ಬಿಜೆಪಿ ವಿರೋಧಿ ನಿಲುವುಳ್ಳ ನಿವೃತ್ತ ನ್ಯಾಯಾಧೀಶರಿಂದ ಬಿಜೆಪಿಗೆ ಬೈಯಿಸುವ ಕೆಲಸ‌ ಕಾಂಗ್ರೆಸ್‌ ಮಾಡುತ್ತಿದೆ: ಪ್ರಲ್ಹಾದ್‌ ಜೋಶಿ

Date:

  • ಕೋವಿಡ್‌ ಹಗರಣದ ಬಗ್ಗೆ ಸರ್ಕಾರದಿಂದ ವಿಚಾರಣಾ ಆಯೋಗ ರಚನೆ
  • ‘ನೆಹರು ಕಾಲದಿಂದ ಹಿಡಿದು ಭ್ರಷ್ಟಾಚಾರ ಮಾಡಿರುವುದು ಕಾಂಗ್ರೆಸ್’

ಕಾಂಗ್ರೆಸ್​​ನವರು ಉದ್ದೇಶಪೂರ್ವಕವಾಗಿ ಬಿಜೆಪಿ ವಿರೋಧಿ ನಿಲುವುಳ್ಳ ನಿವೃತ್ತ ನ್ಯಾಯಾಧೀಶರನ್ನು ಇಟ್ಟು ಬಿಜೆಪಿಗೆ ಬೈಯಿಸುವ ಕೆಲಸ‌ ಮಾಡುತ್ತಿದ್ದಾರೆ. ಜನರು ಕೂಡ ಇದನ್ನೆಲ್ಲ ನೋಡುತ್ತಿದ್ದಾರೆ ಎಂದು ಕೇಂದ್ರ ಸಚಿವ ಪ್ರಲ್ಹಾದ್‌ ಜೋಶಿ ಕಿಡಿ ಕಾರಿದರು.

ಬಿಜೆಪಿ ಸರ್ಕಾರದ ಅವಧಿಯಲ್ಲಿ ಕೊರೋನಾ ಸೋಂಕು ಅಬ್ಬರದ ವೇಳೆ, ಔಷಧ ಹಾಗೂ ಉಪಕರಣಗಳ ಖರೀದಿಯಲ್ಲಿನ ಭ್ರಷ್ಟಾಚಾರ ಆರೋಪದ ಕುರಿತು ತನಿಖೆ ನಡೆಸಿ ವರದಿ ನೀಡುವಂತೆ ಹೈಕೋರ್ಟ್​​ ನಿವೃತ್ತ ನ್ಯಾಯಮೂರ್ತಿ ಜಾನ್​ ಮೈಕಲ್​ ಕುನ್ಹಾ ನೇತೃತ್ವದ ತನಿಖಾ ಆಯೋಗ ರಚಿಸಿರುವ ಬಗ್ಗೆ ಹುಬ್ಬಳ್ಳಿಯಲ್ಲಿ ಪ್ರತಿಕ್ರಿಯಿಸಿದರು.

“ವಿಚಾರಣಾ ಆಯೋಗದ ಮುಖ್ಯಸ್ಥ ನಿವೃತ್ತ ನ್ಯಾಯಮೂರ್ತಿಗಳಿದ್ದಾರೆ. ದಿನ ಬೆಳಗಾದರೆ ಬಿಜೆಪಿ ಹಾಗೂ ಪ್ರಧಾನಿ ನರೇಂದ್ರ ಮೋದಿಯವರನ್ನು ಬೈಯುವುದೇ ಅವರ ಕೆಲಸ”ಎಂದು ಹರಿಹಾಯ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಕಾಂಗ್ರೆಸ್ ಭ್ರಷ್ಟಾಚಾರದ ರಕ್ತ ಬೀಜಾಸುರರಿದ್ದಂತೆ. ಇಡೀ ದೇಶದಲ್ಲಿ ನೆಹರು ಕಾಲದಿಂದ ಹಿಡಿದು ಭ್ರಷ್ಟಾಚಾರ ಮಾಡಿದಂತಹವರು ಕಾಂಗ್ರೆಸ್​​ನವರು. ಇದನ್ನು ನಾವು ಹೇಳುತ್ತಿಲ್ಲ ಕಾಂಗ್ರೆಸ್​ ಶಾಸಕರೇ ಹೇಳುತ್ತಿದ್ದಾರೆ. ವರ್ಗಾವಣೆಯಿಂದ ಹಿಡಿದು ಎಲ್ಲದರಲ್ಲೂ ಭ್ರಷ್ಟಾಚಾರ ಇದೆ ಅಂತ ಅವರೇ ಹೇಳಿದ್ದಾರೆ”ಎಂದರು.

