ಉಡುಪಿ ಕ್ರೈಸ್ತ ಧರ್ಮಪ್ರಾಂತ್ಯದಿಂದ ನೂತನ ಪೊಲೀಸ್ ವರಿಷ್ಠಾಧಿಕಾರಿ ಭೇಟಿ

Date:

ಉಡುಪಿ ಜಿಲ್ಲೆಗೆ ನೂತನವಾಗಿ ಆಗಮಿಸಿರುವ ಪೊಲೀಸ್ ವರಿಷ್ಠಾಧಿಕಾರಿ ಹರಿರಾಮ್ ಶಂಕರ್ ಅವರನ್ನು ಉಡುಪಿ ಕ್ರೈಸ್ತ ಧರ್ಮಪ್ರಾಂತ್ಯದ ವತಿಯಿಂದ ಭೇಟಿ ನೀಡಿ ಶುಭ ಕೋರಲಾಯಿತು.

ಜಿಲ್ಲೆಯಲ್ಲಿ ಕ್ರೈಸ್ತ ಸಮುದಾಯದ ಪರವಾಗಿ ಧರ್ಮಾಧ್ಯಕ್ಷರಾದ ಅತಿ ವಂ|ಡಾ|ಜೆರಾಲ್ಡ್ ಐಸಾಕ್ ಲೋಬೊ ಅವರ ಶುಭಾಶಯ ಮತ್ತು ಆಶೀರ್ವಾದಗಳನ್ನು ಕೋರಿದ ನಿಯೋಗ ಧರ್ಮಪ್ರಾಂತ್ಯದ ವತಿಯಿಂದ ಕಾನೂನು ಸುವ್ಯವಸ್ಥೆಯನ್ನು ಕಾಪಾಡುವಲ್ಲಿ ಎಲ್ಲಾ ರೀತಿಯ ಸಹಕಾರದ ಭರವಸೆಯನ್ನು ನೀಡಿದರು.

ನಿಯೋಗದ ಭರವಸೆಗೆ ಸ್ಪಂದಿಸಿ ಪೊಲೀಸ್ ವರಿಷ್ಠಾಧಿಕಾರಿ ಹರಿರಾಮ್ ಶಂಕರ್ ಅವರು ಸಮುದಾಯಕ್ಕೆ ಯಾವುದೇ ರೀತಿಯ ಸಮಸ್ಯೆಗಳಾದಲ್ಲಿ ಕಾನೂನು ವ್ಯಾಪ್ತಿಯಲ್ಲಿ ಎಲ್ಲಾ ರೀತಿಯ ಸಹಕಾರ ಪೊಲೀಸ್ ಇಲಾಖೆಯಿಂದ ನೀಡಲು ಬದ್ಧರಿದ್ದು, ಸಮುದಾಯ ಕೂಡ ಕಾನೂನು ಸುವ್ಯವಸ್ಥೆ ಕಾಪಾಡಲು ಸಹಕಾರ ನೀಡುವಂತೆ ಮನವಿ ಮಾಡಿದರು.
ನಿಯೋಗದಲ್ಲಿ ಧರ್ಮಪ್ರಾಂತ್ಯದ ಕುಲಪತಿಗಳಾದ ವಂ|ಸ್ಟೀವನ್ ಡಿಸೋಜಾ, ಸಾರ್ವಜನಿಕ ಸಂಪರ್ಕಾಧಿಕಾರಿಗಳಾದ ವಂ|ಡೆನಿಸ್ ಡೆಸಾ ಹಾಗೂ ಭಾರತೀಯ ಕ್ರೈಸ್ತ ಒಕ್ಕೂಟದ ರಾಜ್ಯಾಧ್ಯಕ್ಷ ಮತ್ತು ಕ್ರೈಸ್ತ ಅಭಿವೃದ್ಧಿ ನಿಗಮದ ನಿರ್ದೇಶಕರಾದ ಪ್ರಶಾಂತ್ ಜತ್ತನ್ನ ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...