ಶಿಡ್ಲಘಟ್ಟ | ಆನೂರು ಗ್ರಾಮ ಪಂಚಾಯತಿ ಅಧ್ಯಕ್ಷರಾಗಿ ಜಪ್ತಿಹೊಸಹಳ್ಳಿ ಪ್ರಕಾಶ್ ಅವಿರೋಧ ಆಯ್ಕೆ

Date:

ಶಿಡ್ಲಘಟ್ಟ ತಾಲೂಕಿನ ಆನೂರು ಗ್ರಾಮ ಪಂಚಾಯಿತಿಯ ಅಧ್ಯಕ್ಷರಾಗಿ ಜಪ್ತಿಹೊಸಹಳ್ಳಿ ಪ್ರಕಾಶ್ ಬುಧವಾರ ಅವಿರೋಧ ಆಯ್ಕೆಯಾದರು.

ಗ್ರಾಮ ಪಂಚಾಯತಿ ಅಧ್ಯಕ್ಷರಾಗಿ ಸೇವೆ ಸಲ್ಲಿಸುತ್ತಿದ್ದ ವೆಂಕಟೇಶ್ ರಾಜೀನಾಮೆ ಸಲ್ಲಿಸಿದ ಹಿನ್ನೆಲೆಯಲ್ಲಿ ತೆರವಾಗಿದ್ದ ಅಧ್ಯಕ್ಷ ಸ್ಥಾನ ಬಿಸಿಎಂ(ಎ) ವರ್ಗಕ್ಕೆ ಮೀಸಲಾಗಿತ್ತು. ಜಪ್ತಿ ಹೊಸಹಳ್ಳಿ ಪ್ರಕಾಶ್ ನಾಮಪತ್ರ ಸಲ್ಲಿಸಿದ್ದರು. ಚುನಾವಣಾ ಅಧಿಕಾರಿ ಹಾಗೂ ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ಜಗದೀಶ್, ನಾಮಪತ್ರಗಳ ಪ್ರಕ್ರಿಯೆಯನ್ನು ಪರಿಶೀಲಿಸಿ ಜಪ್ತಿಹೊಸಹಳ್ಳಿ ಪ್ರಕಾಶ್ ಅವರನ್ನು ಅವಿರೋಧವಾಗಿ ಗ್ರಾಮ ಪಂಚಾಯಿತಿ ಅಧ್ಯಕ್ಷರಾಗಿ ಆಯ್ಕೆ ಮಾಡಲಾಗಿದೆ ಎಂದು ಘೋಷಣೆ ಮಾಡಿದರು.

2010ರಲ್ಲಿ ಒಂದು ಬಾರಿ ಅಧ್ಯಕ್ಷರಾಗಿ ಸೇವೆ ಸಲ್ಲಿಸಿ ಅನುಭವ ಹೊಂದಿರುವ ಜಪ್ತಿ ಹೊಸಹಳ್ಳಿ ಪ್ರಕಾಶ್ ಗ್ರಾಮ ಪಂಚಾಯತಿ ಅಧ್ಯಕ್ಷರಾಗಿ ಪುನರಾಯ್ಕೆಯಾಗಿದ್ದು, ಮುಂದಿನ ದಿನಗಳಲ್ಲಿ ಗ್ರಾಮ ಪಂಚಾಯಿತಿಯ ವ್ಯಾಪ್ತಿಯಲ್ಲಿ ಮೂಲಭೂತ ಸೌಲಭ್ಯಗಳನ್ನು ಒದಗಿಸಲು ಆದ್ಯತೆ ನೀಡಲಾಗುವುದು. ಪಂಚಾಯಿತಿಯನ್ನು ಜಿಲ್ಲೆಯಲ್ಲಿ ಮಾತ್ರವಲ್ಲದೆ ಕರ್ನಾಟಕ ರಾಜ್ಯದಲ್ಲಿ ಮಾದರಿ ಮಾಡುವ ಸಂಕಲ್ಪ ಹೊಂದಿದ್ದೇನೆ ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಗ್ರಾಮ ಪಂಚಾಯತಿ ಅಧ್ಯಕ್ಷರಾಗಿ ಆಯ್ಕೆಯಾದ ಜಪ್ತಿಹೊಸಹಳ್ಳಿ ಪ್ರಕಾಶ್ ಅವರನ್ನು ಕಾಂಗ್ರೆಸ್ ಮುಖಂಡರಾದ ಆಂಜನಪ್ಪ (ಪುಟ್ಟು), ಕೆಎಂಎಫ್ ನಿರ್ದೇಶಕ ಶ್ರೀನಿವಾಸ್ ರಾಮಯ್ಯ, ಪಿ.ಎಲ್.ಡಿ ಬ್ಯಾಂಕ್ ನಿರ್ದೇಶಕ ಕಾಳಿನಾಯಕನಹಳ್ಳಿ ಭೀಮೇಶ್, ವೈ ಹುಣಸೇನಹಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಮುರಳಿ, ರಾಜಕುಮಾರ್ ಹಾರ ಹಾಕಿ ಅಭಿನಂದಿಸಿದರು. ಅಭಿಮಾನಿಗಳು ಪಟಾಕಿ ಸಿಡಿಸಿ ಸಿಹಿ ಹಂಚುವ ಮೂಲಕ ಸಂಭ್ರಮಿಸಿದರು.

ಈ ಸಂದರ್ಭದಲ್ಲಿ ಪಿ ಎಲ್ ಡಿ ಬ್ಯಾಂಕ್ ಅಧ್ಯಕ್ಷ ಬಂಕ್ ಮುನಿಯಪ್ಪ, ಗ್ರಾಮ ಪಂಚಾಯತಿ ಉಪಾಧ್ಯಕ್ಷೆ ನೇತ್ರಾವತಿ ಮುರಳಿ, ಮಾಜಿ ಅಧ್ಯಕ್ಷ ಹೆಚ್.ಎನ್.ವೆಂಕಟೇಶ್, ಮಾಜಿ ಉಪಾಧ್ಯಕ್ಷ ಪಿ.ಎನ್. ವಿಜೇಂದ್ರ, ಗ್ರಾಪಂ ಸದಸ್ಯರಾದ ಬಿ.ಎನ್.ವಿಶ್ವಾಸ್, ನರಸಿಂಹಮೂರ್ತಿ, ಎ.ಮುರಳಿ, ಅರುಣ್‌ಕುಮಾರ್, ವರಲಕ್ಷ್ಮಿ ಸಂತೋಷ್, ಲತಾ ದೇವರಾಜ್, ಅರುಣಾ ಸುರೇಶ್, ಪ್ರೇಮ ಅನಂದ್, ಉಷಾರಾಣಿ ಮಣಿ, ರಾಧಮುನಿಯಪ್ಪ,ರತ್ನಮ್ಮ ಈರಪ್ಪ, ವೆಂಕಟಲಕ್ಷö್ಮಮ್ಮ ಮುನಿಕೃಷ್ಣಪ್ಪ, ಗ್ರಾಮ ಪಂಚಾಯಿತಿ ಪಿಡಿಒ ಕಾತ್ಯಾಯಿನಿ, ಹಿತ್ತಲಹಳ್ಳಿ ಲೊಕೇಶ್, ಬೋದಗೂರು ಸುರೇಶ್, ಪ್ರಭಾಕರ್ ಮತ್ತಿತರರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...