ಬೀದರ್‌ | ಕೋಗಿಲೆ ಕಂಠದ ಪ್ರಕೃತಿಗೆ ಬೇಕಿದೆ ಪ್ರೋತ್ಸಾಹ

Date:

ಔರಾದ್‌ ತಾಲ್ಲೂಕಿನ ಜಕನಾಳ ಎಂಬ ಗಡಿ ಗ್ರಾಮದ 16 ವರ್ಷದ ಕೋಗಿಲೆ ಕಂಠದ ಪ್ರಕೃತಿಯ ಗಾಯನಕ್ಕೆ ತಲೆತೂಗದ ಸಂಗೀತ ಪ್ರೇಮಿಗಳಿಲ್ಲ ಎನ್ನಬಹುದು.

ಕಾಶಿನಾಥ್‌ ಹಾಗೂ ಶ್ರೀದೇವಿ ಮೇತ್ರೆ ಅವರ ಪುತ್ರಿ ಪ್ರಕೃತಿ ಸದ್ಯ ಔರಾದ್‌ ತಾಲ್ಲೂಕಿನ ವನಮಾರಪಳ್ಳಿ ಗ್ರಾಮದಲ್ಲಿರುವ ಕಿತ್ತೂರು ರಾಣಿ ಚನ್ನಮ್ಮ ಆಂಗ್ಲ ಮಾಧ್ಯಮ ವಸತಿ ಶಾಲೆಯಲ್ಲಿ 10ನೇ ತರಗತಿಯಲ್ಲಿ ಓದುತ್ತಿದ್ದಾಳೆ.

ವಿದ್ಯಾರ್ಥಿನಿ ಪ್ರಕೃತಿ ಕನ್ನಡ, ಹಿಂದಿ ಭಕ್ತಿಗೀತೆ, ಭಾವಗೀತೆ ಹಾಗೂ ಚಿತ್ರಗೀತೆಗಳನ್ನು ಸುಮಧುರವಾಗಿ ಹಾಡುತ್ತಾಳೆ. ಅವಳ ಪ್ರತಿಭೆ ಗುರುತಿಸಿದ ಶಾಲೆಯ ಶಿಕ್ಷಕರು ಉತ್ಸಾಹ ತುಂಬುತ್ತಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ʼಸೂಜಿಗಾದ ಸೂಜು ಮಲ್ಲಿಗೆ…ಮಾದೇವಾ ನಿಮ್ಮ ಮಂಡೆ ಮ್ಯಾಲೆ ದುಂಡು ಮಲ್ಲಿಗೆʼ, ನೀನೇ ಮೊದಲು ನೀನೆ ಕೊನೆ ಬೇರೆ ಯಾರು ಬೇಡ ನನಗೆ ಎಂಬ ಜಾನಪದ, ಚಿತ್ರಗೀತೆ ಹಾಡು ಪ್ರಕೃತಿ ಮಧುರ ಕಂಠದಿಂದ ಹೊರಡುತ್ತಿದ್ದಂತೆ ಮತ್ತೆ ಮತ್ತೆ ಕೇಳಬೇಕೆನಿಸುತ್ತದೆ.

‘ಜಬ್ ಮೈ ಬಾದಲ್ ಬನ್ ಜಾನಾ ತುಮ್ ಭೀ ಬಾರಿಶ್ ಬನ್ ಜಾನಾ, ಜೊ ಕಮ್ ಪಡ್ ಜಾಯೇ ಸಾಂಸೇ ತು ಮೇರಾ ದಿಲ್ ಬನ್ ಜಾನಾ’ ಎಂಬ ʼಬಾರಿಸ್‌ʼ ಹಿಂದಿ ಚಲನಚಿತ್ರ ಗೀತೆಗಳು ಸಂಗೀತ ಪ್ರಿಯರ ಮನಸ್ಸು ಗೆದ್ದಿದೆ.

ಬಡ ಕುಟುಂಬದ ಹಿನ್ನಲೆಯ ಪೃಕೃತಿ ಎಲ್ಲಿಯೂ ಸಂಗೀತ ಕಲಿತವರಲ್ಲ. ಮನೆಯಲ್ಲಿ ಅಕ್ಕಂದಿಯರು ಹಾಡುವ ಹಾಡು ಕೇಳಿ, ಅದು ನೆನಪಿನಲ್ಲಿ ಇಟ್ಟುಕೊಂಡು ಸಂಗೀತದ ಮೇಲೆ ಒಲವು ಬೆಳೆಸಿಕೊಂಡಿದ್ದಳು. ಪ್ರಾಥಮಿಕ ತರಗತಿಯಿಂದಲೇ ಸಂಗೀತವನ್ನು ಹವ್ಯಾಸವಾಗಿಸಿಕೊಂಡು ಆಸಕ್ತಿಯಿಂದ ಹಾಡುಗಾರಿಕೆ ಮಾಡುವ ಕಲೆ ಕರಗತ ಮಾಡಿಕೊಂಡಳು.

