ಮೈಸೂರು | ಮಕ್ಕಳ ವಾಕ್ ಶ್ರವಣ ಸಮಸ್ಯೆ ಪರಿಹರಿಸುವ ಪ್ರಯಾಸ್ ಯೋಜನೆ; ಅಂಗನವಾಡಿ ಕಾರ್ಯಕರ್ತೆಯರಿಗೆ ತರಬೇತಿ

Date:

ಮೈಸೂರಿನಲ್ಲಿ ಅಂಗನವಾಡಿ ಮಕ್ಕಳಲ್ಲಿರಬಹುದಾದ ವಾಕ್-ಶ್ರವಣ ಸಮಸ್ಯೆಗಳನ್ನು ಆರಂಭದಲ್ಲಿಯೇ ಗುರುತಿಸಿ ಚಿಕಿತ್ಸೆ ನೀಡುವ ಯೋಜನೆಯನ್ನು ರಾಜ್ಯದಲ್ಲಿಯೇ ಮೊದಲ ಬಾರಿಗೆ ಚಾಮರಾಜನಗರ ಜಿಲ್ಲೆಯಲ್ಲಿ ಅನುಷ್ಠಾನಗೊಳಿಸುತ್ತಿರುವ ವಿನೂತನ ‘ಪ್ರಯಾಸ್‘ ಯೋಜನೆ ಸಂಬಂಧ ಅಂಗನವಾಡಿ ಕಾರ್ಯಕರ್ತೆಯರನ್ನು ಸಜ್ಜುಗೊಳಿಸುವ ತರಬೇತಿ ಆರಂಭವಾಗಿದೆ.

ಜಿಲ್ಲೆಯಲ್ಲಿ 6 ತಿಂಗಳಿನಿಂದ 6 ವರ್ಷದವರೆಗಿನ ಮಕ್ಕಳಲ್ಲಿ ಮಾತು ಅಥವಾ ಕಿವಿ ಸಮಸ್ಯೆ ಕಂಡು ಬಂದಲ್ಲಿ ಆರಂಭದಲ್ಲೇ ಗುರುತಿಸಿ ವಾಕ್ ಮತ್ತು ಶ್ರವಣ ತಜ್ಞರಿಂದ ತಪಾಸಣೆ, ಚಿಕಿತ್ಸೆ ಒದಗಿಸುವ ಜಿಲ್ಲಾಡಳಿತದ ಬಹುಮಹತ್ವದ ಯೋಜನೆಯಲ್ಲಿ ಅಂಗನವಾಡಿ ಕಾರ್ಯಕರ್ತೆಯರ ಪಾತ್ರ ಬಹು ಮುಖ್ಯವಾಗಿದೆ. ಈ ಹಿನ್ನೆಲೆಯಲ್ಲಿ ಮೈಸೂರಿನ ಅಖಿಲ ಭಾರತ ವಾಕ್ ಮತ್ತು ಶ್ರವಣ ಸಂಸ್ಥೆಯ ಸೆಮಿನಾರ್ ಹಾಲ್ ನಲ್ಲಿ ಜಿಲ್ಲೆಯ 1344 ಅಂಗನವಾಡಿ ಕಾರ್ಯಕರ್ತೆಯರಿಗೆ 5 ಬ್ಯಾಚ್ ಗಳಲ್ಲಿ ಐದು ದಿನಗಳ ಕಾಲ ತರಬೇತಿ ನೀಡಲಾಗುತ್ತಿದೆ.