ಈ ಸುದ್ದಿ ಓದಿದ್ದೀರಾ? ಪ್ರಧಾನಿ ಮೋದಿ ಬಳಿಗೆ ಕರೆದೊಯ್ಯುವಂತೆ ಬಿಜೆಪಿ ನಾಯಕರ ಬಳಿ ಬೇಡಿಕೆ ಇಟ್ಟ ಸೌಜನ್ಯ ತಾಯಿ

ಕಾಂಗ್ರೆಸ್ ನೇತೃತ್ವದ ಮೈತ್ರಿಕೂಟದ ಹೆಸರನ್ನು ಯು.ಪಿ.ಎ ಎಂದು ಬದಲಿಸಿದ ಬಗ್ಗೆ ಪ್ರತಿಕ್ರಿಯಿಸಿದ ಜೋಶಿ, “ಕಾಂಗ್ರೆಸ್ ನಾಯಕರು UPA ಮೈತ್ರಿ ಕೂಟದ ಹೆಸರನ್ನು ಯಾಕೆ ಚೇಂಜ್ ಮಾಡಿದರು ಅಂತ ಲೆಕ್ಕ ಹಾಕ್ತಾ ಇದ್ವಿ. ಅಂಗಡಿ, ಫ್ಯಾಕ್ಟರಿಗಳಲ್ಲಿ ಪ್ರೊಡಕ್ಟ್ ಅದೇ ಇರುತ್ತೆ ಆದರೆ ಕೆಟ್ಟ ಬ್ರಾಂಡ್ ಎಂಬ ಹಣೆಪಟ್ಟಿ ಬಂದ ಮೇಲೆ ಅದೇ ಪ್ರಾಡಕ್ಟ್, ಹೆಸರು ಮಾತ್ರ ಬದಲಾಯಿಸುತ್ತಾರೆ. ಈಗ ಕಾಂಗ್ರೆಸ್ ನಾಯಕರು ಯುಪಿಎ ಮೈತ್ರಿಕೂಟದ ಹೆಸರು ಬದಲಿಸಿರೋದು ಕೂಡ ಇದೇ ರೀತಿ ಆಗಿದೆ‌” ಎಂದು ಲೇವಡಿ ಮಾಡಿದರು.

ಚಂದ್ರಯಾನದ ಯಶಸ್ಸಿನ ಬಗ್ಗೆ ಮಾತನಾಡಿದ ಅವರು, “ಚಂದ್ರಯಾನದ ಯಶಸ್ಸು ದೇಶದ ಯುವಜನರ ಉತ್ಸಾಹ ಇಮ್ಮಡಿಗೊಳಿಸಿದೆ. ಈಗ ಅಭಿವೃದ್ಧಿ ಹೊಂದುತ್ತಿರುವ ದೇಶಗಳ ಸಾಲಿನಲ್ಲಿರುವ ಭಾರತ 2047ರ ಹೊತ್ತಿಗೆ ಸ್ವಾತಂತ್ರ್ಯ ಬಂದು ನೂರು ವರ್ಷ ಆಗುವ ಸಂದರ್ಭದಲ್ಲಿ ವಿಕಾಸಿತ ದೇಶವಾಗಲಿದೆ” ಎಂದು ವಿಶ್ವಾಸ ವ್ಯಕ್ತಪಡಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...