ʼಪ್ರತಿಭಾ ಕಾರಂಜಿ ಸೇರಿದಂತೆ ವಿವಿಧ ಸ್ಪರ್ಧೆಯಲ್ಲಿ ಭಾಗವಹಿಸಿ ಅತ್ಯುತ್ತಮ ಗಾಯನದ ಮೂಲಕ ಸೈ ಎನಿಸಿಕೊಂಡಿದ್ದಾಳೆ. ʼಜೀ ಕನ್ನಡʼ ವಾಹಿನಿ ನಡೆಸುವ ʼಸರಿಗಮಪʼ ಶೋಗಾಗಿ ಇತ್ತೀಚೆಗೆ ನಡೆದ ಆಡಿಷನ್‌ನ ಸ್ಪರ್ಧೆಯಲ್ಲಿ ಭಾಗವಹಿಸಿ ಮೊದಲ ಹಂತದಲ್ಲಿ ಆಯ್ಕೆಯಾಗಿ, ಬಳಿಕ ನಡೆದ ಎರಡನೇ ಆಯ್ಕೆ ಪಟ್ಟಿ ಆಯೋಜಕರು ತಿಳಿಸಲಿಲ್ಲʼ ಎಂದು ಶಿಕ್ಷಕರು ಹೇಳುತ್ತಾರೆ.

ʼನನ್ನ ಪೋಷಕರು ಕೂಲಿ ಕೆಲಸ ಮಾಡುತ್ತಾರೆ. ಆರು ಜನ ಅಕ್ಕಂದಿಯರಲ್ಲಿ ಅನನ್ಯ ಎಂಬ ಅಕ್ಕನ ಸಹಕಾರದಿಂದ ಮನೆಯಲ್ಲಿ ಸಂಗೀತ ಕಲಿಯುವ ವಾತಾವರಣ ನಿರ್ಮಿಸಿತು. ಬಳಿಕ ಶಾಲೆಯಲ್ಲಿ ನಡೆಯುವ ಕಾರ್ಯಕ್ರಮಗಳಲ್ಲಿ ಹಾಡು ಹೇಳುತ್ತಿದ್ದೆ. 6ನೇ ತರಗತಿಯಿಂದ ಕಿತ್ತೂರು ರಾಣಿ ಚನ್ನಮ್ಮ ವಸತಿ ಶಾಲೆಯಲ್ಲಿ ಓದುತ್ತಿರುವೆ. ಇಲ್ಲಿಯೂ ಶಿಕ್ಷಕರು ನನ್ನ ಆಸಕ್ತಿಗೆ ಪ್ರೋತ್ಸಾಹ ನೀಡುತ್ತಿದ್ದಾರೆʼ ಎಂದು ವಿದ್ಯಾರ್ಥಿನಿ ಪ್ರಕೃತಿ ಹೇಳುತ್ತಾಳೆ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಎಸ್‌ಸಿಎಸ್‌ಪಿ / ಟಿಎಸ್‌ಪಿ ಅನುದಾನ ಬಳಕೆಯಾಗುತ್ತಿಲ್ಲವೇಕೆ?

ʼನಮ್ಮ ಶಾಲೆಯ ವಿದ್ಯಾರ್ಥಿನಿ ಪ್ರಕೃತಿ ಅತ್ಯುತ್ತಮ ಗಾಯನ ಮೂಲಕ ಎಲ್ಲರ ಮೆಚ್ಚುಗೆಗೆ ಪಾತ್ರವಾಗಿದ್ದಾಳೆ. ಇದು ನಮಗೆ ಹೆಮ್ಮೆ ತಂದಿದೆ. ಶಾಲೆಯಲ್ಲಿ ಸಂಗೀತ ಶಿಕ್ಷಕರ ಕೊರತೆಯಿರುವ ಕಾರಣ ಸದ್ಯ ಶಾಲೆಯ ವಿಷಯವಾರು ಶಿಕ್ಷಕರೇ ಪ್ರೋತ್ಸಾಹಿಸುತ್ತಿದ್ದಾರೆ. ವಿದ್ಯಾರ್ಥಿನಿ ಪ್ರಕೃತಿಗೆ ಸೂಕ್ತ ತರಬೇತಿ ಹಾಗೂ ನೆರವು ಸಿಕ್ಕರೆ ಅವಳು ಸಂಗೀತ ಕ್ಷೇತ್ರದಲ್ಲಿ ಎತ್ತರಕ್ಕೆ ಬೆಳೆಯುತ್ತಾಳೆʼ ಎಂದು ಮುಖ್ಯಗುರು ಶಿವಾಜಿ ಪವಾರ್‌ ಹೇಳುತ್ತಾರೆ.

