ಚಿಕ್ಕಬಳ್ಳಾಪುರ | ಅಂಗನವಾಡಿ ಕೇಂದ್ರಗಳಿಗೆ ಕಳಪೆ ಮೊಟ್ಟೆ ವಿತರಣೆ; ತನಿಖೆಗೆ ನ್ಯಾ. ಕೆ ಎನ್‌ ಫಣೀಂದ್ರ ಭರವಸೆ

Date:

  • ಕಳಪೆ ಮೊಟ್ಟೆ ಕುರಿತು ಉಪಲೋಕಾಯುಕ್ತರ ಗಮನ ಸೆಳೆದ ಉಪನ್ಯಾಸಕ ಎನ್ ಚಂದ್ರಶೇಖರ್
  • ಸ್ವಯಂಪ್ರೇರಿತ ದೂರು ದಾಖಲಿಸಿ, ಸೂಕ್ತ ಕ್ರಮ ಜರುಗಿಸುವುದಾಗಿ ನ್ಯಾ. ಕೆ ಎನ್ ಫಣೀಂದ್ರ ಭರವಸೆ

ಚಿಕ್ಕಬಳ್ಳಾಪುರ ಜಿಲ್ಲೆಯ ಅಂಗನವಾಡಿ ಕೇಂದ್ರಗಳಿಗೆ ಗುತ್ತಿಗೆದಾರರು ಕಳಪೆ ಮೊಟ್ಟೆಗಳನ್ನು ಪೂರೈಸುತ್ತಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಈ ಬಗ್ಗೆ ಸ್ವಯಂ ಪ್ರೇರಿತ ದೂರು ದಾಖಲಿಸಿ, ತನಿಖೆ ನಡೆಸಲಾಗುವುದು ಎಂದು ಉಪಲೋಕಾಯುಕ್ತ ನ್ಯಾಯಮೂರ್ತಿ ಕೆ.ಎನ್ ಫಣೀಂದ್ರ ಭರವಸೆ ನೀಡಿದ್ದಾರೆ.

ಉಪನ್ಯಾಸಕ ಎನ್ ಚಂದ್ರಶೇಖರ್ ಅವರು ಕಳಪೆ ಮೊಟ್ಟೆ ವಿಷಯ ಕುರಿತು ಉಪಲೋಕಾಯುಕ್ತರ ಗಮನಕ್ಕೆ ತಂದಿದ್ದಾರೆ. ಇದಕ್ಕೆ ಪ್ರತಿಕ್ರಿಯಿಸಿರುವ ಉಪಲೋಕಾಯುಕ್ತರು, “ಈ ಕುರಿತು ಸ್ವಯಂಪ್ರೇರಿತವಾಗಿ ದೂರು ದಾಖಲಿಸಿ ತನಿಖೆ ನಡೆಸಲಾಗುವುದು. ಸಂಬಂಧಪಟ್ಟವರ ಮೇಲೆ ಸೂಕ್ತ ಕ್ರಮ ಜರುಗಿಸಲಾಗುವುದು” ಎಂದು ಹೇಳಿದ್ದಾರೆ.

“ಚಿಕ್ಕಬಳ್ಳಾಪುರ ಜಿಲ್ಲೆಯ ಅಂಗನವಾಡಿಗಳಿಗೆ ಕೊಳೆತ ಮೊಟ್ಟೆಗಳು ಸರಬರಾಜಾಗುತ್ತಿವೆ ಎಂಬ ಗಂಭೀರ ಆರೋಪಗಳು ಕೇಳಿ ಬಂದಿವೆ. ಮುಗ್ದ, ಅಮಾಯಕ ಮಕ್ಕಳ ಆರೋಗ್ಯ ಮತ್ತು ಪ್ರಾಣದ ಬಗ್ಗೆ ಗಮನಿಸಬೇಕಾಗಿರುವುದು ಅನಿವಾರ್ಯವಾಗಿದೆ. ಯಾರ ಮಕ್ಕಳಾದರೇನು? ಮಕ್ಕಳು ಮಕ್ಕಳೇ ಅಲ್ಲವೇ? ಇದು ಸಂಬಂಧಪಟ್ಟವರ ಗಮನಕ್ಕೆ ಈವರೆಗೆ ಬಂದೇ ಇಲ್ಲವೇ” ಎಂದು ಚಂದ್ರಶೇಖರ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ. 

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...