‘ಮಂಗಳೂರ ಸಮಾಚಾರ’ ಆರಂಭಿಸಿದ್ದ ಮೋಗ್ಲಿಂಗ್ ಸ್ಮಾರಕ ನಿರ್ಮಾಣವಾಗಲಿ : ಸದಾಶಿವ ಉಳ್ಳಾಲ್

Date:

ಕನ್ನಡದ ಪ್ರಥಮ ಪತ್ರಿಕೆ ‘ಮಂಗಳೂರ ಸಮಾಚಾರ’ ಮಂಗಳೂರಿನಲ್ಲಿ ಆರಂಭಗೊಂಡ ಹಿನ್ನೆಲೆಯಲ್ಲಿ ಪತ್ರಿಕೆಯ ಸ್ಥಾಪಕ ಸಂಪಾದಕ ಹರ್ಮನ್ ಮೋಗ್ಲಿಂಗ್ ಅವರ ಸ್ಮಾರಕ ಮಂಗಳೂರಿನಲ್ಲಿ ನಿರ್ಮಾಣವಾಗುವುದು ಅಗತ್ಯ ಎಂದು ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಸದಾಶಿವ ಉಳ್ಳಾಲ ಅವರು ಅಭಿಪ್ರಾಯಪಟ್ಟರು.

ಪತ್ರಿಕಾ ದಿನಾಚರಣೆ ಅಂಗವಾಗಿ ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ಮಂಗಳೂರಿನ ಬಲ್ಮಠದ ಥೀಯೊಲಾಜಿಕಲ್ ಕಾಲೇಜು ಆವರಣದಲ್ಲಿ ಏರ್ಪಡಿಸಿದ್ದ ಸಂಪಾದಕ ಹರ್ಮನ್ ಮೋಗ್ಲಿಂಗ್ ಅವರ ಪ್ರತಿಮೆಗೆ ಗೌರವಾರ್ಪಣೆ ಮಾಡುವ ಕಾರ್ಯಕ್ರಮದಲ್ಲಿ ಅವರು ಪಾಲ್ಗೊಂಡು ಮಾತನಾಡಿದರು.

ಮೋಗ್ಲಿಂಗ್ ಸ್ಮಾರಕ ನಿರ್ಮಾಣ ಮಾಡುವ ನಿಟ್ಟಿನಲ್ಲಿ ಜಿಲ್ಲಾಡಳಿತದೊಂದಿಗೆ ಚರ್ಚಿಸಿ ವಿಸ್ತೃತವಾದ ಸಮಾಲೋಚನಾ ಸಭೆ ನಡೆಸುವುದಾಗಿ ಸದಾಶಿವ ಉಳ್ಳಾಲ್ ಅವರು ಭರವಸೆ ನೀಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕರ್ನಾಟಕ ಗೇರು ಅಭಿವೃದ್ಧಿ ನಿಗಮದ ಅಧ್ಯಕ್ಷೆ ಮಮತಾ ಡಿ.ಎಸ್. ಗಟ್ಟಿ ಮಾತನಾಡಿ, ನ್ಯಾಯಯುತ ಹಾಗೂ ಸಮಾನತೆಯ ಸಮಾಜ ನಿರ್ಮಾಣದಲ್ಲಿ ಪತ್ರಿಕಾರಂಗ ಪ್ರಮುಖ ಪಾತ್ರ ವಹಿಸಿದೆ. ಕರ್ನಾಟಕದಲ್ಲಿ ಪತ್ರಿಕೋದ್ಯಮ ಆರಂಭಿಸಿದ ಮೊಗ್ಲಿಂಗ್ ಅವರು ಮಂಗಳೂರಿಗೂ ಹಿರಿಮೆ‌ ತಂದಿದ್ದಾರೆ ಎಂದರು.

ಇದನ್ನು ಓದಿದ್ದೀರಾ? ಚಿಕ್ಕಬಳ್ಳಾಪುರ | ʼಬಯಲು ಸೀಮೆಗಳಲ್ಲಿ ಕುಡಿಯುವ ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ನೀಡಿʼ

ಕರ್ನಾಟಕ ಥಿಯೋಲಾಜಿಕಲ್ ಕಾಲೇಜ್ ಪ್ರಿನ್ಸಿಪಾಲ್ ಡಾ. ಎಚ್.ಎಮ್. ವಾಟ್ಸನ್ ಅವರು ಮಾತನಾಡಿ, ಮಂಗಳೂರ ಸಮಾಚಾರ ಸಂಪಾದಕ ಮೋಗ್ಲಿಂಗ್ ಅವರ ಸ್ಮಾರಕ ಮಂಗಳೂರಿನಲ್ಲಿ ಶೀಘ್ರ ನಿರ್ಮಾಣವಾಗುವಂತಾಗಲಿ ಎಂದು ಆಶಯ ವ್ಯಕ್ತಪಡಿಸಿದರು.

ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಅಧ್ಯಕ್ಷ ತಾರಾನಾಥ್ ಗಟ್ಟಿ ಕಾಪಿಕಾಡ್, ಕರ್ನಾಟಕ ಕೊಂಕಣಿ ಅಕಾಡೆಮಿ ಅಧ್ಯಕ್ಷ ಸ್ಟ್ಯಾನಿ ಅಲ್ವಾರಿಸ್ ಶುಭಕೋರಿ ಮಾತನಾಡಿದರು. ಹಿರಿಯ ಪತ್ರಿಕಾ ಛಾಯಗ್ರಾಹಕ ವಿಶ್ವನಾಥ ಸುವರ್ಣ ಭಾಗವಹಿಸಿದ್ದರು.

ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ಸಮಿತಿ ಸದಸ್ಯರಾದ ಈಶ್ವರ್ ವಾರಣಾಸಿ, ಗಿರಿಧರ್ ಶೆಟ್ಟಿ, ಡೋನಾಲ್ಡ್ ಪಿಂಟೋ, ಹಮೀದ್ ವಿಟ್ಲ, ಶಿವಪ್ರಸಾದ್ ಆಲೆಟ್ಟಿ, ಗಣೇಶ್ ಕುಕ್ಕುದಡಿ, ಜಯಶ್ರೀ ಕೊಯಂಗೋಡಿ ಮೊದಲಾದವರು ಉಪಸ್ಥಿತರಿದ್ದರು. ಗೌರವಾಧ್ಯಕ್ಷ ಹರೀಶ್ ಬಂಟ್ವಾಳ್ ಸ್ವಾಗತಿಸಿ ಕಾರ್ಯಕ್ರಮ ನಿರ್ವಹಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...