ರಾಯಚೂರು | ಶಾಖೋತ್ಪನ್ನ ಕೇಂದ್ರದಲ್ಲಿ ವಿದ್ಯುತ್‌ ಅವಘಡ; ಕಾರ್ಮಿಕ ಸಾವು

Date:

ರಾಯಚೂರು ಶಾಖೋತ್ಪನ್ನ ಕೇಂದ್ರದ ವಿದ್ಯುತ್ ಸ್ಥಾವರದ 4ನೇ ಘಟಕದಲ್ಲಿ ವಿದ್ಯುತ್ ಸ್ಪರ್ಶದಿಂದ ಕಾರ್ಮಿಕರೊಬ್ಬರು ಮೃತಪಟ್ಟ ಘಟನೆ ರಾಯಚೂರು ತಾಲೂಕಿನ ಶಕ್ತಿನಗರದಲ್ಲಿ ನಡೆದಿದೆ.

ಯಾದಗಿರಿ ನಗರದ ನಿವಾಸಿ ನಿಂಗಪ್ಪ(45) ಎಂಬುವರು ವಿದ್ಯುತ್‌ ಸ್ಪರ್ಶಕ್ಕೆ ಬಲಿಯಾದ ದುರ್ದೈವಿ, ಮೃತ ಕಾರ್ಮಿಕರು ಆರ್‌ಟಿಪಿಎಸ್ 4ನೇ ಘಟಕದಲ್ಲಿ ಇಎಸ್‌ಪಿಸಿ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದರು. ಕೆಲಸದ ವೇಳೆ ವಿದ್ಯುತ್ ಸ್ಪರ್ಶವಾಗಿ ಕಾರ್ಮಿಕ ಸ್ಥಳದಲ್ಲಿಯೇ ಮೃತಪಟ್ಟಿದ್ದಾನೆ ಎಂದು ತಿಳಿದುಬಂದಿದೆ.

ಹಲವು ಬಾರಿ ಈ ರೀತಿಯಾದ ಘಟನೆಗಳು ನಡೆಯುತ್ತಿದ್ದರೂ ಆಡಳಿತ ಮಂಡಳಿ ಕಾರ್ಮಿಕರಿಗೆ ಸೇವಾ ಭದ್ರತೆ ನೀಡದೆ ಸತಾಯಿಸುತ್ತಿದೆ ಎಂದು ಆರ್‌ಟಿಪಿಎಸ್ ಆಡಳಿತ ಮಂಡಳಿಯ ವಿರುದ್ಧ ಕಾರ್ಮಿಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಆರ್‌ಟಿಪಿಎಸ್ ಘಟಕದ ಎದುರು ದಿಢೀರನೆ ಪ್ರತಿಭಟನೆ ನಡೆಸಿ ಕಾರ್ಮಿಕರಿಗೆ ಸೂಕ್ತ ಭದ್ರತೆ, ಮೃತ ಕಾರ್ಮಿಕ ಕುಟುಂಬಕ್ಕೆ ಸೂಕ್ತ ಪರಿಹಾರ ಒದಗಿಸುವಂತೆ ಆಗ್ರಹಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...