ಕಾಂಗ್ರೆಸ್ ಸರ್ಕಾರದ ಜನಪ್ರಿಯತೆ ಬಹಳ ದಿನ ಉಳಿಯಲ್ಲ: ಮಾಜಿ ಸಿಎಂ ಬೊಮ್ಮಾಯಿ‌

Date:

  • ನೀರು ಕೊಡದ ಸರ್ಕಾರದಿಂದ ಏನು ಪ್ರಯೋಜನ?
  • ಅಕ್ಕಿ ಕೊಡದೆ ಹೋದರೆ, ನಾವು ಪ್ರತಿಭಟಿಸುತ್ತೇವೆ

ಕಾಂಗ್ರೆಸ್ ಸರ್ಕಾರದ ಜನಪ್ರಿಯತೆ ಬಹಳ ದಿನ ಉಳಿಯುವುದಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ‌ ಹೇಳಿದರು.

ಹುಬ್ಬಳ್ಳಿಯ ಛಬ್ಬಿ ಗ್ರಾಮದಲ್ಲಿ ಭಾನುವಾರ ನೂತನ ಪ್ರೌಡ ಶಾಲೆ ಕಟ್ಟಡದ ಭೂಮಿ ಪೂಜೆ ನೇರವೇರಿಸಿದ ಬಳಿಕ ಮಾಧ್ಯಮದವರೊಂದಿಗೆ ಅವರು ಮಾತನಾಡಿದರು.

“ಅಕ್ಕಿ ವಿಷಯವಾಗಿ ಕಾಂಗ್ರೆಸ್ ಸರ್ಕಾರ ಪರ್ಯಾಯ ವ್ಯವಸ್ಥೆ ಮಾಡಬೇಕಿತ್ತು. ಇದೀಗ ಅಕ್ಕಿ ಬರಲ್ಲ ಅಂತ ಕುಂಟು ನೆಪ ಹೇಳುತ್ತಿದ್ದಾರೆ. ಇದು ಕಾಂಗ್ರೆಸ್ ಗ್ಯಾರಂಟಿಯಿಂದ ಹಿಂದೆ ಹೋದಂತೆ ಅರ್ಥ. ಇದೀಗ ಛತ್ತೀಸಗಡದಿಂದ ಅಕ್ಕಿ ತರುತ್ತೇವೆ ಎನ್ನುತ್ತಿದ್ದಾರೆ. ನಮಗೆ ಬಡ ಜನರಿಗೆ ಒಳ್ಳೆಯದಾದರೆ ಸಾಕು” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಅಕ್ಕಿಯನ್ನು ಎಲ್ಲಿಂದ ತೆಗೆದುಕೊಳ್ಳಬೇಕು, ಹೇಗೆ ತೆಗೆದುಕೊಳ್ಳಬೇಕು ಎನ್ನುವ ಪ್ರಶ್ನೆ ಇದೆ. ರಾಜ್ಯದ ರೈತರು ಅಕ್ಕಿ ಕೊಡುವುದಕ್ಕೆ ಮುಂದೆ ಬಂದರೆ ಅದನ್ನು ಖರೀದಿ ಮಾಡಬೇಕು. ಬಿಜೆಪಿಯವರೇ ಕೊಡಸಿ ಎನ್ನುವುದು ಸರಿಯಲ್ಲ. ಒಂದು ವೇಳೆ ಒಂದನೇ ತಾರೀಖಿಗೆ ಅಕ್ಕಿ ಕೊಡದೆ ಹೋದರೆ, ನಾವು ಪ್ರತಿಭಟನೆ ಮಾಡುತ್ತೇವೆ” ಎಂದು ಎಚ್ಚರಿಸಿದರು.

ಈ ಸುದ್ದಿ ಓದಿದ್ದೀರಾ? ಅಕ್ಕಿ ವಿತರಣೆ ರಾಜ್ಯ ಸರ್ಕಾರದ ಜವಾಬ್ದಾರಿ; ಕೇಂದ್ರ ಸರ್ಕಾರವನ್ನು ದೂರುವುದು ಸರಿಯಲ್ಲ: ಬಿಎಸ್‌ವೈ

“ಎಲ್ಲಕ್ಕಿಂತ ಮುಖ್ಯವಾಗಿ ಕಳೆದ ವಾರ ನಾನು ಮುಖ್ಯಮಂತ್ರಿ ಅವರ ಗಮನಕ್ಕೆ ತಂದಿದ್ದೇನೆ. ರಾಜ್ಯದಲ್ಲಿ ಬರಗಾಲ ಇದೆ. 500 ಹಳ್ಳಿಗೆ ಕುಡಿಯುವ ನೀರಿನ ಸಮಸ್ಯೆ ಇದೆ. ಸರ್ಕಾರ ಇದನ್ನು ಗಂಬೀರವಾಗಿ ಪರಿಗಣಿಸುತ್ತಿಲ್ಲ. ಕೇವಲ ವಿಡಿಯೋ ಕಾನ್ಫರೆನ್ಸ್ ಮಾಡಿ ಸುಮ್ಮನಾಗಿದೆ. ಬರಗಾಲ ಇದ್ದ ಕಡೆ ಟಾಸ್ಕಪೋರ್ಸ್ ರಚನೆ ಮಾಡಬೇಕು” ಎಂದು ಆಗ್ರಹಿಸಿದರು.

“ಗ್ಯಾರಂಟಿ ಭ್ರಮೆ ಹುಟ್ಟಿಸಿದ್ದು ನೋಡಿದರೆ, ಸರ್ಕಾರದ ಜನ ಪ್ರೀಯತೆ ಬಹಳ ದಿನ ಉಳಿಯಲ್ಲ. ನೀರು ಕೊಡದ ಸರಕಾರ ತಗೆದುಕೊಂಡು ಏನು ಮಾಡಬೇಕು” ಎಂದು ಪ್ರಶ್ನಿಸಿದರು. ಇದೇ ವೇಳೆ “ಅಧಿವೇಶನಕ್ಕೂ ಮುಂಚೆ ವಿಪಕ್ಷ ನಾಯಕನ ಆಯ್ಕೆ ಆಗುತ್ತದೆ” ಎಂದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...