ಔರಾದ್ | ಪ್ರತಿಭಾ ಕಾರಂಜಿ : ಅರೇಬಿಕ್ ಪಠಣ ಸ್ಪರ್ಧೆಯಲ್ಲಿ ಅಫ್‌ನಾನ್ ರಾಜ್ಯ ಮಟ್ಟಕ್ಕೆ ಆಯ್ಕೆ

Date:

ಔರಾದ್‌ ತಾಲೂಕಿನ ಸಂತಪುರ ಗ್ರಾಮದ ಮಾಜಿ ಸೈನಿಕ ಪ್ರಾಥಮಿಕ ಹಾಗೂ ಪ್ರೌಢ ಶಾಲೆಯ ವಿದ್ಯಾರ್ಥಿ ಅಫ್‌ನಾನ್ ಜಲೀಲ್ ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಯಲ್ಲಿ ಅರೇಬಿಕ್ ಪಠಣ ವಿಭಾಗದಲ್ಲಿ ಪ್ರಥಮ ಸ್ಥಾನ ಪಡೆದು ರಾಜ್ಯ ಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿ ಗಮನ ಸೆಳೆದಿದ್ದಾನೆ.

ಅಫ್‌ನಾನ್ 9ನೇ ತರಗತಿಯಲ್ಲಿ ಓದುತ್ತಿದ್ದು, ಬೀದರ್‌ ನಗರದಲ್ಲಿ ಗುರುವಾರ ನಡೆದ 2024-25ನೇ ಸಾಲಿನ ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿ ಮತ್ತು ಕಲೋತ್ಸವದಲ್ಲಿ ಭಾಗವಹಿಸಿ ಅರೇಬಿಕ್ ಕಂಠಪಾಠ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಗಳಿಸಿದ್ದಾನೆ ಎಂದು ಶಾಲೆಯ ಮುಖ್ಯಗುರು ರಾಜಶೇಖರ ದೇಶಮುಖ ತಿಳಿಸಿದ್ದಾರೆ.

ಶಾಲೆಗೆ ಕೀರ್ತಿ ತಂದ ವಿದ್ಯಾರ್ಥಿಗೆ ಸಂಸ್ಥೆಯ ಅಧ್ಯಕ್ಷ ಬಾಪುರಾವ್ ಪಾಟೀಲ್ ಹಾಗೂ ಶಿಕ್ಷಕರಾದ ಶಿವಕುಮಾರ್, ಸಾಜನ್‌, ಆನಂದ, ಸುನೀಲ್, ಈರಮ್ಮ ಪಾಟೀಲ್, ಅನೀಲ್, ಪಲ್ಲವಿ, ಈರಮ್ಮಾ ಬಿ., ಸುಷ್ಮಾ, ವಿಜಯಕುಮಾರ್, ಪ್ರಕಾಶ, ನಿವೇದಿತಾ, ಕಾವೇರಿ, ಪ್ರೀಯಾದರ್ಶನಿ, ಗೀತಾ, ರೇವಣಯ್ಯಾ ಹರ್ಷ ವ್ಯಕ್ತಪಡಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಔರಾದ್‌ | ಅಪ್ಪಟ ದೇಶಪ್ರೇಮಿ ಶಾಹೀದ್ ಭಗತ್ ಸಿಂಗ್

ಭಾರತದ ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ನಿದ್ದೆಗೆಡಿಸಿದ ಸಿಂಹಾಳಿಯಂತೆ ಗರ್ಜಿಸಿ ಭಾರತದ ಹಿರಿಮೆ ಗರಿಮೆಯನ್ನು...

ಬೀದರ್‌ | ಕಾರಂಜಾ ಸಂತ್ರಸ್ತರಿಗೆ ಕಾಲಮಿತಿಯಲ್ಲಿ ವಿಶೇಷ ಪ್ಯಾಕೇಜ್ ಘೋಷಿಸಿ

ಕಾರಂಜಾ ಸಂತ್ರಸ್ತರ ಸಮಸ್ಯೆ ಕುರಿತು ದಶಕಗಳಿಂದ ಹೋರಾಟ ನಡೆಯುತ್ತಿದ್ದು, ಸರ್ಕಾರಕ್ಕೂ ಈ...

ಬೀದರ್‌ನಲ್ಲಿ ಮಾ.25ರಂದು ಉದ್ಯೋಗ ಮೇಳ

ಬೀದರ್ ನಗರದ ನೌಬಾದ್‍ನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿಲ್ಲಾ ಉದ್ಯೋಗ...

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...