ಯಾರು ಹೆಚ್ಚು ಹಣ ಕೊಡುತ್ತಾರೋ ಅವರಿಗೆ ಪೋಸ್ಟಿಂಗ್‌: ಸರ್ಕಾರದ ವಿರುದ್ಧ ಪ್ರಲ್ಹಾದ್‌ ಜೋಶಿ ಆರೋಪ

Date:

  • ‘ರಾಜ್ಯ ಸರ್ಕಾರ ಪ್ರತಿಯೊಂದು ಹುದ್ದೆಯನ್ನೂ ಹರಾಜು ಹಾಕುತ್ತಿದೆ’
  • ‘ಯಾವುದೇ ಅಧಿಕಾರಿಯನ್ನು ಕೇಳಿದರೂ ಇದೇ ಮಾತು ಹೇಳುತ್ತಿದ್ದಾರೆ’

ರಾಜ್ಯ ಸರ್ಕಾರ ಪ್ರತಿಯೊಂದು ಹುದ್ದೆಯನ್ನೂ ಹರಾಜು ಹಾಕುತ್ತಿದೆ. 10 ಲಕ್ಷ ರೂ. ಬದಲು ಯಾರಾದರೂ 12 ಲಕ್ಷ ರೂ. ಕೊಡಲು ಮುಂದೆ ಬಂದರೆ ಅವರಿಗೆ ಪೋಸ್ಟಿಂಗ್ ಮಾಡಲಾಗುತ್ತಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ್‌ ಜೋಶಿ ಆರೋಪಿಸಿದರು.

ಹುಬ್ಬಳ್ಳಿಯಲ್ಲಿ ಶನಿವಾರ ಸುದ್ದಿಗಾರರ ಜೊತೆ ಮಾತನಾಡಿದ ಅವರು, “ಯಾವುದೇ ಅಧಿಕಾರಿಯನ್ನು ಕೇಳಿದರೂ ಇದನ್ನೇ ಹೇಳುತ್ತಿದ್ದಾರೆ. ಯಾರು ಹೆಚ್ಚು ಹಣ ಕೊಡುತ್ತಾರೆಯೋ ಅವರಿಗೆ ಪೋಸ್ಟಿಂಗ್‌ ಮಾಡಲಾಗುತ್ತಿದೆ. ಈ ಸರ್ಕಾರದಲ್ಲಿ ಶಾಸಕರು‌ ಬಂಡಾಯ ಏಳಲು ಕಾರಣ ಏನೆಂದರೆ, ಈ ಸರ್ಕಾರ ಅತ್ಯಂತ ಭ್ರಷ್ಟ ಸರ್ಕಾರ ಆಗಿರುವುದು” ಎಂದು ವಾಗ್ದಾಳಿ ನಡೆಸಿದರು.

“ವರ್ಗಾವಣೆ ದಂಧೆ ವಿಚಾರದಲ್ಲಿ ಭ್ರಷ್ಟಾಚಾರ ಮುಗಿಲು ಮುಟ್ಟಿದೆ. ಇದು ಜನವಿರೋಧಿ ಸರ್ಕಾರ, ಸುಳ್ಳು ಹೇಳುವ ಸರ್ಕಾರ. ರಾಜ್ಯದ ಅಭಿವೃದ್ಧಿ ಮರೀಚಿಕೆಯಾಗಿದೆ. ಜನರು ಇದಕ್ಕೆ ಸೂಕ್ತ ಉತ್ತರ ನೀಡಲಿದ್ದಾರೆ” ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಬಸ್​ನಲ್ಲಿ ಉಚಿತ ಪ್ರಯಾಣ ನೀಡುತ್ತಿದ್ದೇವೆ ಎನ್ನುತ್ತಿದ್ದಾರೆ. ಬಸ್​ ಓಡಾಡಲು ಒಳ್ಳೆ ರಸ್ತೆ ಬೇಕು. ರಸ್ತೆ ಕಾಮಗಾರಿಗೆ ಶಾಸಕರು ಅನುದಾನ ಕೇಳಿದರೆ ನಿರಾಕರಿಸುತ್ತಾರೆ. ಮಳೆ ಬಂದು ರಸ್ತೆಗಳಿಗೆ ಹಾನಿಯಾಗಿವೆ, ನಯಾಪೈಸೆ ಅನುದಾನ ಕೊಟ್ಟಿಲ್ಲ. ಯಾವುದೇ ಅಭಿವೃದ್ಧಿ ಕಾರ್ಯಕ್ಕೆ ಶಾಸಕರಿಗೆ ಸರ್ಕಾರ ಹಣ ನೀಡುತ್ತಿಲ್ಲ” ಎಂದು ಕಿಡಿಕಾರಿದರು.

ಈ ಸುದ್ದಿ ಓದಿದ್ದೀರಾ? ಕುಮಾರಣ್ಣನ ಕುರಿತು ನನಗೂ ಒಂದಿಷ್ಟು ಮಾಹಿತಿ ಗೊತ್ತಿದೆ: ‌ಡಿಸಿಎಂ ಡಿಕೆ ಶಿವಕುಮಾರ್

ಕೊಲೆಗಡುಕರಿಗೆ ಧೈರ್ಯ ಬಂದಿದೆ

“ರಾಜ್ಯದಲ್ಲಿ ಕಾಂಗ್ರೆಸ್​ ಸರ್ಕಾರ ಬಂದಮೇಲೆ ಕೊಲೆಗಡುಕರಿಗೆ ಮತ್ತಷ್ಟು ಧೈರ್ಯ ಬಂದಿದೆ. ಕಾಲೇಜಿನ ಶೌಚಾಲಯದಲ್ಲಿ ವಿಡಿಯೋ ಚಿತ್ರೀಕರಣ ಘಟನೆ ನಡೆದಿದೆ. ಕಾಂಗ್ರೆಸ್ ಸರ್ಕಾರ ಇದೆ ಎಂದು ಅವರಿಗೆ ಇಷ್ಟೆಲ್ಲಾ ಧೈರ್ಯ ಬರುತ್ತಿದೆ” ಎಂದು ಹರಿಹಾಯ್ದರು.

“ಕಾಂಗ್ರೆಸ್ ಸರ್ಕಾರ ನಮಗೆ ರಕ್ಷಣೆ ಕೊಡುತ್ತದೆ ಎಂಬ ಭರವಸೆ ಅವರಿಗಿದೆ. ಹೀಗಾಗಿ ಕೊಲೆ ಮಾಡುವುದು, ಫೋಟೋ ಎಡಿಟ್, ಚಿತ್ರೀಕರಣ ಮಾಡುತ್ತಿದ್ದಾರೆ. ಸಾಮಾನ್ಯ ಜನರಿಗೆ ಈ ಸರ್ಕಾರದ ಮೇಲೆ ಭರವಸೆ ಹೋಗಿದೆ” ಎಂದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...