ಬೀದರ್ | ಔರಾದ್ ಪಟ್ಟಣ ಪಂಚಾಯತಿಗೆ ಅಧ್ಯಕ್ಷ- ಉಪಾಧ್ಯಕ್ಷ ಅವಿರೋಧ ಆಯ್ಕೆ

Date:


ಔರಾದ್‌ ಪಟ್ಟಣ ಪಂಚಾಯತಿಯ 10ನೇ ಅವಧಿಗೆ ನೂತನ ಅಧ್ಯಕ್ಷರಾಗಿ ಬಿಜೆಪಿಯ ಸರುಬಾಯಿ ವೈಜಿನಾಥ ಘೂಳೆ ಮತ್ತು ಉಪಾಧ್ಯಕ್ಷರಾಗಿ ರಾಧಾಬಾಯಿ ಕೃಷ್ಣ ನರೋಟೆ ಅವರು ಅವಿರೋಧವಾಗಿ ಆಯ್ಕೆಯಾದರು.

ಒಟ್ಟು 20 ಸದಸ್ಯ ಬಲ ಹೊಂದಿರುವ ಪಟ್ಟಣ ಪಂಚಾಯತಿಯಲ್ಲಿ ಸಾಮಾನ್ಯ ಮಹಿಳೆಗೆ ಮೀಸಲಾಗಿದ್ದ ಅಧ್ಯಕ್ಷ ಹಾಗೂ ಉಪಾಧ್ಯಕ್ಷರ ಸ್ಥಾನಗಳಿಗೆ ಶುಕ್ರವಾರ ನಡೆದ ಚುನಾವಣೆಯಲ್ಲಿ ವಾರ್ಡ್-19ರ ಸದಸ್ಯೆ ಸರುಬಾಯಿ ವೈಜಿನಾಥ ಘೂಳೆ ಅಧ್ಯಕ್ಷ ಸ್ಥಾನಕ್ಕೆ ಮತ್ತು ವಾರ್ಡ್-1ರ ಸದಸ್ಯೆ ರಾಧಾಬಾಯಿ ಕೃಷ್ಣ ನರೋಟೆ ಉಪಾಧ್ಯಕ್ಷರ ಸ್ಥಾನಕ್ಕೆ ನಾಮಪತ್ರ ಸಲ್ಲಿಸಿದ್ದರು. ಬೇರೆ ಯಾವುದೇ ನಾಮಪತ್ರ ಸಲ್ಲಿಸದ ಕಾರಣಕ್ಕೆ ಇಬ್ಬರೂ ಅವಿರೋಧ ಆಯ್ಕೆ ಎಂದು ಚುನಾವಣಾಧಿಕಾರಿಗಳಾದ ಮಲಶೆಟ್ಟಿ ಚಿದ್ರೆ ಘೋಷಿಸಿದರು.

