ಬೀದರ್ | ಎಸ್ಪಿ ಚನ್ನಬಸವಣ್ಣ ಎಸ್.ಎಲ್. ವರ್ಗಾವಣೆ : ಪ್ರದೀಪ ಗುಂಟಿ ನೂತನ ಎಸ್ಪಿ

Date:

ಬೀದರ್ ಜಿಲ್ಲಾ ನೂತನ ಪೊಲೀಸ್‌ ವರಿಷ್ಠಾಧಿಕಾರಿಯನ್ನಾಗಿ ಪ್ರದೀಪ ಗುಂಟಿ ಅವರನ್ನು ನೇಮಿಸಿ ಮಂಗಳವಾರ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಈ ಮೊದಲಿನ ಎಸ್ಪಿ ಚನ್ನಬಸವಣ್ಣ ಎಸ್‌.ಎಲ್. ಅವರನ್ನು ಬೆಂಗಳೂರು ಪ್ರಧಾನ ಕಚೇರಿ ಆಡಳಿತ ವಿಭಾಗಕ್ಕೆ ವರ್ಗಾವಣೆ ಮಾಡಲಾಗಿದೆ. ಬೆಂಗಳೂರಿನ ಕಾರಾಗೃಹ ವಿಭಾಗದಲ್ಲಿದ್ದ ಪ್ರದೀಪ ಗುಂಟಿ ಅವರನ್ನು ಬೀದರ್‌ ಎಸ್ಪಿಯಾಗಿ ನೇಮಿಸಲಾಗಿದೆ.

ಬುಧವಾರ ನೂತನ ಎಸ್ಪಿ ಪ್ರದೀಪ ಗುಂಟಿ ಅವರಿಗೆ ಅಧಿಕಾರ ಹಸ್ತಾಂತರಿಸಿದ ಫೋಟೊವನ್ನು ಬೀದರ್‌ ಎಸ್ಪಿ ಅಧಿಕೃತ ಫೇಸ್ಬುಕ್‌ ಖಾತೆಯಲ್ಲಿ ಹಂಚಿಕೊಂಡಿರುವ ಚನ್ನಬಸವಣ್ಣ ಎಸ್‌.ಎಲ್. ಅವರು ʼಸರ್ಕಾರದಿಂದ ನನಗೆ ವರ್ಗಾವಣೆಯಾಗಿರುವ ಅಧಿಕೃತ ಆದೇಶ ಬಂದಿದೆ, ಕಳೆದ 1 ವರ್ಷ 5 ತಿಂಗಳು ನನ್ನ ಎಲ್ಲ ಸಹೋದ್ಯೋಗಿಗಳೊಂದಿಗೆ ತಮ್ಮ ಸೇವೆ ಮಾಡುವ ಸೌಭಾಗ್ಯ ದೊರೆತದ್ದು ನನ್ನ ವೃತ್ತಿ ಮತ್ತು ವೈಯಕ್ತಿಕ ಬದುಕಿನ ಅವಿಸ್ಮರಣೀಯ ಕ್ಷಣಗಳೆಂದು ಭಾವಿಸಿಕೊಂಡಿದ್ದೇನೆ. ಬೀದರ್ ಭಾರತದಲ್ಲಿ ಇರುವುದಷ್ಟೇ ಅಲ್ಲದೆ ಇಡೀ ಭಾರತವೇ ಬೀದರ್‌ನಲ್ಲಿದೆ ಎನ್ನುವುದು ಸೇವಾ ಅವಧಿಯಲ್ಲಿ ನನ್ನ ಅನುಭವಕ್ಕೆ ಬಂದಿದೆ. ಈ ಭ್ರಾತೃತ್ವ ಹೀಗೆ ಮುಂದುವರೆಯಲಿʼ ಎಂದು ಹಾರೈಸಿ ಜಿಲ್ಲೆಯ ಜನತೆಗೆ ಧನ್ಯವಾದ ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ವರ್ಗಾವಣೆ ಆದೇಶ ರದ್ದತಿಗೆ ಆಗ್ರಹ :

