯುತ್ತಿದ್ದು, ಸರ್ಕಾರಕ್ಕೂ ಈ...

ಬೀದರ್‌ನಲ್ಲಿ ಮಾ.25ರಂದು ಉದ್ಯೋಗ ಮೇಳ

ಬೀದರ್ ನಗರದ ನೌಬಾದ್‍ನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿಲ್ಲಾ ಉದ್ಯೋಗ...

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...