WhatsApp Image 2025 02 06 at 11.55.32 e1738823214905
ಬಾಲಾಜಿ ಕುಂಬಾರ್
+ posts

ಬಾಲಾಜಿ ಕುಂಬಾರ ಅವರು ಔರಾದ್ ತಾಲ್ಲೂಕಿನ ಚಟ್ನಾಳ ಗ್ರಾಮದವರು. ಸಾಹಿತ್ಯ, ಶಿಕ್ಷಣ ಹಾಗೂ ರಾಜಕೀಯ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿದ್ದಾರೆ. ಸದ್ಯ 'ಈದಿನ.ಕಾಮ್‌' ಮಾಧ್ಯಮ ಸಂಸ್ಥೆಯಲ್ಲಿ ಬೀದರ್ ಜಿಲ್ಲಾ ಹಿರಿಯ ಸಂಯೋಜಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಕವಿತೆ, ಲೇಖನ, ದೇಶಿ ನುಡಿ ಬರಹ ಬರೆಯುವುದು ಇವರ ಮುಖ್ಯ ಹವ್ಯಾಸ.

ಪೋಸ್ಟ್ ಹಂಚಿಕೊಳ್ಳಿ:

ಬಾಲಾಜಿ ಕುಂಬಾರ್
ಬಾಲಾಜಿ ಕುಂಬಾರ್
ಬಾಲಾಜಿ ಕುಂಬಾರ ಅವರು ಔರಾದ್ ತಾಲ್ಲೂಕಿನ ಚಟ್ನಾಳ ಗ್ರಾಮದವರು. ಸಾಹಿತ್ಯ, ಶಿಕ್ಷಣ ಹಾಗೂ ರಾಜಕೀಯ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿದ್ದಾರೆ. ಸದ್ಯ 'ಈದಿನ.ಕಾಮ್‌' ಮಾಧ್ಯಮ ಸಂಸ್ಥೆಯಲ್ಲಿ ಬೀದರ್ ಜಿಲ್ಲಾ ಹಿರಿಯ ಸಂಯೋಜಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಕವಿತೆ, ಲೇಖನ, ದೇಶಿ ನುಡಿ ಬರಹ ಬರೆಯುವುದು ಇವರ ಮುಖ್ಯ ಹವ್ಯಾಸ.

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮೈಸೂರು | ನಂಜನಗೂಡಿನಲ್ಲಿ ಮರಗಳ ಹನನ; ಸಂಘಟನೆಗಳಿಂದ ಪ್ರತಿಭಟನೆ

ದಿನಾಂಕ-07-03-2026ರಂದು ಮೈಸೂರು ಜಿಲ್ಲೆ, ನಂಜನಗೂಡಿನ ಹೆಜ್ಜಿಗೆ ಗ್ರಾಮದ ಬಳಿ ಕಪಿಲಾ ನದಿ...

ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಬ್ಯಾಲೆಟ್ ಪೇಪರ್ ಬಳಕೆ; ವಿಧಾನಸಭೆಯಲ್ಲಿ ಮಸೂದೆ ಅಂಗೀಕಾರ

ರಾಜ್ಯದ ಸ್ಥಳೀಯ ಸಂಸ್ಥೆಗಳ ಚುನಾವಣಾ ಪ್ರಕ್ರಿಯೆಯಲ್ಲಿ ಬದಲಾವಣೆ ತರಲು ರಾಜ್ಯ ಸರ್ಕಾರ...

ಗುಂಡ್ಲುಪೇಟೆ | ಸಿಡಿಪಿಒ ವಿರುದ್ಧ ಜಾರಕಿಹೊಳಿ ಬ್ರಿಗೇಡ್ ಭ್ರಷ್ಟಾಚಾರ ಆರೋಪ; ದೂರು

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ಸಿಡಿಪಿಓ ಹೇಮಾವತಿ ವಿರುದ್ದ ಜಾರಕಿಹೊಳಿ ಬ್ರಿಗೇಡ್ ಜಿಲ್ಲಾಧಿಕಾರಿಯವರಿಗೆ...

ಗದಗ | SC ST ಜನರ ನಡುವೆ ಗಲಾಟೆ; ಗಾಯಾಳುಗಳು ಆಸ್ಪತ್ರೆಗೆ ದಾಖಲು

ನೀರು ಕುಡಿದ ವಿಚಾರಕ್ಕೆ ಪರಿಶಿಷ್ಟ ಜಾತಿ(SC) ಪರಿಶಿಷ್ಟ(ST) ಜನಾಂಗದವರ ನಡುವೆ ಗಲಾಟೆ...