ಔರಾದ್ ಶಾಸಕ ಪ್ರಭು ಬಿ.ಚವ್ಹಾಣ ಅವರು ನೂತನ ಅಧ್ಯಕ್ಷ ಹಾಗೂ ಉಪಾಧ್ಯಕ್ಷರಿಗೆ ಸನ್ಮಾನಿಸಿ ಮಾತನಾಡಿ, ʼಔರಾದ(ಬಿ) ಪಟ್ಟಣವನ್ನು ಸರ್ವಾಂಗೀಣ ಅಭಿವೃದ್ಧಿಪಡಿಸಲು ನಿರಂತರ ಶ್ರಮ ವಹಿಸುತ್ತಿದ್ದೇನೆ. ಹೊಸದಾಗಿ ಆಯ್ಕೆಯಾದ ಅಧ್ಯಕ್ಷ ಹಾಗೂ ಉಪಾಧ್ಯಕ್ಷರು ಎಲ್ಲ ಸದಸ್ಯರ ಸಹಯೋಗದೊಂದಿಗೆ ಔರಾದ ಪಟ್ಟಣದ ಅಭಿವೃದ್ಧಿಗಾಗಿ ಶ್ರಮಿಸಬೇಕು. ಕುಡಿಯುವ ನೀರು, ರಸ್ತೆ, ವಿದ್ಯುತ್, ಸ್ವಚ್ಛತೆ, ಬೀದಿ ದೀಪಗಳನ್ನು ಅಳವಡಿಸುವುದು ಒಳಗೊಂಡಂತೆ ಪಟ್ಟಣದ ನಿವಾಸಿಗಳಿಗೆ ಅಗತ್ಯವಾಗಿರುವ ಎಲ್ಲ ಸೌಕರ್ಯಗಳನ್ನು ಒದಗಿಸಬೇಕು. ನಿಮ್ಮ ಎಲ್ಲ ಅಭಿವೃದ್ಧಿಪರ ಕೆಲಸಗಳಿಗೆ ನನ್ನ ಸಹಕಾರ ಸದಾ ಇರುತ್ತದೆ. ಪಟ್ಟಣವನ್ನು ಮಾದರಿಯನ್ನಾಗಿಸಲು ಕಾರ್ಯಪ್ರವೃತ್ತರಾಗಬೇಕುʼ ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಔರಾದ ಪಟ್ಟಣ ಪಂಚಾಯಿತಿಯನ್ನು ಪುರಸಭೆಯನ್ನಾಗಿಸಲು ಶ್ರಮಿಸುತ್ತಿದ್ದೇನೆ. ತಾಂತ್ರಿಕ ಕಾರಣಗಳಿಂದಾಗಿ ವಿಳಂಬವಾಗುತ್ತಿದೆ. ಮುಂದಿನ ದಿನಗಳಲ್ಲಿ ಪುರಸಭೆಯನ್ನಾಗಿ ಮಾಡಲಾಗುತ್ತದೆ. ಪಟ್ಟಣದಲ್ಲಿನ ಕುಡಿಯುವ ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು ಕಾರಂಜಾ ಜಲಾಶಯದಿಂದ ಪಟ್ಟಣಕ್ಕೆ ನೀರು ಪೂರೈಸುವ ಯೋಜನೆಗೆ ಮಂಜೂರಾತಿ ಸಿಕ್ಕಿದ್ದು, ಕೆಲಸ ಆರಂಭವಾಗಲಿದೆ. ಹೀಗೆ ಪಟ್ಟಣದ ಅಭಿವೃದ್ಧಿಗೆ ಸದಾ ಬದ್ಧನಾಗಿದ್ದು, ನೂತನ ಅಧ್ಯಕ್ಷರು ಮತ್ತು ಉಪಾಧ್ಯಕ್ಷರು ಪಟ್ಟಣದ ಜನತೆಯ ಸಮಸ್ಯೆಗಳಿಗೆ ಸ್ಪಂದಿಸಬೇಕು. ಯಾವುದೇ ರೀತಿಯ ದೂರುಗಳು ಬಾರದಂತೆ ಕೆಲಸ ಮಾಡಬೇಕುʼ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಬೀದರ ದಕ್ಷಿಣ ಕ್ಷೇತ್ರದ ಶಾಸಕ ಡಾ.ಶೈಲೇಂದ್ರ ಬೆಲ್ದಾಳೆ, ಜಿಲ್ಲಾಧ್ಯಕ್ಷ ಸೋಮನಾಥ ಪಾಟೀಲ, ಪ್ರಧಾನ ಕಾರ್ಯದರ್ಶಿ ಪೀರಪ್ಪ ಔರಾದೆ, ಕಿರಣ ಪಾಟೀಲ, ಮಂಡಲ ಅಧ್ಯಕ್ಷ ರಾಮಶೆಟ್ಟಿ ಪನ್ನಾಳೆ, ಮಂಡಲ ಉಸ್ತುವಾರಿ ಮಹೇಶ್ವರ ಸ್ವಾಮಿ, ಕಾರ್ಯದರ್ಶಿ ಖಂಡೋಬಾ ಕಂಗಟೆ, ಪಟ್ಟಣ ಪಂಚಾಯತ್ ಸದಸ್ಯರಾದ ಅಂಬಿಕಾ ಕೇರಬಾ ಪವಾರ್, ಸಂತೋಷ ಪೋಕಲವಾರ, ಧೊಂಡಿಬಾ ನರೋಟೆ, ಶಿವಾಜಿ ಲಕ್ಷ್ಮಣ, ಸಂಜುಕುಮಾರ ವಡೆಯಾರ್, ಅಬ್ಜಲ್ ಪಠಾಣ್, ಶೀಲಾಬಾಯಿ ರಾಮಚಂದ್ರ, ಸಂಗೀತಾ ಯಾದವರಾವ, ಪ್ರೇರಣಾ ಬಾಬು, ಬನಸಿಲಾಲ ಖಿರಾನಾಯ್ಕ, ದಯಾನಂದ ಘೂಳೆ, ಸುರೆಖಾ ಸುರ್ಯಕಾಂತ, ಗುಂಡಪ್ಪಾ ಮುದಾಳೆ, ಬಿಜೆಪಿ ರೈತ ಮೋರ್ಚಾ ಜಿಲ್ಲಾಧ್ಯಕ್ಷ ಶಿವರಾಜ ಅಲ್ಮಾಜೆ, ಮುಖಂಡರಾದ ರಮೇಶ ಉಪಾಸೆ, ಸಚಿನ ರಾಠೋಡ್, ಖಾಜಾಯಿಯ್ಯಾ, ಸಚಿನ್ ಬಿರಾದಾರ, ರವೀಂದ್ರ ರೆಡ್ಡಿ, ಪ್ರಕಾಶ ಜೀರ್ಗೆ, ರಾಜೇಂದ್ರ ಮಾಳಿ, ಬಸವರಾಜ ಹಳ್ಳೆ, ಗೋವಿಂದ ರೆಡ್ಡಿ, ಪ್ರದೀಪ ಪವಾರ್, ಸುಜಿತ್ ರಾಠೋಡ್, ಉದಯ ಸೋಲಾಪೂರೆ ಸೇರಿದಂತೆ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಔರಾದ್‌ | ಅಪ್ಪಟ ದೇಶಪ್ರೇಮಿ ಶಾಹೀದ್ ಭಗತ್ ಸಿಂಗ್

ಭಾರತದ ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ನಿದ್ದೆಗೆಡಿಸಿದ ಸಿಂಹಾಳಿಯಂತೆ ಗರ್ಜಿಸಿ ಭಾರತದ ಹಿರಿಮೆ ಗರಿಮೆಯನ್ನು...

ಬೀದರ್‌ | ಕಾರಂಜಾ ಸಂತ್ರಸ್ತರಿಗೆ ಕಾಲಮಿತಿಯಲ್ಲಿ ವಿಶೇಷ ಪ್ಯಾಕೇಜ್ ಘೋಷಿಸಿ

ಕಾರಂಜಾ ಸಂತ್ರಸ್ತರ ಸಮಸ್ಯೆ ಕುರಿತು ದಶಕಗಳಿಂದ ಹೋರಾಟ ನಡೆಯುತ್ತಿದ್ದು, ಸರ್ಕಾರಕ್ಕೂ ಈ...

ಬೀದರ್‌ನಲ್ಲಿ ಮಾ.25ರಂದು ಉದ್ಯೋಗ ಮೇಳ

ಬೀದರ್ ನಗರದ ನೌಬಾದ್‍ನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿಲ್ಲಾ ಉದ್ಯೋಗ...

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...