ಕೆ ಆರ್ ಪೇಟೆ | ಪಡಿತರದಾರರಿಗೆ ಕಳಪೆ ರಾಗಿ ವಿತರಣೆ; ರೈತ ಸಂಘದಿಂದ ಎಜೆನ್ಸಿ, ಅಧಿಕಾರಿಗಳ ಮೇಲೆ ಕ್ರಮಕ್ಕೆ ಒತ್ತಾಯ

Date:

ಮಂಡ್ಯ ಜಿಲ್ಲೆ, ಕೃಷ್ಣರಾಜಪೇಟೆ ತಾಲ್ಲೂಕಿನಲ್ಲಿ ಪಡಿತರದಾರರಿಗೆ ಕಳಪೆ ಗುಣಮಟ್ಟದ ರಾಗಿ ವಿತರಿಸುತ್ತಿರುವುದರ ವಿರುದ್ಧ ಕರ್ನಾಟಕ ರಾಜ್ಯ ರೈತ ಸಂಘದ ಕಾರ್ಯಕರ್ತರು ತಾಲೂಕು ಆಡಳಿತ ಸೌಧದ ಆವರಣದಲ್ಲಿರುವ ಆಹಾರ ಇಲಾಖೆಯ ಕಾರ್ಯಾಲಯದ ಮುಂದೆ ಪ್ರತಿಭಟನೆ ಮಾಡಿದರು.

ತಾಲ್ಲೂಕಿನಾದ್ಯಂತ 99 ನ್ಯಾಯಬೆಲೆ ಅಂಗಡಿಗಳಿದ್ದು, ಲಕ್ಷಾಂತರ ಪಡಿತರದಾರರಿಗೆ ತಿನ್ನಲು ಯೋಗ್ಯವಲ್ಲದ ಸಾವಿರಾರು ಕ್ವಿಂಟಾಲ್ ಕಳಪೆ ರಾಗಿ ವಿತರಿಸಲಾಗಿದೆ. ಪೂರೈಕೆಯಾಗಿರುವ ರಾಗಿಯಲ್ಲಿ ಕಲ್ಲು, ಮಣ್ಣು ಮತ್ತು ಧೂಳು ತುಂಬಿದ್ದು ಜಾನುವಾರುಗಳು ತಿನ್ನಲೂ ಯೋಗ್ಯವಾಗಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ತಾಲ್ಲೂಕು ರೈತಸಂಘದ ಅಧ್ಯಕ್ಷ ಕಾರಿಗನಹಳ್ಳಿ ಪುಟ್ಟೇಗೌಡ ಮಾತನಾಡಿ, “ಪಡಿತರದಾರರಿಗೆ ತಿನ್ನಲು ಯೋಗ್ಯವಲ್ಲದ ಕಳಪೆ ರಾಗಿ ಪೂರೈಕೆ ಮಾಡಿದ್ದಾರೆ. ಜನ ಬಳಕೆಗೆ ಯೋಗ್ಯವಲ್ಲದ ರಾಗಿಯನ್ನು ಆಹಾರ ಇಲಾಖೆ ಖರೀದಿಸಿದ್ದಾದರೂ ಏಕೆ?, ಕಳಪೆ ರಾಗಿ ಏಜೆನ್ಸಿಯಿಂದ ಪೂರೈಕೆಯಾಗಿದೆಯಾ?, ಆಥವಾ ಇಲಾಖೆಗೆ ಹಸ್ತಾಂತರವಾದ ನಂತರ ಅದಕ್ಕೆ ಕಲ್ಲು ಮಣ್ಣು ಬೆರಸಲಾಗಿದೆಯಾ? ಎನ್ನುವುದರ ತನಿಖೆಯಾಗಬೇಕು. ಕಳಪೆ ರಾಗಿ ವಿತರಣೆಯನ್ನು ತಕ್ಷಣವೇ ನಿಲ್ಲಿಸಬೇಕು” ಎಂದು ಆಗ್ರಹಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕಳಪೆ ರಾಗಿ ಪೂರೈಕೆಯ ಹಿನ್ನೆಲೆಯಲ್ಲಿ ರೈತರೊಂದಿಗೆ ಚರ್ಚಿಸುವುದಾಗಿ ಆಹಾರ ಇಲಾಖೆಯ ಅಧಿಕಾರಿಗಳು ರೈತಸಂಘಕ್ಕೆ ತಿಳಿಸಿದ್ದರು. ಆದರೆ, ಇಲಾಖೆಯ ಯಾವುದೇ ಅಧಿಕಾರಿ ಕಚೇರಿಗೆ ಬಂದು ಕಳಪೆ ರಾಗಿ ಪೂರೈಕೆಯ ಬಗ್ಗೆ ರೈತರ ದೂರು ಸ್ವೀಕರಿಸಿ ಪರಿಶೀಲನೆಗೆ ಮುಂದೆ ಬಂದಿಲ್ಲ. ಇಲಾಖೆಯ ಉನ್ನತ ಅಧಿಕಾರಿಗಳು ಸ್ಥಳಕ್ಕೆ ಬಂದು ತಪ್ಪಿತಸ್ಥರ ವಿರುದ್ಧ ಕ್ರಮದ ಭರವಸೆ ನೀಡುವವರೆಗೆ ಸ್ಥಳದಿಂದ ಕದುಲುವುದಿಲ್ಲ ಎಂದು ಕಚೇರಿಯ ಒಳಗಿದ್ದ ಸಿಬ್ಬಂದಿಗೆ ದಿಗ್ಬಂಧನ ಹಾಕಿ ಧರಣಿ ಆರಂಭಿಸಿದರು