ಒಂದುವರೆ ವರ್ಷಗಳ ಅವಧಿಯಲ್ಲಿ ಎಸ್ಪಿಯಾಗಿದ್ದ ಚನ್ನಬಸವಣ್ಣ ಎಸ್. ಎಲ್‌ ಅವರು ಜಿಲ್ಲೆ ಸಮಗ್ರ ಅಪರಾಧ ಮುಕ್ತ ಮಾಡುವ ನಿಟ್ಟಿನಲ್ಲಿ ಇಲಾಖೆಯಲ್ಲಿ ಹತ್ತಾರು ಹೊಸ ಯೋಜನೆಗಳನ್ನು ರೂಪಿಸಿ ಮಹತ್ವದ ಕ್ರಮಗಳನ್ನು ಕೈಗೊಂಡಿದ್ದಾರೆ. ಇಂಥ ದಕ್ಷ ಹಾಗೂ ಪ್ರಾಮಾಣಿಕ ಪೊಲೀಸ್‌ ಅಧಿಕಾರಿಯನ್ನು ಜಿಲ್ಲೆಯಿಂದ ವರ್ಗಾವಣೆ ಮಾಡಿರುವುದು ಬೇಸರ ಮೂಡಿಸಿದೆ. ಕೂಡಲೇ ವರ್ಗಾವಣೆ ಆದೇಶ ರದ್ದುಗೊಳಿಸುವಂತೆ ಜಿಲ್ಲೆಯ ಪ್ರಜ್ಞಾವಂತ ನಾಗರಿಕರು ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್‌ ಹಂಚಿಕೊಂಡು ಆಗ್ರಹಿಸುತ್ತಿದ್ದಾರೆ.

ಮಂಗಳವಾರ ವರ್ಗಾವಣೆ ಆದೇಶ ಬಂದ ಬಳಿಕ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಹಂಚಿಕೊಂಡಿರುವ ಅನೇಕ ಸಾಮಾಜಿಕ ಹೋರಾಟಗಾರರು, ಪ್ರಜ್ಞಾವಂತರು ವರ್ಗಾವಣೆ ರದ್ದುಗೊಳಿಸಲು ಒತ್ತಾಯಿಸಿದ್ದಾರೆ.

ಸಾಮಾಜಿಕ ಕಾರ್ಯಕರ್ತ ವಿನಯ ಮಾಳಗೆ ಅವರು ಫೇಸ್‌ಬುಕ್ ಖಾತೆಯಲ್ಲಿ ʼನಿಮ್ಮ ವರ್ಗಾವಣೆ ಸುದ್ದಿ ಜಿಲ್ಲೆಯ ಪ್ರಜ್ಞಾವಂತರ ಪಾಲಿಗೆ ಇದು ನಿರಾಶೆಯ ಭಾವನೆ ಉಂಟು ಮಾಡಿದೆ. ಜಿಲ್ಲೆಯ ಕಾನೂನು ಸುವ್ಯವಸ್ಥೆ ವಿಭಾಗದಲ್ಲಿ ಬದಲಾವಣೆ ಬೀಸುತ್ತಿರುವ ಸಮಯದಲ್ಲಿ ಈ ವರ್ಗಾವಣೆ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಮತ್ತು ಅಪರಾಧ ಮುಕ್ತ ಮಾಡುವ ಜಿಲ್ಲೆಯ ಗುರಿಯನ್ನು ಕುಸಿತಗೊಳಿಸುತ್ತದೆ. ನಿಮ್ಮ ಆಡಳಿತ ಕಾಲಾವಧಿಯಲ್ಲಿ ಅಕ್ರಮ ದಂಧೆಗಳು ಬಹುತೇಕ ಹತೋಟಿಗೆ ಬಂದಿತು, ಆದರೆ ನಿಮ್ಮ ವರ್ಗಾವಣೆಯಿಂದ  ಅಕ್ರಮ ದಂಧೆಕೋರರಿಗೆ ಮತ್ತೆ ಖುಷಿಪಡುವಂತಾಗಿದೆʼ ಎಂದು ಹೇಳಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಔರಾದ್‌ | ಅಪ್ಪಟ ದೇಶಪ್ರೇಮಿ ಶಾಹೀದ್ ಭಗತ್ ಸಿಂಗ್

ಭಾರತದ ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ನಿದ್ದೆಗೆಡಿಸಿದ ಸಿಂಹಾಳಿಯಂತೆ ಗರ್ಜಿಸಿ ಭಾರತದ ಹಿರಿಮೆ ಗರಿಮೆಯನ್ನು...

ಬೀದರ್‌ | ಕಾರಂಜಾ ಸಂತ್ರಸ್ತರಿಗೆ ಕಾಲಮಿತಿಯಲ್ಲಿ ವಿಶೇಷ ಪ್ಯಾಕೇಜ್ ಘೋಷಿಸಿ

ಕಾರಂಜಾ ಸಂತ್ರಸ್ತರ ಸಮಸ್ಯೆ ಕುರಿತು ದಶಕಗಳಿಂದ ಹೋರಾಟ ನಡೆಯುತ್ತಿದ್ದು, ಸರ್ಕಾರಕ್ಕೂ ಈ...

ಬೀದರ್‌ನಲ್ಲಿ ಮಾ.25ರಂದು ಉದ್ಯೋಗ ಮೇಳ

ಬೀದರ್ ನಗರದ ನೌಬಾದ್‍ನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿಲ್ಲಾ ಉದ್ಯೋಗ...

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...