ಚಿಂತಾಮಣಿ | ಬೊಲೆರೋ ಟೆಂಪೋ ಬಸ್ ನಡುವೆ ಅಪಘಾತ; ಚಾಲಕ ಸಾವು

Date:

ಬೊಲೆರೋ ಟೆಂಪೊಗೆ ಖಾಸಗಿ ಬಸ್‌ ಡಿಕ್ಕಿ ಹೊಡೆದ ಪರಿಣಾಮ ಟೆಂಪೋ ಚಾಲಕ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಚಿಂತಾಮಣಿ ತಾಲೂಕಿನ ಚೇಳೂರು ರಸ್ತೆಯ ಸಿದ್ದೇಪಲ್ಲಿ ಕ್ರಾಸ್‌ ಬಳಿ ಮಂಗಳವಾರ ಬೆಳಗ್ಗೆ 7 ಗಂಟೆ ಸಮಯದಲ್ಲಿ ನಡೆದಿದೆ.

ಚಿಕ್ಕಬಳ್ಳಾಪುರ ಜಿಲ್ಲೆಯ ಚೇಳೂರು ತಾಲೂಕಿನ ಪಾತಪಾಳ್ಯ ಸಮೀಪದ ಶಿವಪುರ ಗ್ರಾಮದ ರೆಡ್ಡಪ್ಪ(35) ಮೃತ ದುರ್ದೈವಿ. ಮಂಗಳವಾರ ಬೆಳಗ್ಗೆ ನೆರೆಯ ಆಂಧ್ರದಿಂದ ಚಿಂತಾಮಣಿ ಟೊಮೊಟೋ ಮಾರುಕಟ್ಟೆಗೆ ಟೊಮೊಟೋ ಸಾಗಿಸುತ್ತಿದ್ದ ಬೊಲೆರೋ ಟೆಂಪೋಗೆ ಚಿಂತಾಮಣಿ ಕಡೆಯಿಂದ ಆಂಧ್ರ ಕಡೆಗೆ ಚಲಿಸುತ್ತಿದ್ದ ಬಸ್‌ ಡಿಕ್ಕಿ ಹೊಡೆದಿದೆ. ಅಪಘಾತದ ರಭಸಕ್ಕೆ ಬೊಲೆರೋ ಟೆಂಪೋ ಚಾಲಕ ರೆಡ್ಡಪ್ಪ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಖಾಸಗಿ ಬಸ್‌ ಚಾಲಕ ಕಿರಣ್‌ ಹಾಗೂ ಇತರೆ ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಈ ಸುದ್ದಿ ಓದಿದ್ದೀರಾ? ಪಕ್ಷೇತರರ ಪಾಲಾದ ಗೌರಿಬಿದನೂರು ನಗರಸಭೆ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಅಪಘಾತದ ಹಿನ್ನೆಲೆ ರಸ್ತೆ ತುಂಭಾ ಟೊಮೊಟೋ ಚೆಲ್ಲಾಪಿಲ್ಲಿಯಾಗಿದ್ದ ಹಿನ್ನೆಲೆ ಕೆಲಕಾಲ ಸಂಚಾರ ಸ್ಥಗಿತಗೊಂಡಿತ್ತು. ಸ್ಥಳಕ್ಕಾಗಮಿಸಿದ ಕೆಂಚಾರ್ಲಹಳ್ಳಿ ಪೊಲೀಸರು ಟ್ರಾಫಿಕ್‌ ತೆರವುಗೊಳಿಸಿ ಸಂಚಾರಕ್ಕೆಅನುವು ಮಾಡಿಕೊಟ್ಟಿದ್ದಾರೆ. ಕೆಂಚಾರ್ಲಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...