ಮೈಸೂರಿನಲ್ಲಿ ಬುಧವಾರ ತರಬೇತಿ ಕಾರ್ಯಕ್ರಮಕ್ಕೆ ಜಿಲ್ಲಾಧಿಕಾರಿ ಶಿಲ್ಪಾ ನಾಗ್ ಅವರು ವಿದ್ಯುಕ್ತವಾಗಿ ಚಾಲನೆ ನೀಡಿದ್ದಾರೆ. ಇದೇ ವೇಳೆ ಮಾತನಾಡಿ “ಜಿಲ್ಲೆಯ ಅಂಗನವಾಡಿಗಳಲ್ಲಿ ಸುಮಾರು 35 ಸಾವಿರ ಮಕ್ಕಳು ಇದ್ದಾರೆ. ಈ ಮಕ್ಕಳಲ್ಲಿ ಕಿವಿ ಮತ್ತು ಮಾತಿನ ತೊಂದರೆಯಂತಹ ಲಕ್ಷಣಗಳು ಕಂಡುಬಂದಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಗುರುತಿಸಿ ಗಮನಕ್ಕೆ ತಂದರೆ ಮಕ್ಕಳನ್ನು ತಪಾಸಣೆಗೆ ಒಳಪಡಿಸಿ, ಅವರಿಗೆ ಅಗತ್ಯ ಬೀಳಬಹುದಾದ ಶಸ್ತ್ರಚಿಕಿತ್ಸೆ, ಸಾಧನ ಉಪಕರಣಗಳನ್ನ ಉಚಿತವಾಗಿ ಸಿ.ಎಸ್.ಆರ್ ಮೂಲಕ ಒದಗಿಸುವ ಬಹುಮುಖ್ಯ ಯೋಜನೆಗೆ ಜಿಲ್ಲಾ ಉಸ್ತುವಾರಿ ಸಚಿವರು ಈಗಾಗಲೇ ಚಾಲನೆ ನೀಡಿದ್ದಾರೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಪ್ರಯಾಸ್ ಹೆಸರಿನ ಈ ಯೋಜನೆ ಯಶಸ್ವಿಗೆ ಅಂಗನವಾಡಿ ಕಾರ್ಯಕರ್ತೆಯರ ಪಾತ್ರ ತುಂಬಾ ಮಹತ್ವದ್ದಾಗಿದೆ. ತಾಯಿಯಂತೆ ಮಕ್ಕಳನ್ನು ಪ್ರೀತಿ, ಕಾಳಜಿಯಿಂದ ನೋಡಿಕೊಳ್ಳುವ ಅಂಗನವಾಡಿ ಕಾರ್ಯಕರ್ತೆಯರು ಆರಂಭದಲ್ಲಿಯೇ ಮಕ್ಕಳ ವಾಕ್ ಮತ್ತು ಶ್ರವಣ ಸಮಸ್ಯೆಯನ್ನು ಗುರುತಿಸುವ ಸಲುವಾಗಿ ತರಬೇತಿ ಆಯೋಜಿಸಲಾಗಿದೆ. ಇಲ್ಲಿ ಪಡೆದುಕೊಂಡ ತರಬೇತಿ ಅನುಭವವನ್ನು ತಮ್ಮ ಕಾರ್ಯಕ್ಷೇತ್ರದ ಅಂಗನವಾಡಿಗಳಲ್ಲಿ ಪ್ರೀತಿಯಿಂದ ಅನುಷ್ಠಾನ ಮಾಡಿದರೆ ಮಕ್ಕಳ ಭವಿಷ್ಯ ಆರೋಗ್ಯ ಉತ್ತಮವಾಗುತ್ತದೆ. ಇದೊಂದು ಅರ್ಥಪೂರ್ಣ ಕಾರ್ಯಕ್ರಮ. ಇದರಲ್ಲಿ ಪ್ರತಿ ಅಂಗನವಾಡಿ ಕಾರ್ಯಕರ್ತೆಯರು ಉತ್ಸಾಹದಿಂದ ತೊಡಗಿಕೊಳ್ಳಬೇಕು” ಎಂದು ಸಲಹೆ ನೀಡಿದರು.

ಜಿಲ್ಲೆಯ ಮಕ್ಕಳ ಆರೋಗ್ಯದ ಉದ್ದೇಶದಿಂದ ಅನುಷ್ಠಾನಗೊಳಿಸುತ್ತಿರುವ ಪ್ರಯಾಸ್ ಯೋಜನೆ ಅತ್ಯುತ್ತಮ ಪ್ರಯತ್ನವಾಗಿದೆ. ಆರಂಭದಲ್ಲಿಯೇ ಆರೋಗ್ಯ ಸಮಸ್ಯೆಗಳನ್ನು ಗುರುತಿಸುವುದರಿಂದ ಮಕ್ಕಳ ಕಲಿಕಾ ಸಾಮಥ್ರ್ಯಕ್ಕೆ ನೆರವಾಗಲಿದೆ. ಮಕ್ಕಳು ಉತ್ಸಾಹದಿಂದ ಇರಲು ಅವರಲ್ಲಿರುವ ತೊಂದರೆಗಳನ್ನು ನಿವಾರಿಸುವುದು ನಮ್ಮೆಲ್ಲರ ಜವಾಬ್ದಾರಿಯಾಗಿದೆ. ಇಂತಹ ಒಳ್ಳೆಯ ಕಾರ್ಯಕ್ಕೆ ಎಲ್ಲರು ಮುಂದಾಗೋಣ ಎಂದು ಕರೆ ನೀಡಿದರು.

ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮೋನಾ ರೋತ್ ಮಾತನಾಡಿ ‘ಜಿಲ್ಲಾಧಿಕಾರಿ ಶಿಲ್ಪಾ ನಾಗ್ ಅವರ ವಿಶೇಷ ಕಳಕಳಿ, ಕಾಳಜಿಯಿಂದ ಪ್ರಯಾಸ್ ಯೋಜನೆ ರೂಪಿತವಾಗಿದೆ. ಮಕ್ಕಳ ಆರೋಗ್ಯ ಹಾಗೂ ಭವಿಷ್ಯದ ಉದ್ದೇಶದಿಂದ ಹಮ್ಮಿಕೊಂಡಿರುವ ಈ ಕಾರ್ಯಕ್ರಮಕ್ಕೆ ಎಲ್ಲರು ಕೈ ಜೋಡಿಸಿ ಬೆಂಬಲ ನೀಡುವುದು ಅಗತ್ಯವಾಗಿದೆ’ ಎಂದರು.

ಅಖಿಲ ಭಾರತ ವಾಕ್ ಮತ್ತು ಶ್ರವಣ ಸಂಸ್ಥೆಯ ನಿರ್ದೇಶಕಿ ಪುಷ್ಪಾವತಿ ಮಾತನಾಡಿ “ವಾಕ್ ಮತ್ತು ಶ್ರವಣ ಸಮಸ್ಯೆಯಿಂದ ಬಳಲುತ್ತಿದ್ದ ಅನೇಕರು ಪ್ರತಿಷ್ಠಿತ ನಮ್ಮ ಸಂಸ್ಥೆಯಲ್ಲಿ ಚಿಕಿತ್ಸೆ ಪಡೆದು ಉನ್ನತ ಶಿಕ್ಷಣ, ಉದ್ಯೋಗ ಪಡೆದು ಬದುಕಿನಲ್ಲಿ ಯಶಸ್ಸು ಕಂಡಿದ್ದಾರೆ. ಹೀಗಾಗಿ, ಆರಂಭಿಕ ಹಂತದಲ್ಲಿಯೇ ಕಂಡು ಬರುವ ಸಮಸ್ಯೆಗಳ ಬಗ್ಗೆ ನಿರ್ಲಕ್ಷ್ಯ ವಹಿಸಬಾರದು. ಅಂಗನವಾಡಿಗಳಲ್ಲಿ ಮಕ್ಕಳ ತೊಂದರೆಗಳನ್ನು ಗುರುತಿಸಿ ಶಿಫಾರಸು ಮಾಡುವ ಬಗ್ಗೆ ವಿವರವಾಗಿ ತಿಳಿಸಿಕೊಡುತ್ತಿದ್ದೇವೆ. ಈ ತರಬೇತಿಯ ಪ್ರಯೋಜನ ಪಡೆಯುವುದರಿಂದ ಮಕ್ಕಳ ಸರ್ವಾಂಗೀಣ ಬೆಳವಣಿಗೆಗೆ ನಿಮ್ಮ ಕೊಡುಗೆ ನೀಡಬೇಕು” ಎಂದರು.

ಈ ಸುದ್ದಿ ಓದಿದ್ದೀರಾ? ಮೈಸೂರು | ಮಹಿಳೆಯರ ಮೇಲಿನ ದೌರ್ಜನ್ಯ, ಅಶ್ಲೀಲತೆ, ಮದ್ಯಪಾನ ಹಾವಳಿಯ ವಿರುದ್ಧ ದೇಶ ವ್ಯಾಪಿ ಪ್ರತಿಭಟನೆ

ಆಡಿಯಾಲಾಜಿ ಪ್ರೊ. ಡಾ. ಎಂ. ಸಂದೀಪ್, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯ ಉಪನಿರ್ದೇಶಕ ಸುರೇಶ್ ಸೇರಿದಂತೆ ಇನ್ನಿತರರು ಕಾರ್ಯಕ್ರಮದಲ್ಲಿ ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...