ಸ್ಥಳದಲ್ಲಿದ್ದ ಆಹಾರ ಇಲಾಖೆಯ ನಿರೀಕ್ಷಕ ಎಂ. ನಟರಾಜು ಮಾತನಾಡಿ, ಇದುವರೆಗೂ ಯಾವುದೇ ರೀತಿಯ ದೂರು ಬರದಂತೆ ಇಲಾಖೆ ಗುಣಮಟ್ಟದ ಪಡಿತರ ವಿತರಣೆ ಮಾಡಿದೆ. ಡಿಸಂಬರ್ ತಿಂಗಳಿನಲ್ಲಿ ಹಾಸನದ ಜಾವಗಲ್ ಗೋದಾಮಿನಿಂದ ನಮಗೆ ಪೂರೈಕೆಯಾಗಿರುವ ರಾಗಿ ಕಳಪೆ ಗುಣಮಟ್ಟದಿಂದ ಕೂಡಿದೆ ಎನ್ನುವುದು ನಮ್ಮ ಅರಿವಿಗೆ ಬಂದಿದೆ. ಜನವರಿ 19ರ ಸೋಮುವಾರ ಇಲಾಖೆಯ ಉನ್ನತ ಅಧಿಕಾರಿಗಳು ಪಟ್ಟಣಕ್ಕೆ ಆಗಮಿಸಿ ರೈತರ ದೂರು ಪರಿಶೀಲನೆ ಮಾಡಿ ಮುಂದಿನ ಕ್ರಮ ವಹಿಸಲಿದ್ದಾರೆ. ಅಲ್ಲಿಯವರೆಗೆ ರೈತರು ಪ್ರತಿಭಟನೆ ಕೈಬಿಟ್ಟು ಸಹಕರಿಸುವಂತೆ ಕೋರಿದರು. ಪಟ್ಟಣ ಪೊಲೀಸ್ ನಿರೀಕ್ಷಕರಾದ ಸುಮಾರಾಣಿ ನೇತೃತ್ವದಲ್ಲಿ ಸಂಧಾನ ಸಭೆ ನಡೆದು ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಜನವರಿ 19ರ ಗಡುವು ನೀಡಿದರಿಂದ ಪ್ರತಿಭಟನೆ ಹಿಂಪಡೆದರು.

ಈ ಸುದ್ದಿ ಓದಿದ್ದೀರಾ? ಮೈಸೂರು | ಮೆಲ್ಲಹಳ್ಳಿ ಸರ್ಕಾರಿ ಶಾಲೆಯಲ್ಲಿ ‘ಮಕ್ಕಳ ಸಂತೆ’

ಪ್ರತಿಭಟನೆಯಲ್ಲಿ ಜಿಲ್ಲಾ ರೈತ ಸಂಘದ ಮಾಜಿ ಅಧ್ಯಕ್ಷ ಎಂ.ವಿ. ರಾಜೇಗೌಡ, ಜಿಲ್ಲಾ ರೈತಸಂಘದ ಉಪಾಧ್ಯಕ್ಷ ಮರುವನಹಳ್ಳಿ ಶಂಕರ್, ರೈತ ಮುಖಂಡರಾದ ಎಲ್.ಬಿ. ಜಗದೀಶ್, ಮುದ್ದುಕುಮಾರ್, ಮಡುವಿನಕೋಡಿ ಪ್ರಕಾಶ್, ಕರೋಟಿ ತಮ್ಮಯ್ಯ, ಮರಡಹಳ್ಳಿ ರಾಮೇಗೌಡ, ನೀತಿಮಂಗಲ ಮಹೇಶ್, ಚೇತನ್ ಸೇರಿದಂತೆ ಇನ್ನಿತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...