ಎನ್ಇಪಿ ಬದಲಿಗೆ ರಾಜ್ಯ ಶಿಕ್ಷಣ ನೀತಿ: ಜಾರಿಗೆ ಸಿದ್ಧತೆ ನಡೆದಿದೆ ಎಂದ ಉನ್ನತ ಶಿಕ್ಷಣ ಸಚಿವ ಎಂ ಸಿ ಸುಧಾಕರ್

Date:

  • ರಾಷ್ಟ್ರೀಯ ಶಿಕ್ಷಣ ನೀತಿಯಲ್ಲಿ ಕೆಲ ನ್ಯೂನತೆಗಳು ಇವೆ
  • ಹಂತವಾಗಿ ಒಂದು ನೀತಿಗೆ ಬದಲಾವಣೆ ತರುತ್ತೇವೆ

ರಾಷ್ಟ್ರೀಯ ಶಿಕ್ಷಣ ನೀತಿ ಬದಲಿಗೆ ರಾಜ್ಯ ಶಿಕ್ಷಣ ನೀತಿ ಜಾರಿಗೆ ತರುತ್ತೇವೆ. ಯಾವುದೇ ರೀತಿ ವಿದ್ಯಾರ್ಥಿಗಳ‌ ಶೈಕ್ಷಣಿಕ ಚಟುವಟಿಕೆಗಳಿಗೆ ತೊಂದರೆಯಾಗದ ರೀತಿ ಬದಲಾವಣೆಗೆ ಗಮನಹರಿಸುತ್ತಿದ್ದೇವೆ ಎಂದು ಉನ್ನತ ಶಿಕ್ಷಣ ಸಚಿವ ಎಂ ಸಿ ಸುಧಾಕರ್ ತಿಳಿಸಿದರು.

ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಶುಕ್ರವಾರ ಮಾತನಾಡಿ, “ಎರಡು ವರ್ಷಗಳ ಹಿಂದೆ ಹಿಂದಿನ ಸರ್ಕಾರ ನಮ್ಮ ರಾಜ್ಯದಲ್ಲಿ ಎನ್‌ಇಪಿ ಅನುಷ್ಠಾನ ಮಾಡಿದೆ. ಅದಕ್ಕೆ ಬಹಳಷ್ಟು ಪೂರ್ವ ತಯಾರಿ‌ ಆಗಬೇಕಿತ್ತು, ಆಗಿರಲಿಲ್ಲ. ಅದರಲ್ಲಿ ಕೆಲ ನ್ಯೂನತೆಗಳು ಇವೆ. ಈ ಎಲ್ಲವನ್ನೂ ಶಿಕ್ಷಣ ತಜ್ಞರ ಜೊತೆಗೆ ಚರ್ಚಿಸುತ್ತಿದ್ದೇವೆ” ಎಂದರು.

“ರಾಜ್ಯ ಶಿಕ್ಷಣ ನೀತಿ ಬಗ್ಗೆ ಮುಂದಿನ ದಿನಗಳಲ್ಲಿ ಸ್ಪಷ್ಟವಾದ ರೂಪ ಕೊಟ್ಟು ಬದಲಾವಣೆ ಪ್ರಕ್ರಿಯೆ ಪ್ರಾರಂಭ ಮಾಡುತ್ತೇವೆ. ಯಾವುದೇ ನೀತಿ ಜಾರಿಗೆ ತರಬೇಕಾದರೆ ಮೂಲಭೂತ ಸೌಲಭ್ಯಗಳು ಇರಬೇಕು. ಅದಕ್ಕೆ ಬೇಕಾದ ಬೋಧಕ, ಬೋಧಕೇತರ ಸಿಬ್ಬಂದಿಗಳ ವ್ಯವಸ್ಥೆ ಮಾಡಿಕೊಳ್ಳಬೇಕಾಗುತ್ತದೆ. ಅದಕ್ಕೆ ಅನುದಾನ ಒದಗಿಸುವ ಬಗ್ಗೆ ತಯಾರಿ ಮಾಡಬೇಕಾಗುತ್ತದೆ” ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಅಲ್ಪಸಂಖ್ಯಾತರಿಗೆ ರೂಪಿಸಿದ್ದ ಕಾರ್ಯಕ್ರಮಗಳ ಪುನರಾರಂಭ: ಸಿಎಂ ಸಿದ್ದರಾಮಯ್ಯ ಭರವಸೆ

“ಖಾಸಗಿ ಸಂಸ್ಥೆಗಳಲ್ಲಿ ಒಂದು ರೀತಿ ಆದರೆ ಸರ್ಕಾರಿ ಸಂಸ್ಥೆಗಳಲ್ಲಿ ಮತ್ತೊಂದು ರೀತಿ ಆಗುತ್ತದೆ. ಈ ಎಲ್ಲ ವಿಚಾರಗಳ ಬಗ್ಗೆ ಹೆಚ್ಚಿನ ಅಧ್ಯಯನ ಮಾಡಿ ಹಂತ ಹಂತವಾಗಿ ಒಂದು ನೀತಿಗೆ ಬದಲಾವಣೆ ತರಬೇಕು” ಎಂದರು.

ಕೊಟ್ಟ ಮಾತಿನಂತೆ ನಡೆದಿದ್ದೇವೆ

“ಕೇಂದ್ರ ನಮ್ಮ ಕಾರ್ಯಕ್ರಮಗಳಿಗೆ ಅಡ್ಡಿಪಡಿಸುವ ಕೆಲಸ ಮಾಡಿದೆ. ಸಿಎಂ ಸಿದ್ದರಾಮಯ್ಯ ಅವರು ಕೊಟ್ಟ ಮಾತಿನಂತೆ ಜನರಿಗೆ ನಡೆದುಕೊಂಡಿದ್ದಾರೆ. ಈ ಉದ್ದೇಶದಿಂದ ನೇರವಾಗಿ 5 ಕೆಜಿ ಅಕ್ಕಿ ಬದಲು ಹಣ ಕೊಡುತ್ತೇವೆ. ಇದಕ್ಕೆ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ, ಬಹುತೇಕರು ಒಪ್ಪಿದ್ದಾರೆ. ಕೇಂದ್ರದ ಮೇಲೆ ಸಂಸದರು ಒತ್ತಡ ಹೇರಬಹುದಿತ್ತು. ಈಗ ಅದೇ ಪ್ರಶ್ನೆಯನ್ನು ಬಿಜೆಪಿಗೆ ನಿರಂತರವಾಗಿ ಕೇಳುತ್ತಿದ್ದೇವೆ” ಎಂದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...